
ಕೇಪ್ಟೌನ್(ಫೆ.20): ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಸೆಮಿಫೈನಲ್ ರೇಸ್ನಲ್ಲಿ ಉಳಿಯಲು ಕಾತರಿಸುತ್ತಿರುವ ಕಳೆದ ಬಾರಿ ರನ್ನರ್-ಅಪ್ ಭಾರತ ಸೋಮವಾರ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಸೆಣಸಲಿದೆ. ಪಾಕಿಸ್ತಾನ, ವೆಸ್ಟ್ಇಂಡೀಸ್ ವಿರುದ್ಧ ಗೆದ್ದಿದ್ದ ಭಾರತ, ಕಳೆದ ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಶರಣಾಗಿತ್ತು.
ಭಾರತ ಸದ್ಯ 4 ಅಂಕಗಳೊಂದಿಗೆ ‘ಬಿ’ ಗುಂಪಿನಲ್ಲಿ 2ನೇ ಸ್ಥಾನದಲ್ಲಿದ್ದರೂ ಕಳಪೆ ನೆಟ್ ರನ್‌ರೇಟ್ ಹೊಂದಿದೆ. ಹೀಗಾಗಿ, ಐರ್ಲೆಂಡ್ ವಿರುದ್ಧ ದೊಡ್ಡ ಗೆಲುವಿನ ಅಗತ್ಯವಿದೆ. ಒಂದು ವೇಳೆ ಸೋತರೆ ಸೆಮೀಸ್‌ಗೇರುವ ಕನಸು ಬಹುತೇಕ ಭಗ್ನಗೊಳ್ಳಲಿದೆ.
ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಭಾರತ ತಂಡವು 11 ರನ್‌ಗಳ ರೋಚಕ ಸೋಲು ಅನುಭವಿಸಿತ್ತು. ಭಾರತ ತಂಡದ ಪರ ಸ್ಮೃತಿ ಮಂಧನಾ ಹಾಗೂ ರಿಚಾ ಘೋಷ್ ಆಕರ್ಷಕ ಬ್ಯಾಟಿಂಗ್ ನಡೆಸುವ ಗಮನ ಸೆಳೆದಿದ್ದರು. ಹೀಗಿದ್ದೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕ್ರಮಾಂಕ ವೈಫಲ್ಯ ಅನುಭವಿಸಿದ್ದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.
ಪಂದ್ಯ: ಸಂಜೆ 6.30ಕ್ಕೆ
ನೇರಪ್ರಸಾರ: ಸ್ಟಾರ್ಸ್ಪೋರ್ಟ್ಸ್
ಮಹಿಳಾ ಟಿ20 ವಿಶ್ವಕಪ್: ಆಸ್ಪ್ರೇಲಿಯಾ ಸೆಮೀಸ್ಗೆ
ಕೇಪ್ಟೌನ್: 5 ಬಾರಿ ಚಾಂಪಿಯನ್ ಆಸ್ಪ್ರೇಲಿಯಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಸತತ 4ನೇ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. 8 ಗುಂಪಿನೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನಿಯಾದ ಆಸೀಸ್, ಅಂತಿಮ 4ರ ಘಟ್ಟತಲುಪಿದ ಮೊದಲ ತಂಡ ಎನಿಸಿಕೊಂಡಿತು.
ಆಸ್ಟ್ರೇಲಿಯಾ ವಿರುದ್ಧ ಕೊನೇ 2 ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ರಾಹುಲ್‌ಗೆ ಶಾಕ್!
ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಆಸೀಸ್ 6 ವಿಕೆಟ್ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ 6 ವಿಕೆಟ್ಗೆ 124 ರನ್ ಕಲೆಹಾಕಿತು. ಸುಲಭ ಗುರಿ ಬೆನ್ನತ್ತಿದ ಆಸೀಸ್ ಕೇವಲ 16.3 ಓವರ್ಗಳಲ್ಲಿ ಜಯ ತನ್ನದಾಗಿಸಿತು. ತಹಿಲಾ ಮೆಗ್ರಾಥ್(57) ಗೆಲುವಿ ರೂವಾರಿ ಎನಿಸಿದರು.
ಪ್ರಧಾನಿ ಮ್ಯೂಸಿಯಂಗೆ ರೋಹಿತ್ ಶರ್ಮಾ ಪಡೆ ಭೇಟಿ
ನವದೆಹಲಿ: ಆಸ್ಪ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಬಳಿಕ ಭಾರತೀಯ ಆಟಗಾರರು ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ರೋಹಿತ್, ವಿರಾಟ್, ದ್ರಾವಿಡ್ ಸೇರಿದಂತೆ ಎಲ್ಲಾ ಆಟಗಾರರು ಕೆಲಹೊತ್ತು ಮ್ಯೂಸಿಯಂನಲ್ಲಿರುವ ಅಪರೂಪದ ವಸ್ತು, ಫೋಟೋಗಳನ್ನು ನೋಡಿ ಅವುಗಳ ಬಗ್ಗೆ ಮಾಹಿತಿ ಪಡೆದರು. ಸ್ವಾತಂತ್ರ್ಯ ನಂತರ ಭಾರತದ ಪಯಣ, ಎಲ್ಲಾ ಪ್ರಧಾನಿಗಳ ವಿವರಗಳಿರುವ ಸಂಗ್ರಹಾಲಯವನ್ನು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.
ಮೇ 14ಕ್ಕೆ ಚಿಪಾಕ್ನಲ್ಲಿ ಧೋನಿಗೆ ಕೊನೆ ಪಂದ್ಯ?
ಚೆನ್ನೈ: ಎಂ.ಎಸ್.ಧೋನಿ ಚೆನ್ನೈನ ಚಿಪಾಕ್ ಕ್ರೀಡಾಂಗಣದಲ್ಲಿ ಮೇ 14ರಂದು ಕೋಲ್ಕತಾ ವಿರುದ್ಧ ತಮ್ಮ ಕೊನೆ ಐಪಿಎಲ್ ಪಂದ್ಯವಾಡುವ ಸಾಧ್ಯತೆ ಇದೆ ಎಂದು ಚೆನ್ನೈ ಫ್ರಾಂಚೈಸಿ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ. ಧೋನಿ ಮುಂದಿನ ವರ್ಷ ಐಪಿಎಲ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ತೀರಾ ಕಡಿಮೆ. ಒಂದು ವೇಳೆ ಈ ಬಾರಿ ಚೆನ್ನೈ ಪ್ಲೇ-ಆಫ್ ಪ್ರವೇಶಿಸದಿದ್ದರೆ ಮೇ 14ರ ಲೀಗ್ ಹಂತದ ಕೊನೆ ಪಂದ್ಯ ಧೋನಿ ಪಾಲಿಗೆ ವಿದಾಯದ ಪಂದ್ಯವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಧೋನಿ 2008ರ ಚೊಚ್ಚಲ ಆವೃತ್ತಿಯಿಂದಲೂ ತಂಡಕ್ಕೆ ನಾಯಕತ್ವ ವಹಿಸುತ್ತಿದ್ದು, ಕಳೆದ ಆವೃತ್ತಿಯಲ್ಲಿ ಜಡೇಜಾ ನಾಯಕತ್ವ ಬಿಟ್ಟುಕೊಟ್ಟರೂ ಮತ್ತೆ ನಾಯಕನಾಗಿ ಮುಂದುವರಿದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.