T20 World Cup: Aus vs WI ಮಾರ್ಶ್‌, ವಾರ್ನರ್ ಅಬ್ಬರ, ಆಸೀಸ್‌ಗೆ ಸುಲಭ ಜಯ

Suvarna News   | Asianet News
Published : Nov 06, 2021, 07:15 PM ISTUpdated : Nov 06, 2021, 07:26 PM IST
T20 World Cup: Aus vs WI ಮಾರ್ಶ್‌, ವಾರ್ನರ್ ಅಬ್ಬರ, ಆಸೀಸ್‌ಗೆ ಸುಲಭ ಜಯ

ಸಾರಾಂಶ

* ವೆಸ್ಟ್ ಇಂಡೀಸ್ ಎದುರು 8 ವಿಕೆಟ್‌ಗಳ ಭರ್ಜರಿ ಜಯ * ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಡೇವಿಡ್ ವಾರ್ನರ್ * ಸೆಮೀಸ್‌ಗೆ ಮತ್ತಷ್ಟು ಹತ್ತಿರವಾದ ಆಸ್ಟ್ರೇಲಿಯಾ

ಅಬುಧಾಬಿ(ನ.06): ಆರಂಭಿಕ ಬ್ಯಾಟರ್‌ ಡೇವಿಡ್ ವಾರ್ನರ್‌ (David Warner) (89*) ಹಾಗೂ ಮಿಚೆಲ್ ಮಾರ್ಶ್‌ (Mitchell Marsh) (53) ಸಿಡಿಲಬ್ಬದರ ಅರ್ಧಶತಕದ ನೆರವಿನಿಂದ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಎದುರು ಆಸ್ಟ್ರೇಲಿಯಾ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯ ಮುಕ್ತಾಯಕ್ಕೆ ಇನ್ನೂ 22 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದ ಆಸೀಸ್‌ ತಂಡವು ನೆಟ್‌ ರನ್‌ರೇಟ್‌ ಮತ್ತಷ್ಟು ಉತ್ತಮ ಪಡಿಸಿಕೊಂಡಿದ್ದು, ಬಹುತೇಕ ಸೆಮೀಸ್‌ಗೆ ತನ್ನ ಸ್ಥಾನವನ್ನು ಖಚಿತ ಪಡಿಸಿಕೊಂಡಿದೆ.

ಇಲ್ಲಿನ ಶೇಕ್ ಜಾಯೆದ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ್ದ 158 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು (Australia Cricket Team) ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಡೇವಿಡ್‌ ವಾರ್ನರ್ ಹಾಗೂ ಆ್ಯರೋನ್ ಫಿಂಚ್‌ ಮೊದಲ ವಿಕೆಟ್‌ಗೆ 33 ರನ್‌ಗಳ ಜತೆಯಾಟ ನಿಭಾಯಿಸಿತು. ಫಿಂಚ್ 9 ರನ್‌ ಬಾರಿಸಿ ಅಕೇಲ್‌ ಹೊಸೈನ್ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು.

IPL 2022: ಹರಾಜಿಗೂ ಮುನ್ನ CSK ಈ ನಾಲ್ವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು..!

ಅಬ್ಬರಿಸಿದ ವಾರ್ನರ್-ಮಾರ್ಶ್: ಫಿಂಚ್ ವಿಕೆಟ್‌ ಪತನದ ಬಳಿಕ ಡೇವಿಡ್ ವಾರ್ನರ್ ಕೂಡಿಕೊಂಡ ಮಿಚೆಲ್ ಮಾರ್ಶ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ವೆಸ್ಟ್ ಇಂಡೀಸ್ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಈ ಜೋಡಿ ಎರಡನೇ ವಿಕೆಟ್‌ಗೆ 124 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮಿಚೆಲ್ ಮಾರ್ಶ್‌ 32 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ 53 ರನ್‌ ಬಾರಿಸಿ ಕ್ರಿಸ್‌ ಗೇಲ್‌ಗೆ (Chris Gayle) ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಡೇವಿಡ್ ವಾರ್ನರ್‌ 56 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 4 ಸಿಕ್ಸರ್‌ ನೆರವಿನಿಂದ ಅಜೇಯ 89 ರನ್‌ ಸಿಡಿಸುವ ಮೂಲಕ ಸುಲಭವಾಗಿ ತಂಡವನ್ನು ಗೆಲುವಿನ ದಡ ಸೇರಿಸಿದರು.

T20 World Cup Aus vs WI ಪೊಲ್ಲಾರ್ಡ್‌ ಅಬ್ಬರ, ಆಸೀಸ್‌ಗೆ ಸ್ಪರ್ಧಾತ್ಮಕ ಗುರಿ

ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್‌ (West Indies Cricket Team) ಉತ್ತಮ ಆರಂಭ ಪಡೆಯಲು ವಿಫಲವಾಯಿತು. 35 ರನ್‌ಗಳಿಸುವಷ್ಟರಲ್ಲಿ ವಿಂಡೀಸ್‌ನ ಅಗ್ರಕ್ರಮಾಂಕದ ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಆಸ್ಟ್ರೇಲಿಯಾ ವೇಗಿ ಜೋಶ್ ಹೇಜಲ್‌ವುಡ್ 4 ವಿಕೆಟ್ ಕಬಳಿಸುವ ಮೂಲಕ ಕೆರಿಬಿಯನ್ನರ ರನ್ ವೇಗಕ್ಕೆ ಕಡಿವಾಣ ಹಾಕಿದರು. 

ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲ್ಲಾರ್ಡ್‌ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 44 ರನ್‌ ಬಾರಿಸಿದರೆ, ಕೊನೆಯಲ್ಲಿ ಆಂಡ್ರೆ ರಸೆಲ್ ಕೇವಲ 7 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ ಅಜೇಯ 18 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಸಂಕ್ಷಿಪ್ತ ಸ್ಕೋರ್

ವೆಸ್ಟ್ ಇಂಡೀಸ್‌: 157/7

ಕೀರನ್ ಪೊಲ್ಲಾರ್ಡ್: 44

ಜೋಶ್ ಹೇಜಲ್‌ವುಡ್: 39/4

ಆಸ್ಟ್ರೇಲಿಯಾ: 161/2

ಡೇವಿಡ್ ವಾರ್ನರ್: 89

ಕ್ರಿಸ್‌ ಗೇಲ್: 7/1

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?