ಬಾಂಗ್ಲಾದೇಶಕ್ಕೆ ಪರಿಷ್ಕತ ಗುರಿ
16 ಓವರ್‌ನಲ್ಲಿ 151 ರನ್‌ಗಳ ಸವಾಲಿನ ಗುರಿ
ಅಡಿಲೇಡ್(ನ.02): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದು, ಓವರ್‌ಗಳನ್ನು ಕಡಿತಗೊಳಿಸಿ ಪಂದ್ಯ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಭಾರತ ನೀಡಿದ್ದ 185 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 7 ಓವರ್ ಅಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 66 ರನ್ ಬಾರಿಸಿತ್ತು. ಈ ವೇಳೆ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಇದೀಗ ಬಾಂಗ್ಲಾದೇಶಕ್ಕೆ ಪರಿಷ್ಕೃತ ಗುರಿ ನೀಡಲಾಗಿದ್ದು, 16 ಓವರ್‌ನಲ್ಲಿ 151 ರನ್ ಕಲೆ ಹಾಕಬೇಕಿದೆ.
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ಅಡಿಲೇಡ್ ಓವಲ್ ಮೈದಾನ ಆತಿಥ್ಯವನ್ನು ವಹಿಸಿದೆ. ಟೀಂ ಇಂಡಿಯಾ ನೀಡಿದ್ದ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು ಸ್ಪೋಟಕ ಆರಂಭವನ್ನೇ ಪಡೆದಿದೆ. ಮೊದಲ ಪವರ್ ಪ್ಲೇ ನಲ್ಲಿ ಬಾಂಗ್ಲಾದೇಶ ತಂಡವು ವಿಕೆಟ್ ನಷ್ಟವಿಲ್ಲದೇ 60 ರನ್ ಬಾರಿಸುವ ಮೂಲಕ ಭರ್ಜರಿ ಆರಂಭವನ್ನೇ ಪಡೆಯಿತು. ಟೀಂ ಇಂಡಿಯಾದ ತ್ರಿವಳಿ ವೇಗಿಗಳಾದ ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ಆರ್ಶದೀಪ್ ಸಿಂಗ್ ಎದುರು ಲಿಟನ್ ದಾಸ್ ಮೈ ಚಳಿ ಬಿಟ್ಟು ಬ್ಯಾಟ್ ಬೀಸಿದರು. 7 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ ತಂಡವು ವಿಕೆಟ್ ನಷ್ಟವಿಲ್ಲದೇ 66 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದರಿಂದಾಗಿ, ಕೆಲಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು
Play to resume soon in Adelaide 🙌
The revised target for Bangladesh is 151 from 16 overs 👀 | | 📝: https://t.co/vDRjKeeGvf pic.twitter.com/J0qqus3Tmg
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಮೂರನೇ ಓವರ್‌ನಲ್ಲಿ ಸಿಕ್ಕಿದ ಜೀವದಾನವನ್ನು ಸದುಪಯೋಗಪಡಿಸಿಕೊಳ್ಳಲು ರೋಹಿತ್ ಶರ್ಮಾ ವಿಫಲವಾದರು. ರೋಹಿತ್ ಶರ್ಮಾ 8 ಎಸೆತಗಳನ್ನು ಎದುರಿಸಿ ಕೇವಲ 2 ರನ್ ಬಾರಿಸಿ ಹಸನ್ ಮಹಮೂದ್‌ಗೆ ವಿಕೆಟ್ ಒಪ್ಪಿಸಿದರು.
T20 World Cup ಇಂಡೋ-ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿ..! ಟೀಂ ಇಂಡಿಯಾ ಪಾಳಯದಲ್ಲಿ ಆತಂಕ
ಆರಂಭಿಕ ಬ್ಯಾಟರ್ ಕೆ.ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬಾರಿಸಿದ ಸ್ಪೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಬಾರಿಸಿದ್ದು, ಬಾಂಗ್ಲಾದೇಶ ತಂಡಕ್ಕೆ ಕಠಿಣ ಗುರಿ ನೀಡಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಪ್ರವೇಶಿಸುವ ನಿಟ್ಟಿನಲ್ಲಿ ಭಾರತದ ಪಾಲಿಗೆ ಮಹತ್ವದ ಪಂದ್ಯ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ತನ್ನ ಪ್ರಾಬಲ್ಯವನ್ನು ಅನಾವರಣ ಮಾಡಿತ್ತು.