
ಅಬುಧಾಬಿ(ಅ.31): ನವೀದ್ ಉಲ್ ಹಕ್, ಹಮೀದ್ ಹಸನ್ ಮಾರಕ ದಾಳಿಗೆ ತತ್ತರಿಸಿದ ನಮೀಬಿಯಾ ಕೇವಲ 98 ರನ್‌ಗಳಿಸಿದೆ. ಇದರೊಂದಿಗೆ ಆಫ್ಘಾನಿಸ್ತಾನ ಕ್ರಿಕೆಟ್ ತಂಡವು (Afghanistan Cricket Team) 62 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ವಿದಾಯ ಪಂದ್ಯವನ್ನಾಡಿದ ಮಾಜಿ ನಾಯಕ ಅಸ್ಗರ್ ಅಫ್ಘಾನ್‌ಗೆ ಗೆಲುವಿನ ಉಡುಗೊರೆ ನೀಡಿದೆ. ಈ ಗೆಲುವಿನೊಂದಿಗೆ ಆಫ್ಘಾನಿಸ್ತಾನ ತಂಡವು ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಂಡಿದ್ದರೆ, ನಮೀಬಿಯಾ ತಂಡದ ಸೆಮೀಸ್ ರೇಸ್ ಬಹುತೇಕ ಅಂತ್ಯವಾಗಿದೆ.
ಆಫ್ಘಾನಿಸ್ತಾನ ನೀಡಿದ್ದ 161 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಮೊದಲ ಓವರ್‌ನ 4ನೇ ಎಸೆತದಲ್ಲೇ ಕ್ರೆಗ್ ವಿಲಿಯಮ್ಸ್ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಿಚೆಲ್ ವ್ಯಾನ್ ಲಿಂಗನ್ 11 ರನ್ ಬಾರಿಸಿ ನವೀನ್ ಉಲ್ ಹಕ್‌ಗೆ ಎರಡನೇ ಬಲಿಯಾದರು. ಇನ್ನು ಆಲ್ರೌಂಡರ್ ಲೋಫ್ಟಿ ಈಟನ್ 14 ರನ್ ಬಾರಿಸಿ ಗುಲ್ಬದ್ದೀನ್ ನೈಬ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಎರಾಸ್‌ಮಸ್ ಆಟ ಕೇವಲ 12 ರನ್‌ಗೆ ಸೀಮಿತವಾಯಿತು.
T20 World Cup: ಟೀಂ ಇಂಡಿಯಾ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಇನ್ನು ಮಧ್ಯಮ ಕ್ರಮಾಂಕದಲ್ಲಿ ಅನುಭವಿ ಆಲ್ರೌಂಡರ್ ಡೇವಿಡ್ ವೀಸಾ (David Wiese) ಕೆಲಕಾಲ ಆಫ್ಘಾನ್ ಬೌಲರ್ ಎದುರು ಕೊಂಚ ಪ್ರತಿರೋಧ ತೋರಿದರು. ಡೇವಿಡ್ ವೀಸಾ 30 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕವೂ ನಮೀಬಿಯಾ ತಂಡವು (Namibia Cricket Team) ನಿರಂತರ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ನಮೀಬಿಯಾ ತಂಡವು ನಿಗದಿತ 20 ಓವರ್‌ಗಳನ್ನು ಎದುರಿಸಿ 9 ವಿಕೆಟ್ ಕಳೆದುಕೊಂಡು 98 ರನ್ ಗಳಿಸಲಷ್ಟೇ ಶಕ್ತವಾಯಿತು.
T20 World Cup: ನಮೀಬಿಯಾ ಎದುರ ಟಾಸ್ ಗೆದ್ದ ಆಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ
ಇದಕ್ಕೂ ಮೊದಲು ಟಾಸ್ ಗೆದ್ದ ಆಫ್ಘಾನಿಸ್ತಾನ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ನಾಯಕ ಮೊಹಮ್ಮದ್ ನಬಿ (Mohammad Nabi) ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ನಡೆಸಿದ ಆರಂಭಿಕ ಜೋಡಿಯಾದ ಹಜರತ್ತುಲ್ಲಾ ಝಝೈ ಹಾಗೂ ಮೊಹಮ್ಮದ್ ಶೆಹಜಾದ್ ಜೋಡಿ ಮೊದಲ ವಿಕೆಟ್‌ಗೆ 53 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಹಜರತ್ತುಲ್ಲಾ 33 ರನ್ ಬಾರಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ಶೆಹಜಾದ್ (Mohammad Shahzad) 33 ಎಸೆತಗಳನ್ನು ಎದುರಿಸಿ 45 ರನ್ ಬಾರಿಸಿದರು.
ಮೊಹಮ್ಮದ್ ಶಮಿ ನಿಂದಕರ ಬಾಯಿ ಮುಚ್ಚಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಿಟ್ಟ ನುಡಿ...!
ಇನ್ನು ವಿದಾಯದ ಪಂದ್ಯವನ್ನಾಡಿದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಕೇವಲ 23 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಚುರುಕಿನ 31 ರನ್ ಗಳಿಸುವ ಮೂಲಕ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಕೊನೆಯಲ್ಲಿ ಮೊಹಮ್ಮದ್ ನಬಿ 17 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 160ರ ಗಡಿ ತಲುಪಿಸಿದರು.
ಸಂಕ್ಷಿಪ್ತ ಸ್ಕೋರ್
ಆಫ್ಘಾನಿಸ್ತಾನ: 160/5
ಶೆಹಜಾದ್: 45
ನಮೀಬಿಯಾ: 98/9
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.