T20 World Cup: ಉದ್ಘಾಟನಾ ಪಂದ್ಯದಲ್ಲಿ ಆಫ್ರಿಕಾ ಎದುರು ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ

Suvarna News   | Asianet News
Published : Oct 23, 2021, 03:09 PM ISTUpdated : Oct 23, 2021, 03:17 PM IST
T20 World Cup: ಉದ್ಘಾಟನಾ ಪಂದ್ಯದಲ್ಲಿ ಆಫ್ರಿಕಾ ಎದುರು ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ

ಸಾರಾಂಶ

* ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಚಾಲನೆ * ಸೂಪರ್ 12 ಹಂತದ ಉದ್ಘಾಟನಾ ಪಂದ್ಯದಲ್ಲಿ ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ಮುಖಾಮುಖಿ * ಹೈವೋಲ್ಟೇಜ್ ಪಂದ್ಯಕ್ಕೆ ಅಬುದಾಭಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ

ಅಬುಧಾಬಿ(ಅ.23); ಬಹುನಿರೀಕ್ಷಿತ 7ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಸೂಪರ್ 12 ಹಂತದ ಉದ್ಘಾಟನಾ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia Cricket Team) ಹಾಗೂ ದಕ್ಷಿಣ ಆಫ್ರಿಕಾ (South Africa Cricket) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 

ಗ್ರೂಪ್‌ 1ನ ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ ವಹಿಸಿದ್ದು, ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿವೆ. ಅಸ್ಟ್ರೇಲಿಯಾ ತಂಡವು ಲಯದ ಸಮಸ್ಯೆ ಎದುರಿಸುತ್ತಿದ್ದು, ಮಹತ್ವದ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದೆ ಎನ್ನುವ ಕುತೂಹಲ ಜೋರಾಗಿದೆ. 

ಸೂಪರ್ 12 ಹಂತಕ್ಕೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯಗಳ ಪೈಕಿ ಆರೋನ್ ಫಿಂಚ್ (Aaron Finch) ನೇತೃತ್ವದ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ವಿರುದ್ದ ಭರ್ಜರಿ ಗೆಲುವು ಸಾಧಿಸಿತ್ತು. ಇನ್ನು ಟೀಂ ಇಂಡಿಯಾ ಎದುರು ಆಸ್ಟ್ರೇಲಿಯಾ ಆಘಾತಕಾರಿ ಸೋಲು ಕಂಡಿತ್ತು. ಇನ್ನೊಂದೆಡೆ ದಕ್ಷಿಣ ಆಫ್ರಿಕಾ ತಂಡವು ಎರಡೂ ಅಭ್ಯಾಸ ಪಂದ್ಯದಲ್ಲೂ ಗೆಲುವು ದಾಖಲಿಸಿದ್ದು ಆತ್ಮವಿಶ್ವಾಸದಿಂದ ಬೀಗುತ್ತಿದೆ. ಕ್ವಿಂಟನ್ ಡಿ ಕಾಕ್ ಹಾಗೂ ರಾಸ್ಸಿ ವ್ಯಾನ್ ಡರ್ ಡುಸೇನ್ ಭರ್ಜರಿ ಫಾರ್ಮ್‌ನಲ್ಲಿದ್ದು, ಹರಿಣಗಳ ಪಡೆ ದೊಡ್ಡ ಮೊತ್ತ ಕಲೆಹಾಕಬೇಕಿದ್ದರೆ, ಈ ಇಬ್ಬರು ಆಟಗಾರರು ಅಬ್ಬರಿಸಬೇಕಿದೆ. ಇನ್ನು ಆಸೀಸ್ ತಂಡವು ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿ ಕಂಡು ಬಂದಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರದಲ್ಲಿದೆ. ಆಸ್ಟ್ರೇಲಿಯಾ ತಂಡವು ತ್ರಿವಳಿ ವೇಗಿಗಳಾದ ಜೋಶ್ ಹೇಜಲ್‌ವುಡ್‌, ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್‌ ಕಮಿನ್ಸ್‌ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ

T20 World Cup: ಉದ್ಘಾಟನಾ ಪಂದ್ಯದಲ್ಲಿ ಆಸೀಸ್‌-ಆಫ್ರಿಕಾ ಫೈಟ್

ಇದುವರೆಗೂ ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಒಟ್ಟು 21 ಬಾರಿ ಮುಖಾಮುಖಿಯಾಗಿದ್ದು, ಆಸೀಸ್‌ ತಂಡವು ಕೊಂಚ ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾ ತಂಡವು 13 ಬಾರಿ ಗೆಲುವು ದಾಖಲಿಸಿದ್ದರೆ, ದಕ್ಷಿಣ ಆಫ್ರಿಕಾ ತಂಡವು 8 ಬಾರಿ ಗೆಲುವು ದಾಖಲಿಸಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ತಂಡವು ಇದುವರೆಗೂ ಒಟ್ಟು 29 ಪಂದ್ಯಗಳನ್ನಾಡಿ 16 ಗೆಲುವು ಹಾಗೂ 13 ಸೋಲು ಕಂಡಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡವು 30 ಪಂದ್ಯಗಳನ್ನಾಡಿ 18 ಗೆಲುವು ಹಾಗೂ 12 ಸೋಲು ಕಂಡಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ದ ಡೇವಿಡ್‌ ವಾರ್ನರ್‌ ಅತ್ಯುತ್ತಮ ಫಾರ್ಮ್‌ ಹೊಂದಿದ್ದು, 14 ಟಿ20 ಪಂದ್ಯಗಳಲ್ಲಿ 35.15ರ ಬ್ಯಾಟಿಂಗ್‌ ಸರಾಸರಿಯಲ್ಲಿ 457 ರನ್‌ ಬಾರಿಸಿದ್ದಾರೆ.

T20 World Cup: ಇಂದಿನಿಂದ ಅಸಲಿ ಫೈಟ್‌ ಆರಂಭ

ಇನ್ನು ಆಫ್ರಿಕಾದ ಸ್ಟಾರ್ ಸ್ಪಿನ್ನರ್ ತಬ್ರೀಜ್ ಶಂಸಿ 2021ರಲ್ಲಿ 17 ಟಿ20 ಪಂದ್ಯಗಳನ್ನಾಡಿ 28 ವಿಕೆಟ್ ಕಬಳಿಸಿದ್ದು, ಆಸ್ಟ್ರೇಲಿಯಾ ವಿರುದ್ದ ಮಿಂಚಲು ಎದುರು ನೋಡುತ್ತಿದ್ದಾರೆ.

ತಂಡಗಳು ಹೀಗಿವೆ ನೋಡಿ

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?