ಅಶ್ವಿನ್ ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ ಜಸ್ಪ್ರೀತ್ ಬುಮ್ರಾ; ಹೊಸ ಎತ್ತರಕ್ಕೇರಿದ ಯಶಸ್ವಿ ಜೈಸ್ವಾಲ್!

By Naveen Kodase  |  First Published Oct 2, 2024, 4:31 PM IST

ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ನೂತನವಾಗಿ ಬಿಡುಗಡೆಯಾದ ಟೆಸ್ಟ್ ಬೌಲರ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ


ದುಬೈ: ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿ ಐಸಿಸಿ ನಂಬರ್ 1 ಬೌಲರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನೊಂದೆಡೆ ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಯಲ್ಲಿ ಅಭೂತಪೂರ್ವ ಪ್ರದರ್ಶನ ತೋರಿದ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್, ಟೆಸ್ಟ್ ಬ್ಯಾಟರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆಯಿಡುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಬಾಂಗ್ಲಾದೇಶ ಎದುರಿನ ಕಾನ್ಪುರ ಟೆಸ್ಟ್‌ ಪಂದ್ಯದಲ್ಲಿ ಬುಮ್ರಾ ಎರಡೂ ಇನ್ನಿಂಗ್ಸ್‌ನಲ್ಲೂ ತಲಾ 3 ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಅಶ್ವಿನ್ ಹಿಂದಿಕ್ಕಿ ಟೆಸ್ಟ್ ಬೌಲರ್ ರ್‍ಯಾಂಕಿಂಗ್‌ನಲ್ಲಿ ಬುಮ್ರಾ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಕಾನ್ಪುರ ಟೆಸ್ಟ್‌ನ ಎರಡು ಇನ್ನಿಂಗ್ಸ್‌ಗಳಿಂದ ಅಶ್ವಿನ್ 5 ವಿಕೆಟ್ ಕಬಳಿಸಿದ್ದರು. ಜಸ್ಪ್ರೀತ್ ಬುಮ್ರಾ 870 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೇ, ಕೇವಲ ಒಂದು ರೇಟಿಂಗ್ ಅಂಕ ಹಿಂದಿರುವ ಅಶ್ವಿನ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

A thundering Yashasvi Jaiswal sits atop of the six-hitters list in the current cycle 🏏

More 👉 https://t.co/fEtGlniBn4 pic.twitter.com/GPahX6vtNP

— ICC (@ICC)

Tap to resize

Latest Videos

undefined

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ಸಚಿನ್ ರೆಕಾರ್ಡ್ ಮುರಿಯಲು ಕೊಹ್ಲಿಗೆ ಇನ್ನೆಷ್ಟು ರನ್ ಬೇಕು?

ಇನ್ನೊಂದೆಡೆ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ಗಳಲ್ಲಿ 72 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 51 ರನ್ ಬಾರಿಸಿ ಮಿಂಚಿದ್ದರು. ಮೊದಲ ಟೆಸ್ಟ್‌ ಪಂದ್ಯದ ಅಂತ್ಯದ ವೇಳೆಗೆ ಜೈಸ್ವಾಲ್ 5ನೇ ಸ್ಥಾನದಲ್ಲಿದ್ದರು, ಆದರೆ ಕಾನ್ಪುರ ಟೆಸ್ಟ್‌ ಪಂದ್ಯದ ಬಳಿಕ 792 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಸದ್ಯ ಇಂಗ್ಲೆಂಡ್‌ನ ಜೋ ರೂಟ್ 899 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೇ, ಕೇನ್ ವಿಲಿಯಮ್ಸನ್ 829 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ 6ನೇ ಸ್ಥಾನದಲ್ಲಿದ್ದರೇ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 9ನೇ ಸ್ಥಾನದಲ್ಲಿದ್ದಾರೆ.

click me!