
ದುಬೈ(ಡಿ.31): ಪಾಕಿಸ್ತಾನ ವಿರುದ್ದ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ವರ್ಷಾಂತ್ಯದಲ್ಲಿ ನೂತನವಾಗಿ ಬಿಡುಗಡೆಯಾದ ಐಸಿಸಿ ಬ್ಯಾಟ್ಸ್‌ಮನ್‌ಗಳ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸ್ಟೀವ್ ಸ್ಮಿತ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮೊದಲು ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದರು. ಸ್ಟೀವ್ ಸ್ಮಿತ್ ಹಾಗೂ ವಿರಾಟ್ ಕೊಹ್ಲಿ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿದ್ದರು. ಪಿತೃತ್ವದ ರಜೆಯಲ್ಲಿರುವ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ (0 ಮತ್ತು 8) ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಸ್ಟೀವ್ ಸ್ಮಿತ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕೇನ್ ವಿಲಿಯಮ್ಸನ್ ಈ ಮೊದಲು 2015ರಲ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದ್ದರು. ಅದಾದ ಬಳಿಕ ಸ್ಟೀವ್ ಸ್ಮಿತ್ ಹಾಗೂ ವಿರಾಟ್ ಕೊಹ್ಲಿ ಉಳಿದ ಬ್ಯಾಟ್ಸ್‌ಮನ್‌ಗಳಿಗೆ ನಂ.1 ಸ್ಥಾನಕ್ಕೇರಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸಿದ ಸ್ಟೀವ್ ಸ್ಮಿತ್ 5 ಸ್ಥಾನ ಮೇಲೇರಿ 6ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಮಾರ್ನಸ್ ಲಬುಶೇನ್ ಹಾಗೂ ಬಾಬರ್ ಅಜಂ ಕ್ರಮವಾಗಿ 4 ಹಾಗೂ 5ನೇ ಸ್ಥಾನದಲ್ಲಿ ಭದ್ರವಾಗಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ದಾಖಲಾದ 5 ಅಪರೂಪದ ದಾಖಲೆಗಳಿವು..!
ಇನ್ನು ಬೌಲರ್‌ಗಳ ವಿಭಾಗದಲ್ಲಿ ಆಸೀಸ್ ವೇಗಿ ಪ್ಯಾಟ್ ಕಮಿನ್ಸ್ ವರ್ಷಾಂತ್ಯದ ವರೆಗೂ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ಉಳಿದಂತೆ ಸ್ಟುವರ್ಟ್ ಬ್ರಾಡ್, ನೀಲ್ ವ್ಯಾಗ್ನರ್ ಹಾಗೂ ಟಿಮ್ ಸೌಥಿ ಮೊದಲ 4 ಸ್ಥಾನಗಳಲ್ಲಿ ಭದ್ರವಾಗಿದ್ದಾರೆ. ಮಿಚೆಲ್ ಸ್ಟಾರ್ಕ್ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ರವಿಚಂದ್ರನ್ ಅಶ್ವಿನ್ 2 ಸ್ಥಾನ ಮೇಲೇರಿ 7ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇದರೊಂದಿಗೆ ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎನಿಸಿದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಜೇಸನ್ ಹೋಲ್ಡರ್, ರವೀಂದ್ರ ಜಡೇಜಾ, ಶಕೀಬ್ ಅಲ್ ಹಸನ್ ಹಾಗೂ ಮಿಚೆಲ್ ಸ್ಟಾರ್ಕ್ ಮೊದಲ 5 ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.