ICC Women's World Cup: ಭಾರತದೆದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

Suvarna News   | Asianet News
Published : Mar 16, 2022, 06:27 AM ISTUpdated : Mar 16, 2022, 06:51 AM IST
ICC Women's World Cup: ಭಾರತದೆದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಸಾರಾಂಶ

* ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ- ಇಂಗ್ಲೆಂಡ್ ಮುಖಾಮುಖಿ * ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ * ಕಳೆದ ವಿಶ್ವಕಪ್‌ ಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಶರಣಾಗಿದ್ದ ಭಾರತ

ಮೌಂಟ್‌ ಮಾಂಗನುಯಿ(ಮಾ.16): ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು (ICC Women's World Cup) ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ಭಾರತ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಹೀಥರ್ ನೈಟ್ ಮೊದಲು ಬೌಲಿಂಗ್ ಮಾಡುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ತಂಡವು ಕಳೆದ ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಇಲ್ಲಿನ ಬೇ ಓವಲ್ ಮೈದಾನ ಆತಿಥ್ಯವನ್ನು ವಹಿಸಿದೆ. ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿದ್ದ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವು ಟೂರ್ನಿಯಲ್ಲಿ ಈಗಾಗಲೇ ಹ್ಯಾಟ್ರಿಕ್ ಸೋಲು ಕಾಣುವ ಮೂಲಕ ರೌಂಡ್ ರಾಬಿನ್ ಹಂತದಲ್ಲೇ ಹೊರಬೀಳುವ ಆತಂಕಕ್ಕೆ ಸಿಲುಕಿದೆ. ಹೀಥರ್ ನೈಟ್‌ ನೇತೃತ್ವದ ಇಂಗ್ಲೆಂಡ್ ತಂಡವು ಆಡಿದ ಮೊದಲ 3 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನ ಪಡೆದಿದೆ. ಸೆಮೀಸ್ ಫೈನಲ್ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ, ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಭಾರತದ ಎದುರು ಭಾರೀ ಅಂತರದ ಗೆಲುವು ಸಾಧಿಸಬೇಕು, ಜತೆಗೆ ಇತರ ತಂಡಗಳ ಫಲಿತಾಂಶದ ಮೇಲೂ ಅವಲಂಭಿತರಾಗಬೇಕಿದೆ. 

ಇನ್ನೊಂದೆಡೆ ಮಿಥಾಲಿ ರಾಜ್ (Mithali Raj) ನೇತೃತ್ವದ ಭಾರತ ಮಹಿಳಾ ತಂಡವು ಆಡಿರುವ ಮೂರು ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಸೆಮೀಸ್‌ ಸ್ಥಾನಕ್ಕೆ ಮತ್ತಷ್ಟು ಹತ್ತಿರವಾಗಲು ಎದುರು ನೋಡುತ್ತಿದೆ. ಅದರಲ್ಲೂ ಭಾರತದ ಆರಂಭಿಕ ಜೋಡಿಯಾದ ಯಾಶ್ತಿಕಾ ಭಾಟಿಯಾ ಹಾಗೂ ಸ್ಮೃತಿ ಮಂಧನಾ ಉತ್ತಮ ಆರಂಭವನ್ನು ಒದಗಿಸಿಕೊಡುತ್ತಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚುವಂತೆ ಮಾಡಿದೆ.

ICC Women's World Cup: ಇಂಗ್ಲೆಂಡ್‌ ಎದುರು ವಿಶ್ವಕಪ್‌ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ?

ವೆಸ್ಟ್ ಇಂಡೀಸ್ ವಿರುದ್ದದ ಕಳೆದ ಪಂದ್ಯದಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ತಂಡವು ಭಾರೀ ಅಂತರದ ಗೆಲುವು ಸಾಧಿಸಿತ್ತು. ಅದರಲ್ಲೂ ಆರಂಭಿಕ ಬ್ಯಾಟರ್‌ ಸ್ಮೃತಿ ಮಂಧನಾ ಹಾಗೂ ಹರ್ಮನ್‌ಪ್ರೀತ್ ಕೌರ್ ಆಕರ್ಷಕ ಶತಕ ಶತಕ ಸಿಡಿಸುವ ಮೂಲಕ ಮಿಂಚಿದ್ದರು. ಇನ್ನು ಬೌಲಿಂಗ್‌ನಲ್ಲಿ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್, ಸ್ನೆಹ್ ರಾಣಾ, ದೀಪ್ತಿ ಶರ್ಮಾ ಮಾರಕ ದಾಳಿ ನಡೆಸುವ ಮೂಲಕ ವಿಂಡೀಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಇಂದು ಸಹಾ ಭಾರತ ತಂಡವು ಆಲ್ರೌಂಡ್ ಪ್ರದರ್ಶನ ತೋರಲು ಎದುರು ನೋಡುತ್ತಿದೆ.

2019ರ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದ ಭಾರತ: 2017ರ ಐಸಿಸಿ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಆತಿಥ್ಯವನ್ನು ವಹಿಸಿತ್ತು. ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ತಂಡವು ಫೈನಲ್ ಪ್ರವೇಶಿಸುವ ಮೂಲಕ ಚೊಚ್ಚಲ ಕಪ್ ಗೆಲ್ಲುವ ಭರವಸೆ ಮೂಡಿಸಿತ್ತು. ಆದರೆ ಫೈನಲ್‌ನಲ್ಲಿ ಕೊನೆಯ ಓವರ್‌ಗಳಲ್ಲಿ ದಿಢೀರ್ ಕುಸಿತ ಕಾಣುವ ಮೂಲಕ ಕೇವಲ 9 ರನ್‌ಗಳ ಅಂತರದಲ್ಲಿ ಚೊಚ್ಚಲ ಮಹಿಳಾ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಭಾರತ ಕೈಚೆಲ್ಲಿತ್ತು.

ತಂಡಗಳು ಹೀಗಿವೆ ನೋಡಿ

ಭಾರತ ಮಹಿಳಾ ತಂಡ
ಸ್ಮೃತಿ ಮಂಧನಾ, ಯಾಶ್ತಿಕಾ ಭಾಟಿಯಾ, ಮಿಥಾಲಿ ರಾಜ್(ನಾಯಕಿ), ದೀಪ್ತಿ ಶರ್ಮಾ, ಹರ್ಮನ್‌ಪ್ರೀತ್ ಕೌರ್. ರಿಚಾ ಘೋಷ್(ವಿಕೆಟ್ ಕೀಪರ್), ಸ್ನೆಹ್ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ಮೆಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್.

ಇಂಗ್ಲೆಂಡ್ ಮಹಿಳಾ ತಂಡ
ಡೇನಿಯಲ್ಲೇ ವ್ಯಾಟ್, ಟಾಮಿ ಬಿಯುಮೌಟ್, ಹೀಥರ್ ನೈಟ್‌(ನಾಯಕಿ), ನ್ಯಾಟಿಲ್ಲೇ ಸ್ಕೀವರ್, ಆಮಿ ಎಲೆನ್ ಜೋನ್ಸ್(ವಿಕೆಟ್ ಕೀಪರ್), ಸೋಫಿಯಾ ಡಂಕ್ಲಿ, ಕ್ಯಾಥರೀನ್ ಬ್ರಂಟ್, ಸೋಫಿ ಎಕಲೆಸ್ಟೋನ್, ಕೇಟ್ ಕ್ರಾಸ್, ಚಾರ್ಲೆಟ್‌ ಡೀನ್, ಏನ್ಯಾ ಸರ್ಬಸೋಲ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌