T20 World Cup ಪಾಕಿಸ್ತಾನ ಎದುರು ಟಾಸ್ ಗೆದ್ದ ನೆದರ್‌ಲೆಂಡ್ಸ್ ಬ್ಯಾಟಿಂಗ್ ಆಯ್ಕೆ

Published : Oct 30, 2022, 12:34 PM IST
T20 World Cup ಪಾಕಿಸ್ತಾನ ಎದುರು ಟಾಸ್ ಗೆದ್ದ ನೆದರ್‌ಲೆಂಡ್ಸ್ ಬ್ಯಾಟಿಂಗ್ ಆಯ್ಕೆ

ಸಾರಾಂಶ

* ನೆದರ್‌ಲೆಂಡ್ಸ್‌-ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ * ಟಾಸ್ ಗೆದ್ದ ನೆದರ್‌ಲೆಂಡ್ಸ್‌ ತಂಡ ಬ್ಯಾಟಿಂಗ್ ಆಯ್ಕೆ * ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ಪರ್ತ್‌(ಅ.30): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 29ನೇ ಪಂದ್ಯದಲ್ಲಿಂದು ನೆದರ್‌ಲೆಂಡ್ಸ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನೆದರ್‌ಲೆಂಡ್ಸ್‌ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಉಭಯ ತಂಡಗಳು ಈಗಾಗಲೇ ತಲಾ ಎರಡು ಪಂದ್ಯಗಳನ್ನಾಡಿದ್ದು, ಎರಡೂ ಪಂದ್ಯಗಳಲ್ಲೂ ಸೋಲಿನ ಕಹಿಯೊಂಡಿದ್ದು, ಇದೀಗ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.

ಪಾಕಿಸ್ತಾನ ಹಾಗೂ ನೆದರ್‌ಲೆಂಡ್ಸ್‌ ತಂಡಗಳ ನಡುವಿನ ಕಾದಾಡಕ್ಕೆ ಇಲ್ಲಿನ ಪರ್ತ್ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಹೈದರ್‌ ಅಲಿ ಬದಲಿಗೆ ಫಖರ್ ಜಮಾನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ನೆದರ್‌ಲೆಂಡ್ಸ್‌ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿದೆ.

T20 World Cup ಬಾಬರ್ ಅಜಂ ನೇತೃತ್ವದ ಪಾಕಿಸ್ತಾನಕ್ಕಿಂದು Do or Die ಪಂದ್ಯ..!

ಬ್ಯಾಟಿಂಗ್‌ ಆಧಾರಸ್ತಂಭ ಎನಿಸಿರುವ ಬಾಬರ್‌ ಹಾಗೂ ಮೊಹಮದ್‌ ರಿಜ್ವಾನ್‌ ಮಂಕಾಗಿರುವುದು ತಂಡದ ಹಿನ್ನಡೆಗೆ ಪ್ರಮುಖ ಕಾರಣ. ವೇಗಿ ಶಾಹೀನ್‌ ಅಫ್ರಿದಿ ಮೊನಚು ಕಳೆದುಕೊಂಡಿರುವುದು ಕೂಡ ತಂಡದ ತಲೆನೋವು ಹೆಚ್ಚಿಸಿದೆ. ಮತ್ತೊಂದೆಡೆ ನೆದರ್‌ಲೆಂಡ್ಸ್ ಆಚ್ಚರಿ ಫಲಿತಾಂಶ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ಇದೇ ವರ್ಷ ಆಗಸ್ಟಲ್ಲಿ ನಡೆದ ಏಕದಿನ ಸರಣಿಯಲ್ಲಿ ಪಾಕಿಸ್ತಾನಕ್ಕೆ ಡಚ್‌ ತಂಡ ಪ್ರಬಲ ಪೈಪೋಟಿ ನೀಡಿತ್ತು ಎನ್ನುವುದನ್ನು ಮರೆಯುವಂತಿಲ್ಲ.

ತಂಡಗಳು ಹೀಗಿವೆ ನೋಡಿ

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಂ(ನಾಯಕ), ಫಖರ್ ಜಮಾನ್‌, ಶಾನ್ ಮಸೂದ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸೀಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ.

ನೆದರ್‌ಲೆಂಡ್ಸ್‌: ವಿಕ್ರಂಜಿತ್ ಸಿಂಗ್, ಮ್ಯಾಕ್ಸ್‌ ಒ'ಡೌಡ್, ಬಾಸ್ ಡೆ ಲೀಡೆ, ಕಾಲಿನ್ ಅಕರ್‌ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್‌(ನಾಯಕ&ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೊಗನ್‌ ವ್ಯಾನ್ ಬೀಕ್, ಶೆರಿಜ್ ಅಹಮದ್, ಫ್ರೆಡ್ ಕ್ಲಾಸೇನ್, ಪೌಲ್ ವ್ಯಾನ್ ಮೀಕ್ರೆನ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2025ರಲ್ಲಿ ಪಾಕಿಸ್ತಾನಿಯರು ಗೂಗಲ್‌ ಸರ್ಚ್‌ನಲ್ಲಿ ಹುಡುಕಿದ್ದು ಟೀಂ ಇಂಡಿಯಾದ ಈ ಆಟಗಾರನನ್ನು! ಆದ್ರೆ ಅದು ಕೊಹ್ಲಿ, ರೋಹಿತ್ ಅಲ್ಲ!
IPL Mini Auction 2026: 1355 ಆಟಗಾರರಲ್ಲಿ 350 ಪ್ಲೇಯರ್ಸ್ ಶಾರ್ಟ್‌ಲಿಸ್ಟ್! ಇಲ್ಲಿದೆ ಹರಾಜಿನ ಕಂಪ್ಲೀಟ್ ಡೀಟೈಲ್ಸ್