T20 World Cup: Aus vs NZ: ನ್ಯೂಜಿಲೆಂಡ್ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್‌ ಆಯ್ಕೆ

By Suvarna NewsFirst Published Nov 14, 2021, 7:05 PM IST
Highlights

* ದುಬೈನಲ್ಲಿ ಟಿ20 ವಿಶ್ವಕಪ್ ಟ್ರೋಫಿಯಾಗಿ ಕಿವೀಸ್‌-ಆಸೀಸ್‌ ಕಾದಾಟ

* ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಕನವರಿಕೆಯಲ್ಲಿ ಉಭಯ ತಂಡಗಳು

* ಕಿವೀಸ್ ತಂಡದಲ್ಲಿ ನಿರೀಕ್ಷೆಯಂತೆಯೇ ಬದಲಾವಣೆ

ದುಬೈ(ನ.14): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ (Australia Cricket Team) ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿದ ತಂಡವೇ ಇದೀಗ ಫೈನಲ್‌ನಲ್ಲೂ ಕಣಕ್ಕಿಳಿದಿದೆ. ಇನ್ನೊಂದೆಡೆ ಕೇನ್ ವಿಲಿಯಮ್ಸನ್‌ (Kane Williamson) ನೇತೃತ್ವದ ನ್ಯೂಜಿಲೆಂಡ್ ತಂಡದಲ್ಲಿ (New Zealand Cricket Team) ನಿರೀಕ್ಷೆಯಂತೆಯೇ ಒಂದು ಬದಲಾವಣೆಯನ್ನು ಮಾಡಿದ್ದು, ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಡೆವೊನ್ ಕಾನ್‌ವೇ (Devon Conway) ಬದಲಿಗೆ ಡೇರಲ್ ಮಿಚೆಲ್‌ ತಂಡ ಕೂಡಿಕೊಂಡಿದ್ದಾರೆ.

T20 World Cup: 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊಸ ಚಾಂಪಿಯನ್ ಉದಯ..!

ಈ ವಿಶ್ವಕಪ್‌ನಲ್ಲಿ ದುಬೈ ಒಟ್ಟು 12 ಪಂದ್ಯಗಳಿಗೆ ಆತಿಥ್ಯ ವಹಿಸಿದ್ದು, 11ರಲ್ಲಿ ಮೊದಲು ಫೀಲ್ಡ್‌ ಮಾಡಿದ ತಂಡ ಗೆದ್ದಿದೆ. ಹೀಗಾಗಿ ನ್ಯೂಜಿಲೆಂಡ್‌ ತಂಡವು ಆಸ್ಟ್ರೇಲಿಯಾ ವಿರುದ್ದ ಯಾವ ರೀತಿಯ ರಣತಂತ್ರ ಹೆಣೆಯಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಕೇನ್‌ ವಿಲಿಯಮ್ಸನ್‌ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾಗಿದ್ದರು. ಫೈನಲ್‌ನಲ್ಲಿ ಕಿವೀಸ್‌ ನಾಯಕ ಅಬ್ಬರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ರೋಚಕ ಕಾದಾಟದ ಮೂಲಕ ಫೈನಲ್‌ ಪ್ರವೇಶಿಸಿರುವ ಉಭಯ ತಂಡಗಳು: ಹೌದು, ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಬಲ್ಲ ನೆಚ್ಚಿನ ತಂಡಗಳೆಂದು ಗುರುತಿಸಿಕೊಂಡಿದ್ದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳಿಗೆ ಶಾಕ್‌ ಕೊಟ್ಟು ಕಿವೀಸ್‌ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ಗೆ ಲಗ್ಗೆಯಿಟ್ಟಿವೆ. ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಬಲಿಷ್ಠ ಇಂಗ್ಲೆಂಡ್ ಎದುರು 5 ವಿಕೆಟ್‌ಗಳ ಜಯ ಸಾಧಿಸಿ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇನ್ನೊಂದೆಡೆ ಆರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ದ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

T20 World Cup: Aus vs NZ ವಿಶ್ವ ಟಿ20ಗೆ ಇಂದು ಹೊಸ ಬಾಸ್‌..!

ಇಂದು ಹೊಸ ಚಾಂಪಿಯನ್ ಉದಯ: ನ್ಯೂಜಿಲೆಂಡ್‌ ಹಾಗೂ ಆಸ್ಪ್ರೇಲಿಯಾ ಎರಡೂ ತಂಡಗಳು ಮೊದಲ ಬಾರಿಗೆ ವಿಶ್ವಕಪ್‌ ಗೆಲ್ಲಲು ಎದುರು ನೋಡುತ್ತಿವೆ. ಆಸ್ಪ್ರೇಲಿಯಾ 2010ರಲ್ಲಿ ರನ್ನರ್‌-ಅಪ್‌ ಆಗಿತ್ತು. ನ್ಯೂಜಿಲೆಂಡ್‌ ಚೊಚ್ಚಲ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಮೇಲ್ನೋಟಕ್ಕೆ ಆಸ್ಟ್ರೇಲಿಯಾ ತಂಡವು ಕೊಂಚ ಬಲಿಷ್ಠವಾಗಿ ಕಾಣಿಸಿಕೊಂಡಿದ್ದರೂ ಸಹಾ ನ್ಯೂಜಿಲೆಂಡ್ ತಂಡವು ಯಾವುದೇ ಕ್ಷಣದಲ್ಲಾದರೂ ಸಹಾ ತಿರುಗೇಟು ನೀಡುವ ಸಾಮರ್ಥ್ಯ ಹೊಂದಿದೆ. 

ಸಂಭವನೀಯ ಆಟಗಾರರ ಪಟ್ಟಿ

ಆಸ್ಪ್ರೇಲಿಯಾ: ಆ್ಯರೋನ್‌ ಫಿಂಚ್‌(ನಾಯಕ), ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಶ್‌, ಸ್ಟೀವ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮಾರ್ಕಸ್‌ ಸ್ಟೋಯ್ನಿಸ್‌, ಮ್ಯಾಥ್ಯೂ ವೇಡ್‌, ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್, ಆ್ಯಡಂ ಜಂಪಾ, ಜೋಶ್‌ ಹೇಜಲ್‌ವುಡ್‌.

ನ್ಯೂಜಿಲೆಂಡ್‌: ಮಾರ್ಟಿನ್‌ ಗಪ್ಟಿಲ್‌, ಡ್ಯಾರೆಲ್‌ ಮಿಚೆಲ್‌, ಕೇನ್‌ ವಿಲಿಯಮ್ಸನ್‌(ನಾಯಕ), ಟಿಮ್‌ ಸೀಫರ್ಟ್‌, ಗ್ಲೆನ್‌ ಫಿಲಿಫ್ಸ್‌, ಜೇಮ್ಸ್‌ ನೀಶಮ್‌, ಮಿಚೆಲ್‌ ಸ್ಯಾಂಟ್ನರ್‌, ಟಿಮ್‌ ಸೌಥಿ, ಇಶ್‌ ಸೋಧಿ, ಟ್ರೆಂಟ್‌ ಬೌಲ್ಟ್‌, ಆ್ಯಡಂ ಮಿಲ್ನೆ.

ಸ್ಥಳ: ದುಬೈ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
 

click me!