T20 World Cup ಸೂರ್ಯ, ರಾಹುಲ್ ಆಕರ್ಷಕ ಫಿಫ್ಟಿ; ಜಿಂಬಾಬ್ವೆಗೆ ಕಠಿಣ ಗುರಿ ನೀಡಿದ ಭಾರತ

By Naveen Kodase  |  First Published Nov 6, 2022, 3:16 PM IST

ಜಿಂಬಾಬ್ವೆ ಎದುರು ಬೃಹತ್ ಮೊತ್ತ ಕಲೆಹಾಕಿದ ಟೀಂ ಇಂಡಿಯಾ
ಆಕರ್ಷಕ ಅರ್ಧಶತಕ ಸಿಡಿಸಿ ಸಂಭ್ರಮಿಸಿದ ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್
ಜಿಂಬಾಬ್ವೆಗೆ ಗೆಲ್ಲಲು 187 ರನ್‌ಗಳ ಗುರಿ ನೀಡಿದ ಟೀಂ ಇಂಡಿಯಾ


ಮೆಲ್ಬರ್ನ್‌(ನ.06): ಆರಂಭಿಕ ಬ್ಯಾಟರ್‌ ಕೆ ಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 186 ರನ್‌ ಕಲೆಹಾಕಿದ್ದು, ಜಿಂಬಾಬ್ವೆ ತಂಡಕ್ಕೆ ಸವಾಲಿನ ಗುರಿ ನೀಡಿದೆ. ಈಗಾಗಲೇ ಸೆಮೀಸ್ ಹಾದಿಯನ್ನು ಖಚಿತಪಡಿಸಿಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಅಭ್ಯಾಸಕ್ಕಾಗಿ ಬಳಸಿಕೊಳ್ಳುತ್ತಿದೆ.

ಇಲ್ಲಿನ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಟೀಂ ಇಂಡಿಯಾ, ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೋಹಿತ್ ಶರ್ಮಾ ಕೇವಲ 15 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ಮತ್ತೊಮ್ಮೆ ದೊಡ್ಡ ಮೊತ್ತ ಕಲೆಹಾಕಲು ವಿಫಲವಾದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್‌ 60 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 2 ಬೌಂಡರಿ ಸಹಿತ 26 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

Tap to resize

Latest Videos

undefined

ಕೆ ಎಲ್ ರಾಹುಲ್ ಆಕರ್ಷಕ ಅರ್ಧಶತಕ: ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದ ಕೆ.ಎಲ್. ರಾಹುಲ್ ಇದೀಗ ಮತ್ತೊಂದು ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 51 ರನ್ ಬಾರಿಸಿ ತಂಡಕ್ಕೆ ಉಪಯುಕ್ತ ರನ್ ಕಾಣಿಕೆ ನೀಡಿದರು. ಟೀಂ ಇಂಡಿಯಾ ಸೆಮೀಸ್‌ಗೆ ಹತ್ತಿರವಾಗಿರುವ ಬೆನ್ನಲ್ಲೇ ರಾಹುಲ್‌ ಫಾರ್ಮ್‌ಗೆ ಮರಳಿರುವುದು ತಂಡದ ಪಾಲಿಗೆ ಪ್ಲೆಸ್ ಪಾಯಿಂಟ್ ಎನಿಸಿದೆ.

ರಿಷಭ್ ಪಂತ್ ಫೇಲ್: ದಿನೇಶ್ ಕಾರ್ತಿಕ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ರಿಷಭ್ ಪಂತ್, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ವಿಫಲರಾದರು. ಪಂತ್ ಕೇವಲ 5 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ ಬಾರಿಸಿ ಸೀನ್ ವಿಲಿಯಮ್ಸ್‌ಗೆ ವಿಕೆಟ್ ಒಪ್ಪಿಸಿದರು. 

ಪಾಂಡ್ಯ-ಸೂರ್ಯ ಸ್ಪೋಟಕ ಜತೆಯಾಟ: ಒಂದು ಹಂತದಲ್ಲಿ 101 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ 5ನೇ ವಿಕೆಟ್‌ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 65 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ 23 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 61 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 185ರ ಗಡಿದಾಟಿಸಿದರು.

click me!