T20 World Cup: Aus vs Ban ಜಂಪಾ ಮಿಂಚಿನ ದಾಳಿಗೆ ಅಲ್ಪ ಮೊತ್ತಕ್ಕೆ ಬಾಂಗ್ಲಾದೇಶ ಆಲೌಟ್

Suvarna News   | Asianet News
Published : Nov 04, 2021, 05:07 PM ISTUpdated : Nov 04, 2021, 05:22 PM IST
T20 World Cup: Aus vs Ban ಜಂಪಾ ಮಿಂಚಿನ ದಾಳಿಗೆ ಅಲ್ಪ ಮೊತ್ತಕ್ಕೆ ಬಾಂಗ್ಲಾದೇಶ ಆಲೌಟ್

ಸಾರಾಂಶ

* ದುಬೈನಲ್ಲಿ ಅಲ್ಪ ಮೊತ್ತಕ್ಕೆ ಸರ್ವಪತನ ಕಂಡ ಬಾಂಗ್ಲಾದೇಶ * ಮೊದಲು ಬ್ಯಾಟಿಂಗ್ ಮಾಡಿ 73 ರನ್‌ಗಳಿಗೆ ಆಲೌಟ್‌ ಆದ ಬಾಂಗ್ಲಾ * 5 ವಿಕೆಟ್ ಕಬಳಿಸಿ ಮಿಂಚಿದ ಸ್ಪಿನ್ನರ್ ಆಡಂ ಜಂಪಾ  

ದುಬೈ(ನ.04): ಆಡಂ ಜಂಪಾ (19/5) ಮಾರಕ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡವು (Bangladesh Cricket Team) ಕೇವಲ 73 ರನ್‌ಗಳಿಗೆ ಸರ್ವಪತನ ಕಂಡಿದೆ. ಇದರೊಂದಿಗೆ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಗೆಲ್ಲಲು ಆಸ್ಟ್ರೇಲಿಯಾಗೆ ಸುಲಭ ಗುರಿ ಸಿಕ್ಕಿದೆ. ಸೆಮೀಸ್‌ ಪ್ರವೇಶದ ದೃಷ್ಟಿಯಿಂದ ಭಾರೀ ಅಂತರದ ಗೆಲುವು ಆಸ್ಟ್ರೇಲಿಯಾಗೆ ಅನಿವಾರ್ಯವೆನಿಸಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡವು (Australia Cricket Team) ಕೇವಲ 8.1 ಓವರ್‌ಗಳಲ್ಲಿ ಗೆಲುವಿನ ಗುರಿ ತಲುಪಿದರೆ, ನೆಟ್ ರನ್‌ರೇಟ್‌ ಆಧಾರದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ (South Africa Cricket Team) ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ (Dubai International Stadium) ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬಾಂಗ್ಲಾದೇಶ ತಂಡವು ಆಸೀಸ್‌ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಮೊದಲ ಓವರ್‌ನ ಮೂರನೇ ಎಸೆತದಲ್ಲೇ ಲಿಟನ್ ದಾಸ್ (Liton Das) ವಿಕೆಟ್ ಕಬಳಿಸುವ ಮೂಲಕ ಆಸೀಸ್‌ಗೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಇನ್ನು ಎರಡನೇ ಓವರ್‌ನಲ್ಲಿ ಸೌಮ್ಯ ಸರ್ಕಾರ್ ವಿಕೆಟ್ ಕಬಳಿಸುವ ಮೂಲಕ ಶಾಕ್‌ ನೀಡಿದರು. ಇನ್ನು ಅನುಭವಿ ಬ್ಯಾಟರ್ ಮುಷ್ಫಿಕುರ್ ರಹೀಮ್‌(01) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಬಾಂಗ್ಲಾದೇಶ 10 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. 

T20 World Cup: Deepavali ಹಬ್ಬಕ್ಕೆ ಶುಭಕೋರಿದ ವಿರಾಟ್, ವಾರ್ನರ್‌ ಸೇರಿದಂತೆ ಹಲವು ಕ್ರೀಡಾತಾರೆಯರು..!

ಎರಡಂಕಿ ಮೊತ್ತ ದಾಖಲಿಸಿದ ಮೂವರು ಬ್ಯಾಟರ್‌ಗಳು: ಬಾಂಗ್ಲಾದೇಶ ಪರ ಆರಂಭಿಕ ಬ್ಯಾಟರ್‌ ಮೊಹಮ್ಮದ್ ನಯೀಮ್ (17), ನಾಯಕ ಮೊಹಮದುಲ್ಲಾ (16) ಹಾಗೂ ಶಮೀಮ್‌ (19) ರನ್ ಬಾರಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಖಲಿಸಲಿಲ್ಲ. ಶಮೀಮ್ ಹೊಸೈನ್ 19 ರನ್‌ ಬಾರಿಸಿದ್ದೇ ಬಾಂಗ್ಲಾದೇಶ ಪರ ದಾಖಲಾದ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿತು. ಬಾಂಗ್ಲಾದೇಶ ಪರ ಈ ಮೂವರು ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಖಲಿಸದಿದ್ದರೆ, ಬಾಂಗ್ಲಾದೇಶ 50 ರನ್‌ ಗಡಿದಾಟುವುದು ಕಷ್ಟವಾಗುತ್ತಿತ್ತು. ಬಾಂಗ್ಲಾದೇಶದ ಇನ್ನುಳಿದ 7 ಬ್ಯಾಟರ್‌ಗಳು ಒಂದಂಕಿ ಮೊತ್ತ ದಾಖಲಿಸಿದರು. ಈ ಪೈಕಿ ನಾಲ್ವರು ಬ್ಯಾಟರ್‌ಗಳು ಶೂನ್ಯ ಸುತ್ತಿದರು.

T20 World Cup: Aus vs Ban ಬಾಂಗ್ಲಾ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಜಂಪಾಗೆ 5 ವಿಕೆಟ್‌: ಆರಂಭದಲ್ಲಿ ವೇಗಿಗಳು ಬಾಂಗ್ಲಾ ಬ್ಯಾಟರ್‌ಗಳಿಗೆ ಶಾಕ್ ನೀಡಿದರೆ, ಮಧ್ಯಮ ಓವರ್‌ಗಳಲ್ಲಿ ಆಡಂ ಜಂಪಾ ನಿರಂತರ ವಿಕೆಟ್ ಕಬಳಿಸುವ ಮೂಲಕ ಎದುರಾಳಿ ತಂಡವನ್ನು ಕಾಡಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಪ್ರದರ್ಶನ ತೋರಿದ ಆಡಂ ಜಂಪಾ ಕೇವಲ 19 ರನ್‌ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾದೇಶವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಇನ್ನುಳಿದಂತೆ ವೇಗಿಗಳಾದ ಮಿಚೆಲ್ ಸ್ಟಾರ್ಕ್ (Mitchell Starc) ಹಾಗೂ ಜೋಶ್ ಹೇಜಲ್‌ವುಡ್ (Josh Hazlewood) ತಲಾ 2 ವಿಕೆಟ್ ಪಡೆದರೆ, ಗ್ಲೆನ್‌ ಮ್ಯಾಕ್ಸ್‌ವೆಲ್ (Glenn Maxwell) ಒಂದು ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

ಬಾಂಗ್ಲಾದೇಶ: 73/10
ಶಮೀಮ್ ಹೊಸೈನ್: 19
ಆಡಂ ಜಂಪಾ: 19/5

(* ಬಾಂಗ್ಲಾದೇಶ ಬ್ಯಾಟಿಂಗ್ ಮುಕ್ತಾಯದ ವೇಳೆಗೆ)

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಹೃತಿಕ್‌ ರೋಶನ್‌ ಜೊತೆ ಕ್ರಿಶ್‌ ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?