T20 World Cup: ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಶ್ರೀಲಂಕಾ

By Naveen Kodase  |  First Published Oct 25, 2022, 6:24 PM IST

ಆಸ್ಟ್ರೇಲಿಯಾಗೆ ಸವಾಲಿನ ಗುರಿ ನೀಡಿದ ಶ್ರೀಲಂಕಾ
ಆಸ್ಟ್ರೇಲಿಯಾಗೆ 158 ರನ್‌ಗಳ ಸವಾಲಿನ ಗುರಿ ನೀಡಿದ ಲಂಕಾ
ಆಕರ್ಷಕ ಬ್ಯಾಟಿಂಗ್ ನಡೆಸಿದ ಪಥುಮ್‌ ನಿಸ್ಸಾಂಕ


ಪರ್ತ್‌(ಅ.25): ಪಥುಮ್‌ ನಿಸ್ಸಾಂಕ(40), ಧನಂಜಯ ಡಿ ಸಿಲ್ವಾ(26) ಹಾಗೂ ಚರಿತ್ ಅಸಲಂಕಾ(38*) ಸಮಯೋಚಿತ ಬ್ಯಾಟಿಂಗ್‌ ನೆರವಿನಿಂದ 6 ವಿಕೆಟ್‌ ಕಳೆದುಕೊಂಡು 157 ರನ್‌ ಬಾರಿಸಿದ್ದು, ಆತಿಥೇಯ ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ಈಗಾಗಲೇ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಆಸ್ಟ್ರೇಲಿಯಾ ತಂಡವು ಸೆಮೀಸ್‌ಗೇರಬೇಕಿದ್ದರೇ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಇಲ್ಲಿನ ಪರ್ತ್‌ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡವು ಆರಂಭದಲ್ಲೇ ಕುಸಾಲ್ ಮೆಂಡಿಸ್(5) ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದರು. ಇನ್ನು ಎರಡನೇ ವಿಕೆಟ್‌ಗೆ ಪಥುಮ್ ನಿಸ್ಸಾಂಕ ಹಾಗೂ ಧನಂಜಯ ಡಿ ಸಿಲ್ವಾ 69 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಧನಂಜಯ ಡಿ ಸಿಲ್ವಾ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಪಥುಮ್ ನಿಸ್ಸಾಂಕ 40 ರನ್ ಬಾರಿಸಿ ರನೌಟ್‌ ಆದರು.

Tap to resize

Latest Videos

undefined

ಲಂಕಾಗೆ ಅಸರೆಯಾದ ಅಸಲಂಕಾ: 16 ಓವರ್ ಅಂತ್ಯದ ವೇಳೆಗೆ ಶ್ರೀಲಂಕಾ ತಂಡವು 5 ವಿಕೆಟ್ ಕಳೆದುಕೊಂಡು ಕೇವಲ 111 ರನ್ ಗಳಿಸಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ನಿರ್ಣಾಯಕ ಘಟ್ಟದಲ್ಲಿ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 38 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಕೊನೆಯಲ್ಲಿ ಚಮಿಕಾ ಕರುಣರತ್ನೆ 7 ಎಸೆತಗಳಲ್ಲಿ ಅಜೇಯ 14 ರನ್ ಬಾರಿಸಿ ಉತ್ತಮ ಸಾಥ್ ನೀಡಿದರು.

T20 World Cup: ಲಂಕಾ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ಉಭಯ ತಂಡಗಳಲ್ಲೂ ಒಂದು ಬದಲಾವಣೆ

ಆಸ್ಟ್ರೇಲಿಯಾ ತಂಡದ ಪರ ಜೋಶ್ ಹೇಜಲ್‌ವುಡ್‌, ಮಿಚೆಲ್ ಸ್ಟಾರ್ಕ್‌, ಪ್ಯಾಟ್ ಕಮಿನ್ಸ್‌, ಆಸ್ಟನ್ ಏಗರ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ತಲಾ ಒಂದೊಂದು ವಿಕೆಟ್‌ ಪಡೆದರು.

click me!