ICC Women's World Cup: ಬಾಂಗ್ಲಾದೇಶ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಅಯ್ಕೆ

Suvarna News   | Asianet News
Published : Mar 22, 2022, 06:33 AM ISTUpdated : Mar 22, 2022, 06:55 AM IST
ICC Women's World Cup: ಬಾಂಗ್ಲಾದೇಶ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಅಯ್ಕೆ

ಸಾರಾಂಶ

* ಬಾಂಗ್ಲಾದೇಶ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ * ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ * ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಮಿಥಾಲಿ ರಾಜ್ ಪಡೆ

ಹ್ಯಾಮಿಲ್ಟನ್‌(ಮಾ.22): ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women's World Cup) ಟೂರ್ನಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕಿ ಮಿಥಾಲಿ ರಾಜ್ (Mithali Raj), ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಲಾಗಿದ್ದು, ಅನುಭವಿ ಲೆಗ್‌ ಸ್ಪಿನ್ನರ್‌ ಪೂನಂ ಯಾದವ್ (Poonam Yadav) ತಂಡ ಕೂಡಿಕೊಂಡಿದ್ದಾರೆ.

ಇಲ್ಲಿನ ಸೆಡನ್ ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯವು ಭಾರತೀಯ ತಂಡದ ಪಾಲಿಗೆ ಸೆಮೀಸ್ ಪ್ರವೇಶಿಸುವ ದೃಷ್ಟಿಯಿಂದ ಸಾಕಷ್ಟು ಮಹತ್ವದ್ದೆನಿಸಿದೆ. ಕಳೆದೆರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಮಿಥಾಲಿ ರಾಜ್ ಪಡೆ, ಇಂದು ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ  ಶಫಾಲಿ ವರ್ಮಾ(Shafali Verma), ಇಂದಿನ ಪಂದ್ಯಕ್ಕೂ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಯಶಸ್ವಿಯಾಗಿದ್ಧಾರೆ. ವೇಗದ ಬೌಲರ್‌ ಮೆಘನಾ ಸಿಂಗ್‌ಗೆ ವಿಶ್ರಾಂತಿ ನೀಡಲಾಗಿದ್ದು, ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮಣಿಕಟ್ಟು ಸ್ಪಿನ್ನರ್ ಪೂನಂ ಯಾದವ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. 

ಇಂಗ್ಲೆಂಡ್‌ ಹಾಗೂ ಆಸ್ಪ್ರೇಲಿಯಾ ವಿರುದ್ಧ ಸತತ 2 ಸೋಲು ಅನುಭವಿಸಿರುವ ಭಾರತದ ಆತ್ಮವಿಶ್ವಾಸ ಕುಗ್ಗಿದ್ದು, ಬಾಂಗ್ಲಾದೇಶ ವಿರುದ್ಧ ದೊಡ್ಡ ಅಂತರದಲ್ಲಿ ಜಯಿಸಿ ಆತ್ಮವಿಶ್ವಾಸ ಮರಳಿ ಪಡೆಯುವುದರ ಜೊತೆಗೆ ಉತ್ತಮ ನೆಟ್‌ ರನ್‌ರೇಟ್‌ ಸಹ ಕಾಯ್ದುಕೊಳ್ಳಬೇಕಿದೆ. ರೌಂಡ್‌ ರಾಬಿನ್‌ ಹಂತದ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಗಲಿದ್ದು, ಬಾಂಗ್ಲಾ ವಿರುದ್ಧ ಗೆದ್ದರಷ್ಟೇ ಅಂತಿಮ ಪಂದ್ಯಕ್ಕೆ ರೋಚಕತೆ ಉಳಿದುಕೊಳ್ಳಲಿದೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಇದುವರೆಗೂ 4 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ ತಂಡವು ಸಂಪೂರ್ಣ ಮೇಲುಗೈ ಸಾಧಿಸಿದೆ. ನಾಲ್ಕು ಪಂದ್ಯಗಳಲ್ಲೂ ಬಾಂಗ್ಲಾದೇಶ ತಂಡದ ಎದುರು ಭಾರತೀಯ ವನಿತೆಯರು ಗೆಲುವಿನ ನಗೆ ಬೀರಿದ್ದಾರೆ.

ICC Women's World Cup: ಬಾಂಗ್ಲಾದೇಶ ಎದುರು ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿ ಮಿಥಾಲಿ ಪಡೆ

ಇನ್ನು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಏಕೈಕ ಗೆಲುವು ಸಾಧಿಸಿರುವ ಬಾಂಗ್ಲಾದೇಶ ತಂಡವು ಬಲಿಷ್ಠ ಭಾರತ ವಿರುದ್ದದ ಪಂದ್ಯಕ್ಕೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ಆರಂಭಿಕ ಆಟಗಾರ್ತಿ ಮುಶೀದಾ ಖತುನ್ ಹಾಗೂ ಲತಾ ಮೊಂಡಲ್ ತಂಡ ಕೂಡಿಕೊಂಡಿದ್ದಾರೆ. ಬಾಂಗ್ಲಾದೇಶ ತಂಡವು ಸೆಮಿಫೈನಲ್ ಪ್ರವೇಶಿಸಬೇಕಿದ್ದರೆ ತನ್ನ ಪಾಲಿನ ಮೂರೂ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಸದ್ಯ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ತಂಡವು, ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಬಾಂಗ್ಲಾದೇಶ ತಂಡವು 4 ಪಂದ್ಯಗಳನ್ನಾಡಿ ಒಂದು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ 2 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದಿದೆ.

ತಂಡಗಳು ಹೀಗಿವೆ ನೋಡಿ

ಭಾರತ ಮಹಿಳಾ ಕ್ರಿಕೆಟ್ ತಂಡ:
ಶಫಾಲಿ ವರ್ಮಾ, ಸ್ಮೃತಿ ಮಂಧನಾ, ಯಾಶ್ತಿಕಾ ಭಾಟಿಯಾ, ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್, ರಿಷಾ ಘೋಷ್ (ವಿಕೆಟ್ ಕೀಪರ್), ಸ್ನೆಹ್ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್,.

ಬಾಂಗ್ಲಾದೇಶ ಮಹಿಳಾ ತಂಡ:
ಶರ್ಮಿನ್ ಅಖ್ತರ್, ಮುಶೀದಾ ಖತುನ್, ಫರ್ಗಾನಾ ಹಕ್, ನಿಗರ್ ಸುಲ್ತಾನ್‌(ನಾಯಕಿ&ವಿಕೆಟ್ ಕೀಪರ್), ರುಮನಾ ಅಹಮದ್, ರಿತು ಮೋನಿ, ಲತಾ ಮೊಂಡಲ್, ಸಲ್ಮಾ ಖತುನ್, ನಾಶಿದಾ ಅಖ್ತರ್, ಫಾಹಿಮಾ ಖತುನ್, ಜಹನರ ಆಲಂ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?