ಕೋವಿಡ್‌ ಭೀತಿ: ಐಸಿಸಿ ಟಿ20 ವಿಶ್ವಕಪ್‌ ಯುಇಎಗೆ ಶಿಫ್ಟ್‌?

By Suvarna News  |  First Published Apr 28, 2021, 8:03 AM IST

ವರ್ಷಾಂತ್ಯದ ವೇಳೆಗೆ ಭಾರತದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಕೊರೋನಾ ವೈರಸ್ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ನವದೆಹಲಿ(ಏ.28): ಭಾರತದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಿಸಲು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ಇದೇ ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. 

ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಾಧ್ಯಮವೊಂದರ ವರದಿ ಪ್ರಕಾರ, ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ), ಯುಎಇನಲ್ಲಿರುವ ಕ್ರೀಡಾಂಗಣಗಳನ್ನು ವಿಶ್ವಕಪ್‌ ಆಯೋಜನೆಗೆ ಸಿದ್ಧವಿಡುವಂತೆ ಅಲ್ಲಿನ ಕ್ರಿಕೆಟ್‌ ಮಂಡಳಿಗೆ ತಿಳಿಸಿದೆ ಎನ್ನಲಾಗಿದೆ.

Tap to resize

Latest Videos

ಭಾರತದ 9 ನಗರಗಳಲ್ಲಿ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಗಳು?

ವಿಶ್ವಕಪ್‌ಗೆ ಇನ್ನೂ 6 ತಿಂಗಳು ಬಾಕಿ ಇದ್ದು, ಆ ವೇಳೆಗೆ ಭಾರತದಲ್ಲಿ ಸೋಂಕು ನಿಯಂತ್ರಣಕ್ಕೆ ಬರಬಹುದು ಎನ್ನುವ ನಿರೀಕ್ಷೆ ಇದೆ. ಆದರೆ ಐಸಿಸಿ ತನ್ನ ಬಳಿ ಇರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಅಲ್ಲದೇ ಐಪಿಎಲ್‌ ಮಾದರಿಯಲ್ಲೇ ಬಯೋ ಬಬಲ್‌ನೊಳಗೆ ವಿಶ್ವಕಪ್‌ ಟೂರ್ನಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ. ಟಿ20 ವಿಶ್ವಕಪ್‌ ಕಳೆದ ವರ್ಷವೇ ಆಸ್ಪ್ರೇಲಿಯಾದಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಟೂರ್ನಿಯನ್ನು ಮುಂದೂಡಲಾಗಿತ್ತು.

ಈಗಾಗಲೇ ಬಿಸಿಸಿಐ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ  ಬೆಂಗಳೂರು, ಅಹಮದಾಬಾದ್ ಸೇರಿದಂತೆ ಭಾರತದ 9 ನಗರಗಳ ಹೆಸರನ್ನು ಶಾರ್ಟ್‌ಲಿಸ್ಟ್‌ ಮಾಡಿದೆ. ಟಿ20 ವಿಶ್ವಕಪ್‌ ಟೂರ್ನಿ ಭಾರತದಲ್ಲೇ ನಡೆಯಲಿದೆಯೋ ಅಥವಾ ಯುಎಇಗೆ ಸ್ಥಳಾಂತರವಾಗಲಿದೆಯೇ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕಿದೆ.

click me!