
ದುಬೈ(ಏ.05): ಐಸಿಸಿ ಏಕದಿನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಕೆಲ ಮಹತ್ವದ ಬದಲಾವಣೆಗಳಾಗಿದೆ. ಹೊಸದಾಗಿ ಬಿಡುಗಡೆ ಮಾಡಿರುವ ರ್‍ಯಾಂಕಿಂಗ್ ಪಟ್ಟಿಯ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಮೂವರು ಬ್ಯಾಟ್ಸ್‌ಮನ್ ಕಾಣಿಸಿಕೊಂಡಿದ್ದಾರೆ. ಐಪಿಎಲ್ 2023 ಟೂರ್ನಿಯಲ್ಲಿ ಅಬ್ಬರಿಸುತ್ತಿರುವ ಶುಭಮನ್ ಗಿಲ್ ಏಕದಿನ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ. 738 ರೇಟಿಂಗ್ ಪಾಯಿಂಟ್ಸ್ ಪಡೆದಿರುವ ಶುಭಮನ್ ಗಿಲ್, 3ನೇ ಸ್ಥಾನದಲ್ಲಿರುವ ಪಾಕಿಸ್ತಾನದ ಇಮಾಮ್ ಉಲ್ ಹಕ್‌ಗಿಂತ ಕೇವಲ 2 ರೇಟಿಂಗ್ ಪಾಯಿಂಟ್ಸ್ ಕಡಿಮೆ ಹೊಂದಿದ್ದಾರೆ. ಇತ್ತ ನಾಲ್ಕನೇ ಸ್ಥಾನದಲ್ಲಿದ್ದ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ 7ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. 7ನೇ ಸ್ಥಾನದಲ್ಲಿದ್ದ ಕೊಹ್ಲಿ ಇದೀಗ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇತ್ತ ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದಾರೆ.
ವಿರಾಟ್ ಅನುಷ್ಕಾ ದಂಪತಿ ಫೋಟೋಗಳಲ್ಲಿ ಅಷ್ಟು ಹಲ್ಲು ಕಿಸಿಯೋದ್ಯಾಕೆ?
ಬೌಲಿಂಗ್ ವಿಭಾಗದಲ್ಲಿ ಭಾರತದ ಏಕೈಕ ಬೌಲರ್ ಕಾಣಿಸಿಕೊಂಡಿದ್ದಾರೆ. ವೇಗಿ ಮೊಹಮ್ಮದ್ ಸಿರಾಜ್ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಟ್ರೆಂಟ್ ಬೋಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ ಪಟ್ಟಿಯಲ್ಲಿ ಯಾರೊಬ್ಬರು ಸ್ಥಾನ ಪಡೆದಿಲ್ಲ.
ಟಿ20 ರ್‍ಯಾಂಕಿಂಗ್ ಪಟ್ಟಿ
ಟಿ20 ರ್‍ಯಾಂಕಿಂಗ್ ಪಟ್ಟಿಯ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಸೂರ್ಯಕುಮರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ 906 ರೇಟಿಂಗ್ ಪಾಯಿಂಟ್ಸ್ ಪಡೆದಿದ್ದಾರೆ. ಟಿ20 ಬ್ಯಾಟಿಂಗ್ ವಿಭಾಗದಲ್ಲಿ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಭಾರತದ ಏಕೈಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್. ಟಿ20 ಬೌಲಿಂಗ್ ವಿಭಾಗದಲ್ಲಿ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಆಟಾಗಾರರು ಕಾಣಿಸಿಕೊಂಡಿಲ್ಲ. ಇತ್ತ ಅಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಸ್ಥಾನದಲ್ಲಿದ್ದಾರೆ.
IPL 2023 ಪಂತ್ ಚಿಯರ್‌ಅಪ್ ನಡುವೆಯೂ ಡೆಲ್ಲಿಗೆ ಮತ್ತೊಂದು ಸೋಲು, ಮೊದಲ ಸ್ಥಾನಕ್ಕೇರಿದ ಟೈಟಾನ್ಸ್!
ಟೆಸ್ಟ್ ರ್‍ಯಾಂಕಿಂಗ್ ಪಟ್ಟಿ
ಟೆಸ್ಟ್ ರ್‍ಯಾಂಕಿಂಗ್ ಪಟ್ಟಿಯ ಬ್ಯಾಟಿಂಗ್ ವಿಭಾಗದ ಟಾಪ್ 10 ಪಟ್ಟಿಯಲ್ಲಿ ಟೀಂ ಇಂಡಿಯಾದ ಏಕೈಕ ಬ್ಯಾಟ್ಸ್‌ಮನ್ ಕಾಣಿಸಿಕೊಂಡಿದ್ದಾರೆ. 9ನೇ ಸ್ಥಾನದಲ್ಲಿರುವ ರಿಷಬ್ ಪಂತ್ ಹೊರತು ಪಡಿಸಿದರೆ, ಇನ್ಯಾವುದೇ ಬ್ಯಾಟ್ಸ್‌ಮನ್ ಬ್ಯಾಟಿಂಗ್ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಬೌಲಿಂಗ್ ವಿಭಾಗದಲ್ಲಿ ಇಬ್ಬರು ಭಾರತೀಯರು ಕಾಣಿಸಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ರವೀಂದ್ರ ಜಡೇಜಾ 9ನೇ ಸ್ಥಾನದಲ್ಲಿದ್ದಾರೆ. ಅಲ್ರೌಂಡರ್ ಪಟ್ಟಿಯಲ್ಲೂ ಇಬ್ಬರು ಭಾರತೀಯರು ಕಾಣಿಸಿಕೊಂಡಿದ್ದಾರೆ. ಆರ್ ಅಶ್ವಿನ್ ಮೊದಲ ಸ್ಥಾನ ಅಲಂಕರಿಸಿದ್ದರೆ, ಅಕ್ಸರ್ ಪಟೇಲ್ 3ನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.