
ದುಬೈ(ಮೇ.05): ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಬಾರಿಗೆ ಟಾಪ್ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಟಾಪ್ 10ನೊಳಗೆ ಸ್ಥಾನ ಪಡೆದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನ್ನುವ ಶ್ರೇಯ ಪಂತ್ ಪಾಲಾಗಿದೆ.
ಇಂಗ್ಲೆಂಡ್ ವಿರುದ್ದ ತವರಿನಲ್ಲಿ ಮಾರ್ಚ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಶತಕ ಬಾರಿಸುವ ಮೂಲಕ ಟೀಂ ಇಂಡಿಯಾ ಸರಣಿ ಗೆಲುವಿನಲ್ಲಿ ರಿಷಭ್ ಪಂತ್ ಪ್ರಮುಖ ಪಾತ್ರವಹಿಸಿದ್ದರು. ಇದರೊಂದಿಗೆ ಪಂತ್ ಇದೀಗ ತಮ್ಮ ವೃತ್ತಿಜೀವನದ ಶ್ರೇಷ್ಠ 6ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲೇ ಮುಂದುವರೆದಿದ್ದರೆ, ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಒಂದು ಸ್ಥಾನ ಏರಿಕೆ ಕಂಡು ಪಂತ್ ಜತೆ ಜಂಟಿ 6ನೇ ಸ್ಥಾನ ಹಂಚಿಕೊಂಡಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಆಯೋಜನೆಯಾಗುತ್ತಾ ರದ್ದಾಗಿರುವ ಐಪಿಎಲ್ ಟೂರ್ನಿ?
ಇನ್ನುಳಿದಂತೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್ ಹಾಗೂ ಜೋ ರೂಟ್ ಕ್ರಮವಾಗಿ ಮೊದಲ 4ರ ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದರೆ, ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ನೀಲ್ ವ್ಯಾಗ್ನರ್, ಆಂಡರ್‌ಸನ್ ಹಾಗೂ ಜೋಸ್ ಹೇಜಲ್‌ವುಡ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.