
ದುಬೈ(ಸೆ.09): ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ತಂಡ 5 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ವೈಟ್‌ವಾಷ್ ಮುಖಭಂಗದಿಂದ ಫಿಂಚ್ ಪಡೆ ಪಾರಾಗಿದೆ. ಇದರ ಬೆನ್ನಲ್ಲೇ ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪ್ರಕಟಗೊಂಡಿದ್ದು, ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರಿದೆ.
ಮೊದಲೆರಡು ಟಿ20 ಪಂದ್ಯಗಳನ್ನು ರೋಚಕವಾಗಿ ಗೆಲ್ಲುವುದರ ಮೂಲಕ ಸರಣಿ ಕೈವಶ ಮಾಡಿಕೊಳ್ಳುವುದರ ಜತೆಗೆ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ನಂ.1 ಸ್ಥಾನದಿಂದ ಇಂಗ್ಲೆಂಡ್ ಕೆಳಗಿಳಿದಿದೆ. ಇದೀಗ 275 ರೇಟಿಂಗ್ ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನ ಅಲಂಕರಿಸಿದೆ.
ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, 271 ಅಂಕಗಳೊಂದಿಗೆ ಇಂಗ್ಲೆಂಡ್ ಎರಡನೇ ಹಾಗೂ 266 ಅಂಕಗಳೊಂದಿಗೆ ಭಾರತ ಮೂರನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ಹಾಗೂ ಆಫ್ಘಾನಿಸ್ತಾನ ತಂಡಗಳು ಕ್ರಮವಾಗಿ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ಇವರೇ ನೋಡಿ, ಆರೆಂಜ್ ಕ್ಯಾಪ್ ಗೆದ್ದ 12 ಸ್ಫೋಟಕ ಬ್ಯಾಟ್ಸ್‌ಮನ್‌ಗಳು..!
ಇಂಗ್ಲೆಂಡ್ ವಿರುದ್ಧ ಸರಣಿ ಸೋತರೂ ಆಸ್ಟ್ರೇಲಿಯಾ ಕೊನೆಯ ಪಂದ್ಯವನ್ನು ಗೆದ್ದು ನಂ.1 ಸ್ಥಾನಕ್ಕೇರಿ ತೃಪ್ತಿಪಟ್ಟುಕೊಳ್ಳುವಂತಹ ಸಾಧನೆ ಮಾಡಿದೆ.
ಟಿ20 ತಂಡಗಳ ಶ್ರೇಯಾಂಕ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.