T20 World Cup ಆಫ್ಘಾನ್ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

By Naveen Kodase  |  First Published Oct 22, 2022, 4:24 PM IST

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಆಫ್ಘಾನಿಸ್ತಾನ ವಿರುದ್ದ ಗೆಲುವಿನ ನಿರೀಕ್ಷೆಯಲ್ಲಿ ಇಂಗ್ಲೆಂಡ್
ಈ ಪಂದ್ಯಕ್ಕೆ ಪರ್ತ್ ಸ್ಟೇಡಿಯಂ ಆತಿಥ್ಯ


ಪರ್ತ್‌(ಅ.22): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಆಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಈ ಪಂದ್ಯಕ್ಕೆ ಪರ್ತ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದ್ದು, ಇಂಗ್ಲೆಂಡ್ ತಂಡವು ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಇಂಗ್ಲೆಂಡ್ ತಂಡವು ಸಾಕಷ್ಟು ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವು ಸೆಮಿಫೈನಲ್ ಪ್ರವೇಶಿಸಿತ್ತು. ಇತ್ತೀಚೆಗೆ ಮುಗಿದ ಪಾಕಿಸ್ತಾನ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಟಿ20 ಸರಣಿ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಇಂಗ್ಲೆಂಡ್ ತಂಡವು, ಭರ್ಜರಿ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. 2010ರಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಇಂಗ್ಲೆಂಡ್ ತಂಡವು, ಆಫ್ಘಾನ್ ಬೌಲರ್‌ಗಳಾದ ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್ ಹಾಗೂ ಮೊಹಮ್ಮದ್ ನಬಿ ಬೌಲಿಂಗ್ ಯಾವ ರೀತಿ ಎದುರಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Latest Videos

undefined

T20 World Cup ಕಿವೀಸ್ ಎದುರು ಹೀನಾಯ ಸೋಲುಂಡ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ..!

ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಫ್ಘಾನಿಸ್ತಾನ ತಂಡವು ಕ್ರಿಸ್ ವೋಕ್ಸ್‌, ಮಾರ್ಕ್‌ ವುಡ್, ಬೆನ್ ಸ್ಟೋಕ್ಸ್ ಅವರಂತ ವಿಶ್ವದರ್ಜೆಯ ಬೌಲರ್‌ಗಳೆದುರು ಯಾವ ರೀತಿ ಹೋರಾಟ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಇಂಗ್ಲೆಂಡ್ ಎದುರು ದಿಟ್ಟ ಹೋರಾಟ ನೀಡಬೇಕಿದ್ದರೆ, ಆಫ್ಘಾನಿಸ್ತಾನ ತಂಡವು ಕನಿಷ್ಟ 150+ ರನ್ ದಾಖಲಿಸಬೇಕಿದೆ. ಇಂಗ್ಲೆಂಡ್ ತಂಡದಲ್ಲಿ ಜೋಸ್ ಬಟ್ಲರ್, ಅಲೆಕ್ಸ್ ಹೇಲ್ಸ್‌, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮೋಯಿನ್ ಅಲಿ, ಹ್ಯಾರಿ ಬ್ರೂಕ್ಸ್‌ ಸೇರಿದಂತೆ ಸಾಕಷ್ಟು ವಿಶ್ವದರ್ಜೆಯ ಬ್ಯಾಟರ್‌ಗಳನ್ನು ಹೊಂದಿದೆ.ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಫ್ಘಾನಿಸ್ತಾನ ತಂಡವು ಕ್ರಿಸ್ ವೋಕ್ಸ್‌, ಮಾರ್ಕ್‌ ವುಡ್, ಬೆನ್ ಸ್ಟೋಕ್ಸ್ ಅವರಂತ ವಿಶ್ವದರ್ಜೆಯ ಬೌಲರ್‌ಗಳೆದುರು ಯಾವ ರೀತಿ ಹೋರಾಟ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಇಂಗ್ಲೆಂಡ್ ಎದುರು ದಿಟ್ಟ ಹೋರಾಟ ನೀಡಬೇಕಿದ್ದರೆ, ಆಫ್ಘಾನಿಸ್ತಾನ ತಂಡವು ಕನಿಷ್ಟ 150+ ರನ್ ದಾಖಲಿಸಬೇಕಿದೆ. ಇಂಗ್ಲೆಂಡ್ ತಂಡದಲ್ಲಿ ಜೋಸ್ ಬಟ್ಲರ್, ಅಲೆಕ್ಸ್ ಹೇಲ್ಸ್‌, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮೋಯಿನ್ ಅಲಿ, ಹ್ಯಾರಿ ಬ್ರೂಕ್ಸ್‌ ಸೇರಿದಂತೆ ಸಾಕಷ್ಟು ವಿಶ್ವದರ್ಜೆಯ ಬ್ಯಾಟರ್‌ಗಳನ್ನು ಹೊಂದಿದೆ.

ತಂಡಗಳು ಹೀಗಿವೆ ನೋಡಿ

ಆಫ್ಘಾನಿಸ್ತಾನ
ಹಝರತುಲ್ಲಾ ಝಝಾಯಿ, ರೆಹಮನ್ನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಉಸ್ಮಾನ್ ಘನಿ, ನಜಿಬುಲ್ಲಾ ಜ್ರದಾನ್, ಮೊಹಮ್ಮದ್ ನಬಿ(ನಾಯಕ), ಅಜ್ಮತ್ತುಲ್ಲಾ ಒಮರಾಜಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ಫರೀದ್ ಅಹಮ್ಮದ್ ಮಲಿಕ್, ಫಝಲ್‌ಹಕ್ ಫಾರೂಕಿ

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್(ನಾಯಕ&ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್‌, ಹ್ಯಾರಿ ಬ್ರೂಕ್, ಮೋಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್‌, ಆದಿಲ್ ರಶೀದ್, ಮಾರ್ಕ್‌ ವುಡ್‌.

click me!