ICC Women's World Cup: ಭಾರತ ಎದುರು ಗೆದ್ದು ಸೆಮೀಸ್‌ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ

Suvarna News   | Asianet News
Published : Mar 19, 2022, 02:17 PM ISTUpdated : Mar 19, 2022, 02:22 PM IST
ICC Women's World Cup: ಭಾರತ ಎದುರು ಗೆದ್ದು ಸೆಮೀಸ್‌ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ

ಸಾರಾಂಶ

* ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಮಿಥಾಲಿ ಪಡೆಗೆ ಮತ್ತೊಂದು * ಭಾರತ ಎದುರು ಭರ್ಜರಿ ಜಯ ಸಾಧಿಸಿ ಸೆಮೀಸ್‌ಗೆ ಲಗ್ಗೆಯಿಟ್ಟ ಆಸ್ಟ್ರೇಲಿಯಾ * ಮಹಿಳಾ ವಿಶ್ವಕಪ್‌ ಇತಿಹಾಸದಲ್ಲಿ ದಾಖಲೆಯ ಗುರಿ ಬೆನ್ನತ್ತಿ ಜಯ ಪಡೆದ ಕಾಂಗರೂ ಪಡೆ

ಆಕ್ಲೆಂಡ್‌(ಮಾ.19): ಭಾರತ ಎದುರು ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ ಮೆಗ್‌ ಲ್ಯಾನಿಂಗ್‌ (Meg Lanning) ನೇತೃತ್ವದ ಆಸ್ಟ್ರೇಲಿಯಾ ತಂಡವು ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ (ICC Women's World Cup) ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಭಾರತ ನೀಡಿದ್ದ 278 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 6 ವಿಕೆಟ್‌ಗಳ ಅಂತರದ ರೋಚಕ ಜಯ ಸಾಧಿಸಿದೆ. ಇದರ ಜತೆಯೇ ಟೂರ್ನಿಯಲ್ಲಿ ಸತತ 5ನೇ ಗೆಲುವು ದಾಖಲಿಸಿದೆ.

ಇಲ್ಲಿನ ಈಡನ್‌ ಪಾರ್ಕ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 278 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ರಚೆಲ್ ಹೇನ್ಸ್‌ ಹಾಗೂ ಅಲಿಸಾ ಹೀಲಿ ಜೋಡಿ 121 ರನ್‌ಗಳ ಜತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟಿತು. ಭಾರತೀಯ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಅಲಿಸಾ ಹೀಲಿ 65 ಎಸೆತಗಳನ್ನು ಎದುರಿಸಿ 9 ಬೌಂಡರಿ ಸಹಿತ ಆಕರ್ಷಕ 72 ರನ್ ಚಚ್ಚಿದರು. ಇನಿಂಗ್ಸ್‌ನ 20ನೇ ಓವರ್‌ನಲ್ಲಿ ಸ್ಪಿನ್ನರ್ ಸ್ನೆಹ್ ರಾಣಾ, ಆಸೀಸ್ ವಿಕೆಟ್ ಕೀಪರ್ ಬ್ಯಾಟರ್‌ ಅಲಿಸಾ ಹೀಲಿಯನ್ನು ಬಲಿ ಪಡೆಯುವ ಮೂಲಕ ಭಾರತಕ್ಕೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಇದರ ಬೆನ್ನಲ್ಲೇ ಮರು ಓವರ್‌ನಲ್ಲಿ ಮತ್ತೋರ್ವ ಆರಂಭಿಕ ಬ್ಯಾಟರ್‌ ರಚೆಲ್ ಹೇನ್ಸ್‌ ಅವರನ್ನು ಪೂಜಾ ವಸ್ತ್ರಾಕರ್ ಪೆವಿಲಿಯನ್ನಿಗಟ್ಟುವ ಮೂಲಕ ಭಾರತೀಯರ ಪಾಳಯದಲ್ಲಿ ಸಂಭ್ರಮದ ಅಲೆ ಉಕ್ಕುವಂತೆ ಮಾಡಿದರು.

ಮೆಗ್‌ ಲ್ಯಾನಿಂಗ್- ಪೆರ್ರಿ ಜತೆಯಾಟ: ಒಂದು ಹಂತದಲ್ಲಿ 123 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಕೊಂಚ ಶಾಕ್‌ಗೆ ಒಳಗಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕಿ ಮೆಗ್‌ ಲ್ಯಾನಿಂಗ್ ಹಾಗೂ ಎಲಿಸಾ ಪೆರ್ರಿ ಮತ್ತೊಂದು ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮೂರನೇ ವಿಕೆಟ್‌ಗೆ ಈ ಜೋಡಿ 103 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ಸಮೀಪ ಕೊಂಡೊಯ್ದರು. ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಎಲಿಸಾ ಪೆರ್ರಿ 51 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 28 ರನ್ ಬಾರಿಸಿ ಪೂಜಾ ವಸ್ತ್ರಾಕರ್‌ಗೆ ವಿಕೆಟ್ ಒಪ್ಪಿಸಿದರು. 

ICC Women's World Cup: ಮಿಥಾಲಿ, ಯಾಶ್ತಿಕಾ, ಕೌರ್ ಫಿಫ್ಟಿ, ಆಸೀಸ್‌ಗೆ ಸವಾಲಿನ ಗುರಿ ನೀಡಿದ ಭಾರತ

ಮತ್ತೊಂದು ತುದಿಯಲ್ಲಿ ನಾಯಕಿಯ ಆಟವನ್ನು ಆಡಿದ ಮೆಗ್‌ ಲ್ಯಾನಿಂಗ್ ಕೇವಲ 3 ರನ್‌ಗಳ ಅಂತರದಲ್ಲಿ ವೃತ್ತಿಜೀವನದ 15ನೇ ಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿದರು. ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಬೀಸಿದ ಆಸ್ಟ್ರೇಲಿಯಾದ ನಾಯಕಿ ಮೆಗ್‌ ಲ್ಯಾನಿಂಗ್ ಒಟ್ಟು 107 ಎಸೆತಗಳನ್ನು ಎದುರಿಸಿ 13 ಬೌಂಡರಿ ಸಹಿತ 97 ರನ್ ಬಾರಿಸಿ ಮೆಘನಾ ಸಿಂಗ್ ಬೌಲಿಂಗ್‌ನಲ್ಲಿ ಪೂಜಾ ವಸ್ತ್ರಾಕರ್‌ಗೆ ಕ್ಯಾಚಿತ್ತು ಪೆವಿಲಿಯನ್‌ ಸೇರಿದರು

ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. 28 ರನ್ ಗಳಿಸುವಷ್ಟರಲ್ಲಿ ಭಾರತದ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದರು. ಇದಾದ ಬಳಿಕ ಮೂರನೇ ವಿಕೆಟ್‌ಗೆ ಯಾಶ್ತಿಕಾ ಭಾಟಿಯಾ ಹಾಗೂ ನಾಯಕಿ ಮಿಥಾಲಿ ರಾಜ್ 130 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಯಾಶ್ತಿಕಾ ಭಾಟಿಯಾ 59 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕಿ ಮಿಥಾಲಿ ರಾಜ್ 68 ರನ್ ಬಾರಿಸಿದರು.

ಇನ್ನು ಕೊನೆಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಹರ್ಮನ್‌ಪ್ರೀತ್ ಕೌರ್ ಮತ್ತೊಂದು ಆಕರ್ಷಕ ಅರ್ಧಶತಕ ಸಿಡಿಸಿದರು. ಹರ್ಮನ್‌ಪ್ರೀತ್ ಕೌರ್ 47 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ ಅಜೇಯ 57 ರನ್‌ ಬಾರಿಸಿದರು. ಹರ್ಮನ್‌ಪ್ರೀತ್ ಕೌರ್‌ಗೆ ಉತ್ತಮ ಸಾಥ್ ನೀಡಿದ ಪೂಜಾ ವಸ್ತ್ರಾಕರ್‌ 34 ರನ್ ಬಾರಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IPL Mini Auction 2026: 1355 ಆಟಗಾರರಲ್ಲಿ 350 ಪ್ಲೇಯರ್ಸ್ ಶಾರ್ಟ್‌ಲಿಸ್ಟ್! ಇಲ್ಲಿದೆ ಹರಾಜಿನ ಕಂಪ್ಲೀಟ್ ಡೀಟೈಲ್ಸ್
ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!