ICC Test Rankings: ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟ ಮಾರ್ನಸ್ ಲಬುಶೇನ್

Suvarna News   | Asianet News
Published : Dec 16, 2021, 12:31 PM IST
ICC Test Rankings: ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟ ಮಾರ್ನಸ್ ಲಬುಶೇನ್

ಸಾರಾಂಶ

* ಐಸಿಸಿ ಟೆಸ್ಟ್‌ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೇರಿಸಿ ಆಸೀಸ್ ಬ್ಯಾಟರ್‌ ಮಾರ್ನಸ್ ಲಬುಶೇನ್ * ಬ್ಯಾಟರ್‌ಗಳ ವಿಭಾಗದಲ್ಲಿ 5ನೇ ಸ್ಥಾನ ಉಳಿಸಿಕೊಂಡ ರೋಹಿತ್ ಶರ್ಮಾ * ಇನ್ನು ಬೌಲಿಂಗ್ ಹಾಗೂ ಆಲ್ರೌಂಡ್ ವಿಭಾಗದಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರೆದ ರವಿಚಂದ್ರನ್ ಅಶ್ವಿನ್

ದುಬೈ(ಡಿ.16): ವಿಶ್ವ ಟೆಸ್ಟ್‌ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ (ICC Test Rankings) ಆಸ್ಪ್ರೇಲಿಯಾದ ಮಾರ್ನಸ್‌ ಲಬುಶೇನ್‌ (Marnus Labuschagne) ವೃತ್ತಿಜೀವನ ಶ್ರೇಷ್ಠ 2ನೇ ಸ್ಥಾನಕ್ಕೆ ತಲುಪಿದ್ದಾರೆ. ಬುಧವಾರ ಪ್ರಕಟಕೊಂಡ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅವರು 894 ಅಂಕಗಳಿಸಿದ್ದಾರೆ. ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಜೋ ರೂಟ್‌ (Joe Root) ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇನ್ನುಳಿದಂತೆ ಹಿಟ್‌ ಮ್ಯಾನ್ ಖ್ಯಾತಿಯ ಟೀಂ ಇಂಡಿಯಾ (Team India) ಆರಂಭಿಕ ಬ್ಯಾಟರ್‌ ರೋಹಿತ್‌ ಶರ್ಮಾ (Rohit Sharma) 5ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. 

ಇನ್ನು ಗಾಬಾ ಟೆಸ್ಟ್ (Gabba Test) ಪಂದ್ಯದಲ್ಲಿ ಸ್ಪೋಟಕ ಶತಕ ಬಾರಿಸಿದ ಟ್ರಾವಿಸ್ ಹೆಡ್‌ (Travis Head), ಡಾಕಾ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಶಾಹೀನ್ ಅಫ್ರಿದಿ (Shaheen Afridi) ಕೂಡಾ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಗಾಬಾ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ 74 ರನ್ ಸಿಡಿಸುವ ಮೂಲಕ ಸಂಕಷ್ಟದಲ್ಲಿದ್ದ ತಂಡಕ್ಕೆ ನೆರವಾದ ಲಬುಶೇನ್‌, ಎರಡು ಸ್ಥಾನ ಏರಿಕೆ ಕಂಡು, 2ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಗಾಬಾ ಟೆಸ್ಟ್‌ನಲ್ಲಿ 152 ರನ್ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಟ್ರಾವಿಸ್ ಹೆಡ್ 16 ಸ್ಥಾನ ಜಿಗಿತ ಕಂಡು 10ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಈ ಇಬ್ಬರು ಬ್ಯಾಟರ್‌ಗಳು ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಬ್ಯಾಟರ್‌ಗಳ ವಿಭಾಗದಲ್ಲಿ ಜೋ ರೂಟ್‌, ಮಾರ್ನಸ್‌ ಲಬುಶೇನ್‌ ಮೊದಲೆರಡು ಸ್ಥಾನದಲ್ಲಿದ್ದರೆ, ಸ್ಟೀವ್ ಸ್ಮಿತ್ (Steve Smith) ಹಾಗೂ ಕೇನ್ ವಿಲಿಯಮ್ಸನ್ (Kane Williamson) ತಲಾ ಒಂದು ಸ್ಥಾನ ಕುಸಿತ ಕಂಡು ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ. ರೋಹಿತ್ ಶರ್ಮಾ ಐದನೇ ಸ್ಥಾನ ಉಳಿಸಿಕೊಂಡಿದ್ದರೆ, ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ಒಂದು ಸ್ಥಾನ ಜಾರಿ ಏಳನೇ ಸ್ಥಾನದಲ್ಲಿದ್ದಾರೆ. 

ಇನ್ನು ಬೌಲರ್‌ಗಳ ವಿಭಾಗದಲ್ಲಿ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್‌ (Pat Cummins) ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಗಾಬಾ ಟೆಸ್ಟ್ ಪಂದ್ಯದಲ್ಲಿ ಕಮಿನ್ಸ್‌ 7 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (Ravichandran Ashwin) ಎರಡನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಪಾಕಿಸ್ತಾನದ ಶಾಹೀನ್ ಅಫ್ರಿದಿ, ಜೋಶ್ ಹೇಜಲ್‌ವುಡ್‌, ಟಿಮ್ ಸೌಥಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನು ಬೌಲರ್‌ಗಳ ಟಾಪ್ 10 ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಶ್ವಿನ್ ಟಾಪ್‌ 10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಟೀಂ ಇಂಡಿಯಾ ಬೌಲರ್ ಎನಿಸಿದ್ದಾರೆ. 

ಇನ್ನು ಆಲ್ರೌಂಡರ್‌ಗಳ ವಿಭಾಗದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಮೊದಲ ಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ರವೀಂದ್ರ ಜಡೇಜಾ (Ravindra Jadeja) ಹಾಗೂ ಶಕೀಬ್ ಅಲ್ ಹಸನ್ (Shakib Al Hasan) ತಲಾ ಒಂದೊಂದು ಸ್ಥಾನ ಏರಿಕೆ ಕಂಡು ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ಬೆನ್ ಸ್ಟೋಕ್ಸ್ (Ben Stokes) ಎರಡು ಸ್ಥಾನ ಕುಸಿತ ಕಂಡು ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌: ಮಾರ್ಚ್ 6ಕ್ಕೆ ಭಾರತ-ಪಾಕ್‌ ಕದನ

ದುಬೈ: ಮುಂದಿನ ವರ್ಷ ಮಾರ್ಚ್ 4ರಿಂದ ನ್ಯೂಜಿಲೆಂಡ್‌ನಲ್ಲಿ ಮಹಿಳಾ ಏಕದಿನ ವಿಶ್ವಕಪ್‌ (ICC Women's ODI World Cup) ಆರಂಭವಾಗಲಿದ್ದು, ಮಾರ್ಚ್‌ 6ರಂದು ಭಾರತ ತಂಡವು ಮೊದಲ ಪಂದ್ಯದಲ್ಲಿ  ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ (ICC) ಬುಧವಾರ ಪ್ರಕಟಿಸಿತು.

ಮೊದಲ ಪಂದ್ಯದಲ್ಲಿ ಆತಿಥೇಯ ಕಿವೀಸ್‌, ವೆಸ್ಟ್‌ ಇಂಡೀಸ್‌ ವಿರುದ್ಧ ಸೆಣಸಲಿದೆ. ನ್ಯೂಜಿಲೆಂಡ್‌ನ ಆಕ್ಲೆಂಡ್‌, ಕ್ರೈಸ್ಟ್‌ಚರ್ಚ್‌‍, ಡ್ಯುನೆಡಿನ್‌, ಹ್ಯಾಮಿಲ್ಟನ್‌, ತೌರಂಗಾಗಳಲ್ಲಿ ಪಂದ್ಯಾವಳಿ ಆಯೋಜಿಸಲಾಗಿದ್ದು, ಒಟ್ಟು 31 ಪಂದ್ಯಗಳು ನಡೆಯಲಿವೆ. ಮೊದಲ ಸೆಮಿಫೈನಲ್‌ ಮಾರ್ಚ್ 30ರಂದು ವೆಲ್ಲಿಂಗ್ಟನ್‌ನಲ್ಲಿ, 2ನೇ ಸೆಮಿಫೈನಲ್‌ ಹಾಗೂ ಫೈನಲ್‌ ಕ್ರಮವಾಗಿ ಮಾರ್ಚ್‌ 31 ಹಾಗೂ ಏಪ್ರಿಲ್‌ 3ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿವೆ.

Ravindra Jadeja ಟೆಸ್ಟ್‌ ನಿವೃತ್ತಿ ವದಂತಿ ತಳ್ಳಿ ಹಾಕಿದ ಕ್ರಿಕೆಟಿಗ..!

ವಿಶ್ವಕಪ್‌ಗಾಗಿ ನಡೆಸುತ್ತಿದ್ದ ಅರ್ಹತಾ ಪಂದ್ಯಗಳು ಒಮಿಕ್ರೋನ್‌ನಿಂದಾಗಿ ರದ್ದಾಗಿದ್ದರಿಂದ ರ‍್ಯಾಂಕಿಂಗ್‌ ಆಧಾರದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ವೆಸ್ಟ್‌ಇಂಡೀಸ್‌ ಮಹಿಳಾ ತಂಡಗಳು ಪಂದ್ಯಾವಳಿಯಲ್ಲಿ ಸ್ಥಾನ ಗಳಿಸಿಕೊಂಡಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು
ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!