ಕೊರೋನಾದಿಂದ ಐಸಿಸಿ ಟಿ20 ವಿಶ್ವಕಪ್ ಮುಂದಕ್ಕೆ..?

Suvarna News   | Asianet News
Published : Mar 27, 2020, 09:23 AM IST
ಕೊರೋನಾದಿಂದ ಐಸಿಸಿ ಟಿ20 ವಿಶ್ವಕಪ್ ಮುಂದಕ್ಕೆ..?

ಸಾರಾಂಶ

ಈಗಾಗಲೇ ಕೊರೋನಾ ವೈರಸ್ ಹಲವು ಕ್ರೀಡಾಕೂಟಗಳನ್ನು ನುಂಗಿ ನೀರು ಕುಡಿದಿದೆ. ಇದೀಗ ಕೋವಿಡ್ 19 ಕಣ್ಣು ಐಸಿಸಿ ಪುರುಷರ ಟಿ20  ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೇಲೆ ಬಿದ್ದಿದೆ. ಹೀಗಾಗಿ ಚುಟುಕು ವಿಶ್ವಕಪ್ ಟೂರ್ನಿ ಮುಂದೂಡಲ್ಪಟ್ಟರೂ ಅಚ್ಚರಿ ಪಡಬೇಕಿಲ್ಲ. ಈ ಕುರಿತಾದ ವರದಿ ಇಲ್ಲಿದೆ ನೋಡಿ. 

ದುಬೈ(ಮಾ.27): ಜಾಗತಿಕ ಪಿಡುಗು ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟವನ್ನೇ ಒಂದು ವರ್ಷ ಮುಂದೂಡಲಾಗಿದೆ.

ಭಾರತ ಲಾಕ್‌ಡೌನ್: ಮನೆಯಲ್ಲೇ ಇರಿ, ರನೌಟ್ ಆಗ್ಬೇಡಿ, ಜಡ್ಡು ವಿಚಿತ್ರ ವಿಡಿಯೋ ಸಂದೇಶ..!

ಅಕ್ಟೋಬರ್, ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ನಡೆಯಬೇಕಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಚುಟುಕು ಕ್ರಿಕೆಟ್‌ ವಿಶ್ವಕಪ್ ಟೂರ್ನಿಯನ್ನು ಐಸಿಸಿ ಮುಂದೂಡುವ ಸಾಧ್ಯತೆಯಿದೆ. ಇನ್ನು  2021ರಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಿಗಧಿಯಾಗಿದ್ದು, ಒಂದೇ ವರ್ಷದಲ್ಲಿ ಎರಡೆರಡು ಟಿ20 ವಿಶ್ವಕಪ್ ಟೂರ್ನಿಗಳನ್ನು ಆಯೋಜಿಸಬೇಕಾದ ಅನಿವಾರ್ಯತೆಗೆ ಐಸಿಸಿ ಒಳಗಾಗಬಹುದು ಎನ್ನಲಾಗಿದೆ.

ಟಿ20 ವಿಶ್ವಕಪ್ ಆಡದೆಯೇ ನಿವೃತ್ತಿಯಾಗ್ತಾರಾ ಧೋನಿ..?

ಗುರುವಾರ 2021ರ ಟಿ20 ವಿಶ್ವಕಪ್‌ನ್ ಅರ್ಹತಾ ಟೂರ್ನಿಗಳನ್ನು ಜೂನ್ 30 ರವರೆಗೆ ಐಸಿಸಿ ಮುಂದೂಡಿದೆ. ಒಟ್ಟಿನಲ್ಲಿ ಕೊರೋನಾ ಪಿಡುಗು ಬರೀ ಜನರನ್ನಷ್ಟೇ ಬಲಿ ಪಡೆದಿಲ್ಲ, ಮಹತ್ವದ ಕ್ರೀಡಾ ಟೂರ್ನಿಗಳ ಪಾಲಿಗೂ ಕಂಠಕವಾಗಿ ಪರಿಣಮಿಸಿದೆ.

ಶುಕ್ರವಾರ(ಮಾ.27) ಬೆಳಗಿನ ಅಂಕಿ-ಅಂಶದಂತೆ ಇದುವರೆಗೂ 5,32 ಲಕ್ಷ ಜನರಿಗೆ ಕೋವಿಡ್ 19 ಸೋಂಕು ತಗುಲಿದ್ದು, 24 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ. ಇನ್ನು ಭಾರತದಲ್ಲಿ 727 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, 20 ಮಂದಿ ಜೀವ ಕಳೆದುಕೊಂಡಿದ್ದಾರೆ. ಈಗಾಗಲೇ ಹಲವು ಕ್ರೀಡಾ ತಾರೆಯರು ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ