
ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ಟಾರ್ಟ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐತಿಹಾಸಿಕ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಇಲ್ಲಿನ ಡಿವೈ ಪಾಟೀಲ್ ಮೈದಾನ ಆತಿಥ್ಯ ವಹಿಸಿದೆ. ಇಂದು ಮಧ್ಯಾಹ್ನ 2.30ಕ್ಕೆ ನಡೆಯಬೇಕಿದ್ದ ಟಾಸ್ ಮಳೆಯ ಅಡಚಣೆಯಿಂದಾಗಿ ಎರಡು ಗಂಟೆ ಎರಡು ನಿಮಿಷ ತಡವಾಗಿ 4.32ಕ್ಕೆ ನಡೆಯಿತು.
ದಕ್ಷಿಣ ಆಫ್ರಿಕಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿಫೈನಲ್‌ನಲ್ಲಿ ಕಣಕ್ಕಿಳಿದ ತಂಡವೇ ಇದೀಗ ಫೈನಲ್‌ಗೂ ಕಣಕ್ಕಿಳಿದಿದೆ. ಇನ್ನೊಂದೆಡೆ ಆತಿಥೇಯ ಭಾರತ ಮಹಿಳಾ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ.
ನಾಕೌಟ್ ಪಂದ್ಯಕ್ಕೆ ಮೊದಲ ದಿನ ಎರಡು ಗಂಟೆ ಹೆಚ್ಚುವರಿ ಸಮಯ ಮೀಸಲಿಟ್ಟಿದ್ದರಿಂದ ಈ ಎರಡು ಗಂಟೆ ಮ್ಯಾಚ್ ತಡವಾಗಿ ಆರಂಭವಾಗುತ್ತಿದ್ದರೂ ಓವರ್‌ನಲ್ಲಿ ಯಾವುದೇ ಕಡಿತ ಮಾಡಿಲ್ಲ. ಪೂರ್ಣ 50 ಓವರ್‌ಗಳ ಪಂದ್ಯ ನಡೆಯಲಿದೆ.
ಮೊದಲ ಸೆಮಿಫೈನಲ್‌ನಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ತಂಡವು ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಇನ್ನೊಂದೆಡೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ, ಏಳು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾಗೆ ಸೋಲುಣಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಉಭಯ ತಂಡಗಳು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲಲು ಎದುರು ನೋಡುತ್ತಿವೆ.
ಭಾರತ: ಸ್ಮೃತಿ ಮಂಧನಾ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್, ಹರ್ಮನ್ ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ರಿಚಾ ಘೋಷ್, ಅಮನ್‌ಜೋತ್, ರಾಧಾ ಯಾದವ್, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಸಿಂಗ್.
ದ.ಆಫ್ರಿಕಾ: ಲಾರಾ ವೋಲ್ಟಾರ್ಟ್(ನಾಯಕಿ), ತಜ್ಜಿನ್ ಬ್ರಿಟ್ಸ್, ಬಾಷ್, ಸುನೆ ಲುಸ್, ಮಾರಿಝಾನ್ ಕಾಪ್, ಸಿನಾಲಿ ಜಾಸ್ಟಾ, ಡೆರ್ಕ್ಟಸನ್, ಕ್ಲೋಯಿ ಟ್ರಯೊನ್, ನದಿನ್ ಡೆ ಕ್ಲಿಕ್, ಅಯಬೊಂಗಾ ಖಾಕ, ಎಂಲಾಬಾ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.