T20 World Cup 2022: ಇಲ್ಲಿದೆ ನೋಡಿ ಟೀಂ ಇಂಡಿಯಾ ವೇಳಾಪಟ್ಟಿ, ಪಂದ್ಯ ಆರಂಭ, ತಂಡದ ಕಂಪ್ಲೀಟ್‌ ಡೀಟೈಲ್ಸ್‌

By Naveen KodaseFirst Published Oct 13, 2022, 3:32 PM IST
Highlights

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭ
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್ ಮಹಾ ಸಂಗ್ರಾಮ
ಅಕ್ಟೋಬರ್ 23ರಂದು ಭಾರತಕ್ಕೆ ಪಾಕಿಸ್ತಾನ ಮೊದಲ ಎದುರಾಳಿ

ಬೆಂಗಳೂರು(ಅ.13): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಹೊಸ ಹುರುಪಿನೊಂದಿಗೆ ಆಸ್ಟ್ರೇಲಿಯಾಗೆ ಬಂದಿಳಿದಿದೆ. ಆಸ್ಟ್ರೇಲಿಯಾ ವಾತಾವರಣಕ್ಕೆ ಹೊಂದಿಕೊಳ್ಳುವ ಉದ್ದೇಶದಿಂದ ಟೀಂ ಇಂಡಿಯಾ, ತಾನಾಡುವ ಮೊದಲ ಟಿ20 ವಿಶ್ವಕಪ್ ಪಂದ್ಯಕ್ಕೂ 15 ದಿನ ಮುಂಚಿತವಾಗಿಯೇ ಕಾಂಗರೂ ನಾಡಿನಲ್ಲಿ ಅಭ್ಯಾಸ ಆರಂಭಿಸಿದೆ. 

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ 2022ರ ಐಸಿಸಿ ಟಿ20 ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್‌ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ ವಿಮಾನವೇರುವ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಎದುರು ಟಿ20 ಸರಣಿ ಗೆದ್ದು ಆತ್ಮವಿಶ್ವಾಸದಿಂದ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗಿದೆ. ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡವು ಗ್ರೂಪ್ ಹಂತದಲ್ಲಿಯೇ ಹೊರಬಿದ್ದು ಮುಖಭಂಗ ಅನುಭವಿಸಿತ್ತು.

T20 World Cup ಟೂರ್ನಿಯಿಂದ ದೀಪಕ್ ಚಹರ್ ಔಟ್; ಶಮಿ/ಸಿರಾಜ್/ಶಾರ್ದೂಲ್ ಮೂವರಲ್ಲಿ ಯಾರಿಗೆ ಸಿಗಲಿದೆ ಸ್ಥಾನ?

2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಭಾರತ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಲು ಸಾಧ್ಯವಾಗಿಲ್ಲ. ಈ ಬಾರಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಚುಟುಕು ಕ್ರಿಕೆಟ್ ವಿಶ್ವಕಪ್ ಜಯಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ವೇಳಾಪಟ್ಟಿ ಹೀಗಿದೆ ನೋಡಿ

23-10-22: ಭಾರತ-ಪಾಕಿಸ್ತಾನ-ಭಾನುವಾರ- 1:30 PM (ಭಾರತೀಯ ಕಾಲಮಾನ)

27-10-22: ಭಾರತ- ಗ್ರೂಪ್ 'ಎ' ರನ್ನರ್ ಅಪ್ ತಂಡ - ಗುರುವಾರ - 12:30 PM

30-10-22: ಭಾರತ - ದಕ್ಷಿಣ ಆಫ್ರಿಕಾ - ಭಾನುವಾರ - 4:30 PM

02-11-22: ಭಾರತ - ಬಾಂಗ್ಲಾದೇಶ - ಬುಧವಾರ - 1:30 PM

06-11-22: ಭಾರತ -   ಗ್ರೂಪ್ 'ಬಿ' ವಿನ್ನರ್ ತಂಡ - ಭಾನುವಾರ - 1:30 PM

ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶದೀಪ್ ಸಿಂಗ್.

ಮೀಸಲು ಆಟಗಾರರು:

ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

click me!