* ಬಾಂಗ್ಲಾದೇಶಕ್ಕೆ 143 ರನ್‌ಗಳ ಗುರಿ ನೀಡಿದ ವೆಸ್ಟ್ ಇಂಡೀಸ್
* ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಅಗ್ರಕ್ರಮಾಂಕದ ಆಟಗಾರರು
* ಸ್ಪೋಟಕ ಬ್ಯಾಟಿಂಗ್ ನಡೆಸಿದ ನಿಕೋಲಸ್ ಪೂರನ್
ಶಾರ್ಜಾ(ಅ.29): ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಕೀರನ್ ಪೊಲ್ಲಾರ್ಡ್ ನೇತೃತ್ವದ ವಿಂಡೀಸ್ 7 ವಿಕೆಟ್ ಕಳೆದುಕೊಂಡು 142 ರನ್ ಬಾರಿಸಿದೆ. ಈ ಮೂಲಕ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ (West Indies Cricket Team) ಉತ್ತಮ ಆರಂಭ ಪಡೆಯಲು ಮತ್ತೊಮ್ಮೆ ವಿಫಲವಾಯಿತು. ಎವಿನ್ ಲೆವಿಸ್(06) ಹಾಗೂ ಕ್ರಿಸ್ ಗೇಲ್ (Chris Gayle) (04) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಈ ವೇಳೆ ಕ್ರೀಸ್‌ಗಿಳಿದ ರೋಸ್ಟನ್ ಚೇಸ್ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಲು ಮುಂದಾದರು. ಯಾಕೆಂದರೆ ಮತ್ತೊಂದು ತುದಿಯಲ್ಲಿ ವಿಂಡೀಸ್‌ನ ಯಾವೊಬ್ಬ ಬ್ಯಾಟ್ಸ್‌ಮನ್ ಕೂಡಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿರಲಿಲ್ಲ.
undefined
ರೋಸ್ಟನ್ ಚೇಸ್ ಹೊರತುಪಡಿಸಿ ಅಗ್ರಕ್ರಮಾಂಕದ ಅಗ್ರಕ್ರಮಾಂಕದ ಐವರು ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಶಿಮ್ರೊನ್ ಹೆಟ್ಮೇಯರ್(9), ಕೀರನ್ ಪೊಲ್ಲಾರ್ಡ್ ರಿಟೈರ್ಡ್ ಹರ್ಟ್ ಆದರು. ಬಳಿಕ ಕೊನೆಯಲ್ಲಿ ಕ್ರೀಸ್‌ಗಿಳಿದು ಸಿಕ್ಸರ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 140ರ ಗಡಿ ದಾಟಿಸಿದರು ಇನ್ನು ಆಂಡ್ರೆ ರಸೆಲ್ ಶೂನ್ಯ ಸುತ್ತಿ ವಿಕೆಟ್ ಒಪ್ಪಿಸಿದರು.
ICC T20 World Cup: ಮೊದಲ ಗೆಲುವಿಗಾಗಿ ಬಾಂಗ್ಲಾ-ವಿಂಡೀಸ್ ಫೈಟ್!
ಆಸರೆಯಾದ ಪೂರನ್-ಚೇಸ್: ಒಂದು ಹಂತದಲ್ಲಿ 62 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ ಹಾಗೂ ರೋಸ್ಟನ್ ಚೇಸ್ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರೋಸ್ಟನ್ ಚೇಸ್ 46 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 39 ರನ್ ಬಾರಿಸಿದರು. ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ನಿಕೋಲಸ್ ಪೂರನ್ 22 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 40 ರನ್ ಬಾರಿಸಿ 18ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.
T20 World Cup 2021: ವಾರ್ನರ್ ಅಬ್ಬರಕ್ಕೆ ಸೋಲಿಗೆ ಶರಣಾದ ಶ್ರೀಲಂಕಾ, 2ನೇ ಸ್ಥಾನಕ್ಕೆ ಆಸ್ಟ್ರೇಲಿಯಾ!
ಕೊನೆಯಲ್ಲಿ ಜೇಸನ್ ಹೋಲ್ಡರ್ 5 ಎಸೆತಗಳನ್ನು ಎದುರಿಸಿ 2 ಸಿಕ್ಸರ್ ಸಹಿತ ಅಜೇಯ 15 ರನ್ ಬಾರಿಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಬಾಂಗ್ಲಾದೇಶ ಪರ ಮೆಹದಿ ಹಸನ್, ಮುಷ್ತಾಫಿಜುರ್ ರೆಹಮಾನ್ ಹಾಗೂ ಶೌರಿಪುಲ್ ಇಸ್ಲಾಂ ತಲಾ 2 ವಿಕೆಟ್ ಕಬಳಿಸುವ ಮೂಲಕ ವಿಂಡೀಸ್ ರನ್ ವೇಗಕ್ಕೆ ಕಡಿವಾಣ ಹಾಕಿದರು.
ಸದ್ಯ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಸೂಪರ್ 12 ಹಂತದಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳಲ್ಲೂ ಆಘಾತಕಾರಿ ಸೋಲು ಕಂಡಿದ್ದು, ಸೆಮೀಸ್ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೇ, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ವೆಸ್ಟ್ ಇಂಡೀಸ್ ತಂಡವು ಇದೀಗ ಗ್ರೂಪ್ ಹಂತದಲ್ಲೇ ಹೊರಬೀಳುವ ಆತಂಕಕ್ಕೆ ಸಿಲುಕಿದೆ. ಆಂಡ್ರೆ ರಸೆಲ್, ಕ್ರಿಸ್ ಗೇಲ್, ಡ್ವೇನ್ ಬ್ರಾವೋ, ಶಿಮ್ರೊನ್ ಹೆಟ್ಮೇಯರ್ ಅವರಂತಹ ಟಿ20 ಸ್ಪೆಷಲಿಸ್ಟ್‌ಗಳು ವೈಫಲ್ಯ ಅನುಭವಿಸುತ್ತಿರುವುದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ.
ಸಂಕ್ಷಿಪ್ತ ಸ್ಕೋರ್
ವೆಸ್ಟ್ ಇಂಡೀಸ್: 124/7