ಸಿಡ್ನಿ ಮೈದಾನದಲ್ಲಿಂದು ಟೀಂ ಇಂಡಿಯಾ-ನೆದರ್‌ಲೆಂಡ್ಸ್ ಮುಖಾಮುಖಿ
ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ
ಪಾಕಿಸ್ತಾನ ವಿರುದ್ದ ರೋಚಕ ಜಯ ಸಾಧಿಸಿದ್ದ ಭಾರತ
ಸಿಡ್ನಿ(ಅ.27): ಪಾಕಿಸ್ತಾನ ವಿರುದ್ಧ ರೋಚಕ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ಆಡಲು ಸಿಡ್ನಿ ತಲುಪಿದ್ದು, ಕಠಿಣ ಅಭ್ಯಾಸ ನಡೆಸಿದೆ. ಗುರುವಾರ ಭಾರತಕ್ಕೆ ನೆದರ್‌ಲೆಂಡ್‌್ಸ ಸವಾಲು ಎದುರಾಗಲಿದ್ದು, ಮಂಗಳವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್(ಎಸ್‌ಸಿಜಿ)ಯಲ್ಲಿ ಆಟಗಾರರು ನೆಟ್ಸ್ ಅಭ್ಯಾಸ ನಡೆಸಿದ್ದಾರೆ. ಕ್ರಿಕೆಟ್ ಶಿಶು ನೆದರ್‌ಲೆಂಡ್ಸ್ ಸವಾಲು ಮೆಟ್ಟಿ ನಿಲ್ಲಲು ರೋಹಿತ್ ಶರ್ಮಾ ಪಡೆ ಸಜ್ಜಾಗಿದೆ.
ಪಾಕಿಸ್ತಾನ ಎದುರು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ 4 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನೊಂದೆಡೆ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಸೂಪರ್ 12 ಹಂತ ಪ್ರವೇಶಿಸಿದ್ದ ನೆದರ್‌ಲೆಂಡ್ಸ್ ತಂಡವು, ಸೂಪರ್ 12 ಹಂತದಲ್ಲಿ ಬಾಂಗ್ಲಾದೇಶ ವಿರುದ್ದ9 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಬಲಿಷ್ಠ ಭಾರತ ತಂಡದ ಎದುರು ನೆದರ್‌ಲೆಂಡ್ಸ್ ತಂಡವು ಪವಾಡ ಸದೃಶ ಪ್ರದರ್ಶನವನ್ನು ಎದುರು ನೋಡುತ್ತಿದೆ.
undefined
T20 World Cup ಬಾಂಗ್ಲಾದೇಶ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಗುಣಮಟ್ಟದ ವೇಗದ ಬೌಲಿಂಗ್ ಎದುರು ಸಮಸ್ಯೆ ಎದುರಿಸುತ್ತಿರುವ ಆರಂಭಿಕ ಬ್ಯಾಟರ್ ಕೆ.ಎಲ್.ರಾಹುಲ್ ನೆದರ್‌ಲೆಂಡ್ಸ್ ಎದುರು ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಮೊಹಮದ್ ಸಿರಾಜ್, ಶಾರ್ದೂಲ್ ಠಾಕೂರ್ ಹಾಗೂ ಹರ್ಷಲ್ ಪಟೇಲ್ ನೆಟ್ಸ್‌ನಲ್ಲಿ ರಾಹುಲ್‌ಗೆ ಸತತವಾಗಿ ಆಫ್‌ಸ್ಟಂಪ್‌ನಿಂದ ಆಚೆ ಬೌಲ್ ಮಾಡಿ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ನೆರವಾದರು.
ಸಂಭಾವ್ಯ ತಂಡಗಳು ಹೀಗಿವೆ ನೋಡಿ
ಭಾರತ ತಂಡ: ರೋಹಿತ್ ಶರ್ಮಾ(ನಾಯಕ). ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ಶದೀಪ್ ಸಿಂಗ್
ನೆದರ್‌ಲೆಂಡ್ಸ್ ತಂಡ: ವಿಕ್ರಂಜಿತ್ ಸಿಂಗ್, ಮ್ಯಾಕ್ ಒ ಡೌಡ್, ಬಾಸ್ ಡಿ ಲೇಡೆ, ಕಾಲಿನ್ ಅಕೆರ್‌ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್(ನಾಯಕ&ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶೆರಿಜ್ ಅಹಮದ್, ಫ್ರೆಡ್ ಕ್ಲಾಸೇನ್, ಪೌಲ್ ವ್ಯಾನ್ ಮೀಕ್ರೇನ್.
ಪಂದ್ಯ ಆರಂಭ: ಮಧ್ಯಾಹ್ನ 12.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಹಾಟ್‌ಸ್ಟಾರ್
ಸ್ತಳ: ಸಿಡ್ನಿ ಕ್ರಿಕೆಟ್ ಮೈದಾನ