
ICC Player of the Month Prize Money: ವರ್ಷದ ಪ್ರತಿತಿಂಗಳು ಹಲವು ಕ್ರಿಕೆಟಿಗರು ಅದ್ಭುತ ಪ್ರದರ್ಶನ ತೋರುವ ಮೂಲಕ ಗಮನ ಸೆಳೆಯುತ್ತಲೇ ಬರುತ್ತಿದ್ದಾರೆ. ಈ ಮೂಲಕ ತಮ್ಮ ಪ್ರತಿಭೆಯನ್ನು ಹೊರಹಾಕುವುದರ ಜತೆಗೆ ತಂಡದ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇಂತಹ ಸಾಧಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಐಸಿಸಿ ತಿಂಗಳ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಭಾರತದ ಶುಭ್ಮನ್ ಗಿಲ್ ಹಾಗೂ ಶಫಾಲಿ ವರ್ಮಾ ಕ್ರಮವಾಗಿ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೀಗ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದವರಿಗೆ ಎಷ್ಟು ನಗದು ಬಹುಮಾನ ನಿಗಲಿದೆ ಎನ್ನುವ ಕುತೂಹಲ ನಿಮಗೂ ಕಾಡುತ್ತಿರಬಹುದು ಅಲ್ಲವೇ?
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಿಂಗಳಿನಲ್ಲಿ ಅದ್ಭುತ ಪ್ರದರ್ಶನ ತೋರಿದ ಓರ್ವ ಆಟಗಾರ/ಆಟಗಾರ್ತಿಗೆ ಐಸಿಸಿ ತಿಂಗಳ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾದ ಆಟಗಾರರಿಗೆ ನಿರ್ದಿಷ್ಟವಾಗಿ ಎಷ್ಟು ನಗದು ಬಹುಮಾನ ಸಿಗಲಿದೆ ಎನ್ನುವುದನ್ನು ಐಸಿಸಿ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಇದೀಗ ಸೆಪ್ಟೆಂಬರ್ ತಿಂಗಳ ಐಸಿಸಿ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗಿಲ್ 110 ರನ್ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಅಜೇಯ 223 ರನ್ ಸಿಡಿಸಿದ್ದರು. ಈ ಮೂಲಕ ಕೇವಲ ಎರಡು ಪಂದ್ಯಗಳಿಂದಲೇ ಗಿಲ್ 333 ರನ್ ಚಚ್ಚಿದ್ದರು. ಗಿಲ್ ಅವರ ಈ ಅಸಾಧಾರಣ ಪ್ರದರ್ಶನಕ್ಕೆ ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದರು. ಅಂದಹಾಗೆ ಇದು ಗಿಲ್ ಗೆದ್ದ ಐದನೇ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಯಾಗಿದೆ.
ಇನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಡ್ಯಾಷಿಂಗ್ ಓಪನ್ನರ್ ಶಫಾಲಿ ವರ್ಮಾ, ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ 236 ರನ್ ಸಿಡಿಸಿದ್ದರು. ಅದರಲ್ಲೂ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ಎದುರು ಶಫಾಲಿ ಕೇವಲ 49 ಎಸೆತಗಳಲ್ಲಿ ಅಜೇಯ ಶತಕ ಸಿಡಿಸಿದ್ದರು. ಇದರೊಂದಿಗೆ ಶಫಾಲಿ ವರ್ಮಾ ಎರಡನೇ ಬಾರಿಗೆ ಐಸಿಸಿ ತಿಂಗಳ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಪಾತ್ರರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.