T20 World Cup: ಜಿಂಬಾಬ್ವೆ ವಿರುದ್ದ ರೋಚಕ ಜಯ ಸಾಧಿಸಿದ ಬಾಂಗ್ಲಾದೇಶ

By Naveen Kodase  |  First Published Oct 30, 2022, 12:15 PM IST

ಜಿಂಬಾಬ್ವೆ ವಿರುದ್ದ 3 ರನ್‌ ರೋಚಕ ಜಯ ಸಾಧಿಸಿದ ಬಾಂಗ್ಲಾದೇಶ
ಕೊನೆಯ ಎಸೆತದವರೆಗೂ ರೋಚಕತೆ ಕಾಯ್ದುಕೊಂಡ ಪಂದ್ಯ
ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಬಾಂಗ್ಲಾದೇಶ


ಬ್ರಿಸ್ಬೇನ್‌(ಅ.30): ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ದ ಬಾಂಗ್ಲಾದೇಶ ತಂಡವು 3 ರನ್‌ಗಳ ರೋಚಕ ಜಯ ಸಾಧಿಸಿದೆ. ಬಾಂಗ್ಲಾದೇಶ ನೀಡಿದ್ದ 151 ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡವು 8 ವಿಕೆಟ್‌ ಕಳೆದುಕೊಂಡು 147 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ

ಇಲ್ಲಿನ ಗಾಬಾ ಮೈದಾನದಲ್ಲಿ ಬಾಂಗ್ಲಾದೇಶ ನೀಡಿದ್ದ 151 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡಕ್ಕೆ ಆರಂಭದಲ್ಲೇ ಬಾಂಗ್ಲಾ ವೇಗಿಗಳು ಆರಂಭದಲ್ಲೇ ಶಾಕ್ ನೀಡಿದ್ದಾರೆ. ಮೊದಲ ಓವರ್‌ನಲ್ಲೇ ಟಸ್ಕಿನ್ ಅಹಮದ್ ಆರಂಭಿಕ ಬ್ಯಾಟರ್‌ ವೆಸ್ಲೆ ಮದೆವೆರೆ 4 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಕ್ರೇಗ್ ಎರ್ವಿನ್‌ 8 ರನ್‌ ಬಾರಿಸಿ ಟಸ್ಕಿನ್ ಅಹಮ್ಮದ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮಿಲ್ಟನ್ ಶುಂಬಾ ಕೂಡಾ 8 ರನ್ ಬಾರಿಸಿ ಮುಷ್ತಾಫಿಜುರ್ ರೆಹಮಾನ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಸಿಕಂದರ್ ರಾಜಾ ಖಾತೆ ತೆರೆಯುವ ಮುನ್ನವೇ ಟಸ್ಕಿನ್ ಅಹಮ್ಮದ್‌ಗೆ ವಿಕೆಟ್ ಒಪ್ಪಿಸಿದರು.

What a match! 🥵

Bangladesh emerge victorious after a thrilling clash against Zimbabwe! | | 📝https://t.co/UzQHIw2f1t pic.twitter.com/lBHkw5qe4p

— T20 World Cup (@T20WorldCup)

Tap to resize

Latest Videos

undefined

ಆಸರೆಯಾದ ಸೀನ್‌ ವಿಲಿಯಮ್ಸ್‌: ಒಂದು ಹಂತದಲ್ಲಿ 35 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಜಿಂಬಾಬ್ವೆ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಸೀನ್ ವಿಲಿಯಮ್ಸ್‌ ತಂಡಕ್ಕೆ ಆಸರೆಯಾದರು. 5ನೇ ವಿಕೆಟ್‌ಗೆ ಸೀನ್ ವಿಲಿಯಮ್ಸ್‌ ಹಾಗೂ ರೆಗಿಸ್ ಚಕಾಬ್ವಾ 34 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಇನ್ನು ಆರನೇ ವಿಕೆಟ್‌ಗೆ ಸೀನ್ ವಿಲಿಯಮ್ಸ್ ಹಾಗೂ ರಯಾನ್ ಬ್ಲರ್ 44 ಎಸೆತಗಳಲ್ಲಿ 63 ರನ್‌ಗಳ ಜತೆಯಾಟವಾಡುವ ಮೂಲಕ ಜಿಂಬಾಬ್ವೆ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದರು. ಸೀನ್ ವಿಲಿಯಮ್ಸ್‌ 42 ಎಸೆತಗಳಲ್ಲಿ 8 ಬೌಂಡರಿ ಸಹಿತ 64 ರನ್‌ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ತಂಡ ಗೆಲುವಿನ ಹೊಸ್ತಿಲಲ್ಲಿದ್ದಾಗ ಸೀನ್ ವಿಲಿಯಮ್ಸ್‌ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. 

T20 World Cup: ಜಿಂಬಾಬ್ವೆ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ, ಒಂದೊಂದು ಬದಲಾವಣೆ..!

ಇನ್ನು ಜಿಂಬಾಬ್ವೆ ತಂಡವು ಕೊನೆಯ ಓವರ್‌ನಲ್ಲಿ ಗೆಲ್ಲಲು 16 ರನ್‌ಗಳ ಅಗತ್ಯವಿತ್ತು. ಕೊನೆಯ ಓವರ್‌ನ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತುಕೊಂಡ ಮೊಸದೆಕ್ ಹೊಸೈನ್‌ ಎರಡನೇ ಎಸೆತದಲ್ಲೇ ಬ್ರಾಡ್ ಇವಾನ್ಸ್‌ ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದರು. ಆದರೆ ಮೂರನೇ ಎಸೆತದಲ್ಲಿ ಗರಾವ ಬೌಂಡರಿ ಹಾಗೂ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಪಂದ್ಯಕ್ಕೆ ರೋಚಕತೆ ಹೆಚ್ಚಿಸಿದರು. ಹೀಗಾಗಿ ಕೊನೆಯ ಎರಡು ಎಸೆತಗಳಲ್ಲಿ ಕೇವಲ 5 ರನ್‌ಗಳ ಅಗತ್ಯವಿತ್ತು. ಆದರೆ 5ನೇ ಎಸೆತದಲ್ಲಿ ಗರಾವ ಮುನ್ನುಗ್ಗಿ ಬಾರಿಸುವ ಯತ್ನದಲ್ಲಿ ಸ್ಟಂಪೌಟ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಕೊನೆಯ ಎಸೆತದಲ್ಲೂ ಮುಜರಾಬಾನಿ ಸ್ಟಂಪೌಟ್ ಮಾಡಿದರಾದರೂ ಚೆಂಡನ್ನು ವಿಕೆಟ್‌ಗೂ ಮುಂಚೆ ಚೆಂಡು ಹಿಡಿದು ಸ್ಟಂಪಿಂಗ್ ಮಾಡಿದ್ದರಿಂದ ಅಂಪೈರ್ ನೋಬಾಲ್ ನೀಡಿದರು. ಆದರೆ ಕೊನೆಯ ಫ್ರೀ ಹಿಟ್ ಉಪಯೋಗಿಸಿಕೊಳ್ಳಲು ಯಶಸ್ವಿಯಾಗಲಿಲ್ಲ.

ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಸೌಮ್ಯ ಸರ್ಕಾರ್ ಖಾತೆ ತೆರೆಯುವ ಮುನ್ನವೇ ವಿಕೆಟ್‌ ಒಪ್ಪಿಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ನಜ್ಮುಲ್ ಹೊಸೈನ್ ಶಾಂಟೋ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಅಸರೆಯಾದರು. ಶಾಂಟೋ 55 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 71 ರನ್ ಬಾರಿಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಇನ್ನು ಇನ್ನೊಂದು ತುದಿಯಲ್ಲಿ ಲಿಟನ್ ದಾಸ್(14), ನಾಯಕ ಶಕೀಬ್ ಅಲ್ ಹಸನ್‌(23), ಅಫಿಫ್‌ ಹೊಸೈನ್‌(29) ಉಪಯುಕ್ತ ರನ್ ಕಾಣಿಕೆ ನೀಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ತಲುಪಿಸುವಲ್ಲಿ ಯಶಸ್ವಿಯಾದರು.

click me!