Ind vs Pak ಪಾಕ್ ಎದುರು ಹೋರಾಡಿ ಗೆದ್ದ ಟೀಂ ಇಂಡಿಯಾವನ್ನು ಕೊಂಡಾಡಿದ ಪ್ರಧಾನಿ ಮೋದಿ..!

By Naveen KodaseFirst Published Oct 24, 2022, 12:19 PM IST
Highlights

ಎಂಸಿಜಿ ಮೈದಾನದಲ್ಲಿ ಪಾಕಿಸ್ತಾನ ತಂಡವನ್ನು ಸದೆಬಡಿದ ಟೀಂ ಇಂಡಿಯಾ
ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
ಅಜೇಯ 82 ರನ್ ಸಿಡಿಸಿದ ಕೊಹ್ಲಿ ಸ್ಮರಿಸಿಕೊಂಡ ಮೋದಿ

ನವದೆಹಲಿ(ಅ.24): ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 4 ವಿಕೆಟ್‌ ರೋಚಕ ಜಯ ಸಾಧಿಸುವ ಮೂಲಕ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನ ಹಾಗೂ ವಿರಾಟ್ ಕೊಹ್ಲಿ ಕೆಚ್ಚೆದೆಯ ಬ್ಯಾಟಿಂಗ್‌ ಟೀಂ ಇಂಡಿಯಾ ಗೆಲುವಿನ ಹೈಲೈಟ್ಸ್ ಎನ್ನಬಹುದು. ಇನ್ನು ಟೀಂ ಇಂಡಿಯಾ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾ ಹಾಗೂ ವಿರಾಟ್ ಕೊಹ್ಲಿಯ ಕೆಚ್ಚೆದೆಯ ಪ್ರದರ್ಶನವನ್ನು ಟ್ವೀಟ್ ಮೂಲಕ ಕೊಂಡಾಡಿದ್ದಾರೆ. 

ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 160 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ 5ನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಶತಕದ ಜತೆಯಾಟ ನಿಭಾಯಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಮಾಜಿ ನಾಯಕ ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ 82 ರನ್ ಸಿಡಿಸುವ ಮೂಲಕ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ ತಂದುಕೊಡುವಲ್ಲಿ ಮಹತ್ತರ ಪಾತ್ರ ನಿಭಾಯಿಸಿದರು. ಇನ್ನು ಪಾಕ್ ಎದುರು ಪಂದ್ಯ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್‌ ಇತಿಹಾಸದಲ್ಲಿ 6ನೇ ಬಾರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾದರು.

Ind vs Pak ಪಾಕ್ ಸದೆಬಡಿದ ಭಾರತ; ಪುಟ್ಟ ಮಗುವಿನಂತೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಸುನಿಲ್ ಗವಾಸ್ಕರ್..!

ಟೀಂ ಇಂಡಿಯಾ, ಪಾಕಿಸ್ತಾನ ವಿರುದ್ದ ಗೆಲುವು ಸಾಧಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಟ್ವೀಟ್ ಮಾಡಿ, ಭಾರತದ ಪ್ರದರ್ಶನವನ್ನು ಕೊಂಡಾಡಿದ್ದಾರೆ. 'ಭಾರತ ತಂಡವು ಅತ್ಯುತ್ತಮವಾಗಿ ಹೋರಾಡಿ ಗೆಲುನ್ನು ದಾಖಲಿಸಿದೆ. ತಂಡದ ಅತ್ಯದ್ಭುತ ಪ್ರದರ್ಶನಕ್ಕೆ ಅಭಿನಂದನೆಗಳು. ವಿರಾಟ್‌ ಕೊಹ್ಲಿಗೆ ವಿಶೇಷ ಅಭಿನಂದನೆ ಸಲ್ಲಬೇಕು. ಮನಮೋಹಕ ಇನ್ನಿಂಗ್ಸ್‌ ಮೂಲಕ ದೃಢತೆ ಪ್ರದರ್ಶಿಸಿದ್ದಾರೆ. ಮುಂದಿನ ಪಂದ್ಯಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

The India team bags a well fought victory! Congratulations for an outstanding performance today. A special mention to for a spectacular innings in which he demonstrated remarkable tenacity. Best wishes for the games ahead.

— Narendra Modi (@narendramodi)

ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ವಿವಿಎಸ್ ಲಕ್ಷ್ಮಣ್, ವಾಸೀಂ ಜಾಫರ್ ಸೇರಿದಂತೆ ಹಲವು ಕ್ರಿಕೆಟಿಗರು ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಸಂಘಟಿತ ಪ್ರದರ್ಶನವನ್ನು ಕೊಂಡಾಡಿದ್ದಾರೆ.

What an amazing game.High on emotions, but this is
probably the most brilliant T20 Innings i have ever seen, take a bow Virat Kohli . Chak De India pic.twitter.com/3TwVbYscpa

— Virender Sehwag (@virendersehwag)

Sport is a great teacher and when it comes to champions, the comeback is always greater than the setback. It is for moments like these that you play the game. Great performances by Arshdeep, Shami, Bhuvi & Hardik with the ball. Hardik brilliant in that partnership with Kohli 1/2 pic.twitter.com/aeOHDaPUm7

— VVS Laxman (@VVSLaxman281)

Take a bow 🙌🏽 An innings for the ages. Congratulations team India 🇮🇳👏🏽 pic.twitter.com/Z4aXVfb2wV

— Wasim Jaffer (@WasimJaffer14)

ಚೊಚ್ಚಲ ಟಿ20 ವಿಶ್ವಕಪ್ ಪಂದ್ಯವನ್ನಾಡಿದ ಆರ್ಶದೀಪ್, ತಾವೆಸೆದ ಮೊದಲ ಚೆಂಡಿನಲ್ಲೇ ಪಾಕಿಸ್ತಾನದ ನಾಯಕ ಬಾಬರ್ ಅಜಂ ವಿಕೆಟ್ ಕಬಳಿಸಿ ಟೀಂ ಇಂಡಿಯಾಗೆ ಚೊಚ್ಚಲ ಯಶಸ್ಸು ದಕ್ಕಿಸಿಕೊಟ್ಟರು. ನಂತರ ತಮ್ಮ ಕೋಟದ ಎರಡನೇ ಓವರ್‌ನಲ್ಲಿ ಪಾಕಿಸ್ತಾನದ ಮತ್ತೋರ್ವ ಆರಂಭಿಕ ಬ್ಯಾಟರ್ ಮೊಹಮ್ಮದ್ ರಿಜ್ವಾನ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಇನ್ನು  ಪಾಲಿನ ಮೂರನೇ ಓವರ್‌ನಲ್ಲಿ ಪಾಕಿಸ್ತಾನದ ಸ್ಪೋಟಕ ಬ್ಯಾಟರ್ ಆಸಿಫ್ ಅಲಿ ವಿಕೆಟ್ ಕಬಳಿಸಿ ಎದುರಾಳಿ ತಂಡಕ್ಕೆ ಬಲವಾದ ಪೆಟ್ಟು ನೀಡಿದರು. ಆರ್ಶದೀಪ್ ಸಿಂಗ್ ಮೊದಲ 3 ಓವರ್‌ಗಳಲ್ಲಿ ಕೇವಲ 18 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದ್ದರು. ಆದರೆ ಇನಿಂಗ್ಸ್‌ನ 19ನೇ ಹಾಗೂ ತಮ್ಮ ಪಾಲಿನ 4ನೇ ಓವರ್‌ನಲ್ಲಿ  ಆರ್ಶದೀಪ್ 14 ರನ್ ನೀಡುವ ಮೂಲಕ ಕೊಂಚ ದುಬಾರಿಯಾದರು. 

click me!