
ಶಾರ್ಜಾ(ನ.05): ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು (New Zealand Cricket) ನಮೀಬಿಯಾ ಎದುರು 52 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರ ಜತೆಗೆ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇದರ ಜತೆಗೆ ಸೆಮೀಸ್‌ಗೆ ಮತ್ತಷ್ಟು ಹತ್ತಿರವಾಗಿದೆ.
ಇಲ್ಲಿನ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ (Sharjah Cricket Stadium) ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 164 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ನಮೀಬಿಯಾ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಸ್ಟೆಫನ್ ಬಾರ್ಡ್ ಹಾಗೂ ಮಿಚೆಲ್ ವ್ಯಾನ್ ಲಿಂಗೆನ್ ಜೋಡಿ 47 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟಿತು. ಈ ಜೋಡಿಯನ್ನು ಬೇರ್ಪಡಿಸಲು ಜೇಮ್ಸ್ ನೀಶಮ್ (James Neesham) ಯಶಸ್ವಿಯಾದರು. 25 ಎಸೆತಗಲ್ಲಿ 25 ರನ್ ಬಾರಿಸಿದ್ದ ಲಿಂಗೆನ್ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಸ್ಟಿಫನ್ ಬಾರ್ಡ್ 21 ರನ್ ಬಾರಿಸಿ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ನಾಯಕ ಎರಾಸ್ಮಸ್ ಕೇವಲ 3 ರನ್ ಬಾರಿಸಿ ಸೋಧಿಗೆ ವಿಕೆಟ್ ಒಪ್ಪಿಸಿದರು.
T20 World Cup: NZ vs NAM ನಮೀಬಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ನ್ಯೂಜಿಲೆಂಡ್
ಕೇವಲ 6 ರನ್ ಅಂತದಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ನಮೀಬಿಯಾ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಜೇನ್ ಗ್ರೀನ್ ಹಾಗೂ ಡೇವಿಡ್ ವೀಸಾ ಕೆಲಕಾಲ ತಂಡಕ್ಕೆ ಆಸರೆಯಾದರು. ಡೇವಿಡ್ ವೀಸಾ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಜೇನ್ ಗ್ರೀನ್ 23 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ನಮೀಬಿಯಾ ಸೋಲಿನ ಹಾದಿ ಖಚಿತವಾಯಿತು.
ಕಿವೀಸ್ ಮಾರಕ ವೇಗಿಗಳಾದ ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರೆ, ಜೇಮ್ಸ್ ನೀಶಮ್, ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್ ತಲಾ ಒಂದೊಂದು ವಿಕೆಟ್ ಪಡೆದರು.
Ind vs NZ Test: ಟೀಂ ಇಂಡಿಯಾ ಎದುರಿನ ಟೆಸ್ಟ್ ಸರಣಿಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ
ಇದಕ್ಕೂ ಮೊದಲು ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನ್ಯೂಜಿಲೆಂಡ್ ಉತ್ತಮ ಅರಂಭ ಪಡೆಯಲು ವಿಫಲರಾದರೂ ಸಹಾ ಕೊನೆಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಜೇಮ್ಸ್ ನೀಶಮ್ ಹಾಗೂ ಗ್ಲೆನ್ ಫಿಲಿಫ್ಸ್ ಆಸರೆಯಾದರು. 5ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ ಮುರಿಯದ 76 ರನ್‌ಗಳ ಜತೆಯಾಟವಾಡುವ ಮೂಲಕ ತಂಡ ಸ್ಪರ್ಧಾತ್ಮಕ ಗುರಿ ದಾಖಲಿಸಲು ಸಾಧ್ಯವಾಯಿತು. ಫಿಲಿಫ್ಸ್ 21 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 39 ರನ್ ಬಾರಿಸಿದರೆ, ಜೇಮ್ಸ್ ನೀಶಮ್ 23 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 35 ರನ್ ಬಾರಿಸಿದರು. ಕೊನೆಯ 4 ಓವರ್‌ಗಳಲ್ಲಿ ಈ ಜೋಡಿ 67 ರನ್‌ಗಳ ಜತೆಯಾಟ ನಿಭಾಯಿಸಿತು.
ಬ್ಯಾಟಿಂಗ್‌ನಲ್ಲಿ ಅಜೇಯ 35 ರನ್ ಬಾರಿಸಿದ್ದಲ್ಲದೇ ಬೌಲಿಂಗ್‌ನಲ್ಲಿ ಒಂದು ವಿಕೆಟ್ ಕಬಳಿಸಿ ಆಲ್ರೌಂಡ್ ಪ್ರದರ್ಶನ ತೋರಿದ ಜೇಮ್ಸ್ ನೀಶಮ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.