
ಲಂಡನ್[ಡಿ.05]: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ, ಪ್ರಚಂಡ ವೇಗದ ಬೌಲರ್ ಬಾಬ್ ವಿಲ್ಲಿಸ್ ಬುಧವಾರ ನಿಧನರಾದರು ಎಂದು ಅವರ ಕುಟುಂಬ ಸದಸ್ಯರು ಖಚಿತಪಡಿಸಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ವಿಲ್ಲಿಸ್‌ಗೆ 70 ವರ್ಷ ವಯಸ್ಸಾಗಿತ್ತು.
ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ಸ್ಮಿತ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೊಹ್ಲಿ
1982ರಿಂದ 1984ರ ವರೆಗೂ ಇಂಗ್ಲೆಂಡ್ ತಂಡದ ನಾಯಕರಾಗಿದ್ದ ವಿಲ್ಲಿಸ್, 90 ಟೆಸ್ಟ್ ಪಂದ್ಯಗಳನ್ನು ಆಡಿ 325 ವಿಕೆಟ್‌ಗಳನ್ನು ಕಬಳಿಸಿದ್ದರು. ಇಂಗ್ಲೆಂಡ್ ಪರ ಟೆಸ್ಟ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ವಿಲ್ಲಿಸ್ 4ನೇ ಸ್ಥಾನದಲ್ಲಿದ್ದಾರೆ. ಆಸ್ಪ್ರೇಲಿಯಾ ವಿರುದ್ಧ ಆ್ಯಷಸ್ ಪಂದ್ಯವೊಂದರಲ್ಲಿ 43 ರನ್‌ಗೆ 8 ವಿಕೆಟ್ ಕಬಳಿಸಿದ್ದು ಅವರ ಶ್ರೇಷ್ಠ ಪ್ರದರ್ಶನವೆನಿಸಿತ್ತು. ಇಂಗ್ಲೆಂಡ್ ಪರ 64 ಏಕದಿನ ಪಂದ್ಯಗಳನ್ನೂ ಆಡಿದ್ದ ಅವರು, 80 ವಿಕೆಟ್ ಪಡೆದಿದ್ದರು.
ವಾಹನ ಚಾಲಕನ ಮಗ ಈಗ ಅಂಡರ್-19 ವಿಶ್ವಕಪ್ ತಂಡದ ನಾಯಕ!
ದೇಶಿ ಟೂರ್ನಿಯಲ್ಲಿ 308 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದ ಬಾಬ್ ವಿಲ್ಲಿಸ್ ಬರೋಬ್ಬರಿ 899 ವಿಕೆಟ್ ಪಡೆದಿದ್ದರು. ಇನ್ನು ಬಾಬ್ ನಿಧನಕ್ಕೆ ಐಸಿಸಿ, ಬ್ರಿಯನ್ ಲಾರಾ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.