ICC T20 World Cup 2022 ಗೆಲ್ಲಬಲ್ಲ ತಂಡದ ಬಗ್ಗೆ ಭವಿಷ್ಯ ನುಡಿದ ಮೈಕಲ್‌ ಬೆವನ್..!

By Naveen Kodase  |  First Published Oct 5, 2022, 1:52 PM IST

* ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 16ರಿಂದ ಆರಂಭ
* ಪ್ರಶಸ್ತಿ ಗೆಲ್ಲಬಲ್ಲ ನೆಚ್ಚಿನ ತಂಡಗಳನ್ನು ಹೆಸರಿಸಿದ ಮೈಕಲ್ ಬೆವನ್‌
* ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ಆತಿಥ್ಯ


ಮೆಲ್ಬೊರ್ನ್‌(ಅ.05): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೆ ಈ ಬಾರಿ ಟಿ20 ವಿಶ್ವಕಪ್‌ ಯಾವ ತಂಡ ಗೆಲ್ಲಲಿದೆ ಎನ್ನುವ ಲೆಕ್ಕಾಚಾರ ಜೋರಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕಲ್ ಬೆವನ್‌, ಈ ಬಾರಿ ಆಸ್ಟ್ರೇಲಿಯಾ ಸೇರಿದಂತೆ ಮೂರು ತಂಡಗಳ ಪೈಕಿ ಒಂದು ತಂಡ ಟಿ20 ಟ್ರೋಫಿಗೆ ಮುತ್ತಿಕ್ಕಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ಆತಿಥ್ಯವನ್ನು ವಹಿಸಲಿದ್ದು, ಅಕ್ಟೋಬರ್ 16ರಿಂದ ಟೂರ್ನಿ ಆರಂಭವಾಗಲಿದೆ. ಈ ಬಾರಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಭಾರತ ಹಾಗೂ ಇಂಗ್ಲೆಂಡ್ ತಂಡಗಳ ಪೈಕಿ ಒಂದು ತಂಡವು ಈ ಬಾರಿ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸಲಿದೆ ಎಂದು ಮೈಕಲ್ ಬೆವನ್ ಅಭಿಪ್ರಾಯಪಟ್ಟಿದ್ದಾರೆ. 

Tap to resize

Latest Videos

undefined

ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆದಂತೆ ಈ ಬಾರಿಯೂ ಆ್ಯರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಸಾಧ್ಯತೆಯಿದೆ. ಕಳೆದ ವರ್ಷ ಆಸ್ಟ್ರೇಲಿಯಾವು ಪ್ರಶಸ್ತಿ ಜಯಿಸುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರಲಿಲ್ಲ, ಆದರೆ ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು, ಆಸ್ಟ್ರೇಲಿಯಾ ಟ್ರೋಫಿ ಜಯಿಸಿತ್ತು ಎಂದು ಬೆವನ್ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ದೇಶವನ್ನೇ ಬಿಟ್ಟು, ಈ ಬಾರಿ T20 World Cup ಗೆಲ್ಲಬಲ್ಲ 2 ನೆಚ್ಚಿನ ತಂಡಗಳನ್ನು ಹೆಸರಿಸಿದ ಮೋಯಿನ್ ಅಲಿ..!

ಇನ್ನೊಂದೆಡೆ ಬಾಬರ್ ಅಜಂ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು, ಪಾಕಿಸ್ತಾನ ವಿರುದ್ದ 4-3 ಅಂತರದಲ್ಲಿ ಟಿ20 ಸರಣಿ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಇಂಗ್ಲೆಂಡ್ ತಂಡದಲ್ಲಿ ಜೋಸ್ ಬಟ್ಲರ್, ಬೆನ್ ಸ್ಟೋಕ್ಸ್‌ ಅವರಂತಹ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲೂ ಇಂಗ್ಲೆಂಡ್ ಭರ್ಜರಿ ಪ್ರದರ್ಶನ ತೋರಿದೆ. ಹೀಗಾಗಿ ಇಂಗ್ಲೆಂಡ್ ಕೂಡಾ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡ ಎನಿಸಿದೆ ಎಂದು ಬೆವನ್ ಹೇಳಿದ್ದಾರೆ.

ಇನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇತ್ತೀಚೆಗಷ್ಟೇ ಮುಕ್ತಾಯವಾದ ಟಿ20 ಸರಣಿಯಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದ ಟಿ20 ಸರಣಿಯನ್ನು ಗೆದ್ದು ಬೀಗಿದೆ. ಹೀಗಾಗಿ ಭಾರತ ಕೂಡಾ ಪ್ರಶಸ್ತಿ ಜಯಿಸುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದೆ.

ನನ್ನ ಪ್ರಕಾರ ಈ ಬಾರಿ ಆಸ್ಟ್ರೇಲಿಯಾ, ಭಾರತ ಹಾಗೂ ಇಂಗ್ಲೆಂಡ್ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳು ಎನಿಸಿವೆ. ಸದ್ಯದ ಮಟ್ಟಿಗೆ ಹೇಳುವುದಾದರೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಒಳ್ಳೆಯ ಲಯದಲ್ಲಿವೆ. ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಹಲವು ಪ್ರತಿಭಾನ್ವಿತ ಆಟಗಾರರಿದ್ದು, ಅವರೆಲ್ಲರೂ ಕ್ಲಿಕ್ ಆದರೆ ಆಸ್ಟ್ರೇಲಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಜಯಿಸುವುದು ಕಷ್ಟವೇನಲ್ಲ ಎಂದು ಮೈಕಲ್ ಬೆವನ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಮೊದಲು ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಮೋಯಿನ್ ಅಲಿ, ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಅಥವಾ ಭಾರತ ಟಿ20 ವಿಶ್ವಕಪ್ ಜಯಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

click me!