T20 World Cup: ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ವಿಶೇಷ ಆಸನ ವ್ಯವಸ್ಥೆ: ಫೋಟೋ ವೈರಲ್‌!

By Suvarna NewsFirst Published Oct 24, 2021, 8:54 AM IST
Highlights

* ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್ 12 ಹಂತಕ್ಕೆ ಚಾಲನೆ

* ವಿಶೇಷ ಸನ್ನೀವೇಷಕ್ಕೆ ಸಾಕ್ಷಿಯಾದ ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ

* ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೈದಾನದಲ್ಲಿ ವಿಶೇಷ ವ್ಯವಸ್ಥೆ

ಅಬುಧಾಬಿ(ಅ.24): ಬಹುನಿರೀಕ್ಷಿತ ಐಸಿಸಿ ವಿಶ್ವಕಪ್ (ICC T20 World Cup) ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಶನಿವಾರದಿಂದ ಅಧಿಕೃತ ಚಾಲನೆ ಸಿಕ್ಕಿದೆ. ಸೂಪರ್ 12 ಹಂತದ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa Cricket) ಹಾಗೂ ಆಸ್ಟ್ರೇಲಿಯಾ (Australia Cricket) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯ ಹಲವು ವಿಶೇಷಗಳಿಗೆ ಸಾಕ್ಷಿಯಾಯಿತು. 

ಹೌದು, ಟಿ20 ವಿಶ್ವಕಪ್‌ ವೀಕ್ಷಿಸಲು ಕ್ರೀಡಾಂಗಣಗಳಿಗೆ ಆಗಮಿಸುವ ಪ್ರೇಕ್ಷಕರಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ. ಅಬುಧಾಬಿಯ ಶೇಖ್‌ ಜಾಯೆದ್‌ ಕ್ರೀಡಾಂಗಣ ಹಾಗೂ ದುಬೈ ಕ್ರೀಡಾಂಗಣದಲ್ಲಿರುವ ಹುಲ್ಲಿನ ದಿಬ್ಬಗಳ ಮೇಲೆ ಚೌಕಾಕಾರದ ಪೆಟ್ಟಿಗೆಗಳನ್ನು ಇರಿಸಲಾಗಿದೆ. 

 
 
 
 
 
 
 
 
 
 
 
 
 
 
 

A post shared by ICC (@icc)

T20 World Cup: ಆಫ್ರಿಕಾ ಎದುರು ಆಸ್ಟ್ರೇಲಿಯಾಗೆ ರೋಚಕ ಜಯ

ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸುವವರು ಇದರೊಳಗೆ ಕೂತು ಪಂದ್ಯ ವೀಕ್ಷಿಸಬಹುದು. ಒಂದು ಚೌಕದೊಳಗೆ ಗರಿಷ್ಠ 4 ಮಂದಿ ಕೂರಬಹುದು ಎಂದು ಆಯೋಜಕರು ತಿಳಿಸಿದ್ದಾರೆ. ಈ ವ್ಯವಸ್ಥೆಯಿಂದಾಗಿ ಸಾಮಾಜಿಕ ಅಂತರ (Social Distance) ಕಾಯ್ದುಕೊಳ್ಳಲು ನೆರವಾಗಲಿದೆ. ಸಾಮಾಜಿಕ ತಾಣದಲ್ಲಿ ಇದರ ಫೋಟೋ, ವಿಡಿಯೋ ವೈರಲ್‌ ಆಗಿದೆ.

ಟಿ20 ವಿಶ್ವಕಪ್‌ನಲ್ಲಿ ಮೊದಲ ಬಾರಿ ಡಿಆರ್‌ಎಸ್‌ ಬಳಕೆ

ಅಬುಧಾಬಿ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ ಡಿಆರ್‌ಎಸ್‌ (DRS) (ಅಂಪೈರ್‌ ತೀರ್ಪು ಮರುಪರಿಶೀಲನಾ ವ್ಯವಸ್ಥೆ) ನಿಯಮವನ್ನು ಬಳಕೆ ಮಾಡಲಾಯಿತು. ಇನ್ನಿಂಗ್ಸ್‌ನಲ್ಲಿ ಪ್ರತೀ ತಂಡಕ್ಕೆ 2 ಬಾರಿ ಡಿಆರ್‌ಎಸ್‌ ಬಳಕೆಗೆ ಅವಕಾಶವಿರಲಿದೆ.

T20 World Cup: ಭಾರತ vs ಪಾಕಿಸ್ತಾನ ನಡುವಿನ ಪಂದ್ಯ ಗೆಲ್ಲೋರು ಯಾರು..?

ಶನಿವಾರ ಆಸ್ಪ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಡೇವಿಡ್‌ ಮಿಲ್ಲರ್‌ (David Miller) ಡಿಆರ್‌ಎಸ್‌ ಬಳಸಿದರು. ಟಿ20 ವಿಶ್ವಕಪ್‌ನಲ್ಲಿ ಡಿಆರ್‌ಎಸ್‌ ಬಳಕೆ ಮಾಡಿದ ಮೊದಲ ಕ್ರಿಕೆಟಿಗ ಎನಿಸಿದರು. ಆ್ಯಡಂ ಜಂಪಾ (Adam Zampa) ಎಸೆತದಲ್ಲಿ ಮಿಲ್ಲರ್‌ ಎಲ್‌ಬಿ ಬಲೆಗೆ ಬಿದ್ದಿದ್ದರು. ಅಂಪೈರ್‌ ತೀರ್ಪು ಪ್ರಶ್ನಿಸಿ ಮಿಲ್ಲರ್‌ ಡಿಆರ್‌ಎಸ್‌ ಮೊರೆ ಹೋದರೂ ಪ್ರಯೋಜನವಾಗಲಿಲ್ಲ.

ಹರಿಣಗಳ ವಿರುದ್ದ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ

ಸೂಪರ್ 12 ಹಂತದ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಆಸ್ಟ್ರೇಲಿಯಾ ತಂಡವು 5 ವಿಕೆಟ್‌ಗಳ ಅಂತರದ ರೋಚಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ದಕ್ಷಿಣ ಆಫ್ರಿಕಾ ತಂಡವು ಆಸೀಸ್ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಪರಿಣಾಮ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 118 ರನ್‌ ಬಾರಿಸಿತ್ತು. ದಕ್ಷಿಣ ಆಫ್ರಿಕಾ ಪರ ಏಯ್ಡನ್ ಮಾರ್ಕ್‌ರಮ್ 40 ಹಾಗೂ ಕಗಿಸೋ ರಬಾಡ 19 ರನ್‌ ಬಾರಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ.

T20 World Cup: ಭಾರತ ವಿರುದ್ದದ ಪಂದ್ಯಕ್ಕೆ 12 ಆಟಗಾರರನ್ನೊಳಗೊಂಡ ಪಾಕಿಸ್ತಾನ ತಂಡ ಪ್ರಕಟ

ಇನ್ನು ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಒಂದು ಹಂತದಲ್ಲಿ 81 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಆರನೇ ವಿಕೆಟ್‌ಗೆ ಮಾರ್ಕಸ್‌ ಸ್ಟೋಯ್ನಿಸ್ ಹಾಗೂ ಮ್ಯಾಥ್ಯೂ ವೇಡ್‌ ಸಮಯೋಚಿತ ಜತೆಯಾಟವಾಡುವ ಮೂಲಕ ತಂಡವನ್ನು ರೋಚಕವಾಗಿ ಗೆಲುವಿನ ದಡ ಸೇರಿಸಿದರು.
 

click me!