ಪತ್ನಿ ಅಲೀಸಾ ಹೀಲಿ ಶತಕ ಬಾರಿಸುತ್ತಿದ್ದಂತೆ ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಮಿಚೆಲ್ ಸ್ಟಾರ್ಕ್‌..!

Published : Apr 03, 2022, 12:50 PM IST
ಪತ್ನಿ ಅಲೀಸಾ ಹೀಲಿ ಶತಕ ಬಾರಿಸುತ್ತಿದ್ದಂತೆ ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಮಿಚೆಲ್ ಸ್ಟಾರ್ಕ್‌..!

ಸಾರಾಂಶ

* ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಅಲೀಸಾ ಹೀಲಿ ಅಬ್ಬರ * ಇಂಗ್ಲೆಂಡ್ ಎದುರು ಸ್ಪೋಟಕ ಶತಕ ಬಾರಿಸಿದ ಆಸೀಸ್ ವಿಕೆಟ್ ಕೀಪರ್ ಬ್ಯಾಟರ್ * ಪತ್ನಿ ಅಲೀಸಾ ಹೀಲಿ ಬ್ಯಾಟಿಂಗ್ ಹುರಿದುಂಬಿಸಿದ ವೇಗಿ ಮಿಚೆಲ್ ಸ್ಟಾರ್ಕ್‌

ಕ್ರೈಸ್ಟ್‌ಚರ್ಚ್‌(ಏ.03): ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಅಲೀಸಾ ಹೀಲಿ (Alyssa Healy) ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ (ICC Women's World Cup Final) ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಸಂಭ್ರಮಿಸಿದ್ದಾರೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಎದುರು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ತಂಡವು, ಅಲೀಸಾ ಹೀಲಿ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 356 ರನ್‌ ಬಾರಿಸಿದೆ. ಇದರೊಂದಿಗೆ ಐಸಿಸಿ ಮಹಿಳಾ ವಿಶ್ವಕಪ್‌ ಫೈನಲ್‌ನಲ್ಲಿ ಅಲೀಸಾ ಹೀಲಿ ಗರಿಷ್ಠ ವೈಯುಕ್ತಿಕ ಸ್ಕೋರ್‌(170) ಬಾರಿಸಿದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾರಕ ವೇಗಿ ಹಾಗೂ ಆಲೀಸಾ ಹೀಲಿ ಪತಿ ಮಿಚೆಲ್ ಸ್ಟಾರ್ಕ್‌ (Mitchell Starc) ತಮ್ಮ ಪತ್ನಿಯ ಬ್ಯಾಟಿಂಗ್ ಪ್ರದರ್ಶನವನ್ನು ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಮ್ಮ ಪತ್ನಿಯ ಪಂದ್ಯವನ್ನು ವೀಕ್ಷಿಸಲು ಮಿಚೆಲ್ ಸ್ಟಾರ್ಕ್‌, ಪಾಕಿಸ್ತಾನ ಎದುರಿನ ಸೀಮಿತ ಓವರ್‌ಗಳ ಸರಣಿಯನ್ನು ತೊರೆದು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯವನ್ನು ವಹಿಸಿರುವ ನ್ಯೂಜಿಲೆಂಡ್‌ಗೆ ಬಂದಿಳಿದಿದ್ದರು. ತಮ್ಮ ಪತಿಯ ಎದುರು ಅಲೀಸಾ ಹೀಲಿ ಮತ್ತೊಂದು ಸ್ಮರಣೀಯ ಇನಿಂಗ್ಸ್‌ ಕಟ್ಟಿದ್ದಾರೆ. ಅಲೀಸಾ ಹೀಲಿ ಶತಕ ಬಾರಿಸುತ್ತಿದ್ದಂತೆಯೇ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಮಿಚೆಲ್ ಸ್ಟಾರ್ಕ್‌ ಚಪ್ಪಾಳೆ ತಟ್ಟುವ ಮೂಲಕ ಪತ್ನಿಯ ಸಾಧನೆಯನ್ನು ಸಂಭ್ರಮಿಸಿದ್ದಾರೆ.

ಈ ವಿಡಿಯೋವೊಂದನ್ನು ಐಸಿಸಿ ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಪೇಜ್‌ನಲ್ಲಿ ಹಂಚಿಕೊಂಡಿದ್ದರು, ಖುಷಿಯೆಂದರೆ, ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ತನ್ನ ಪತ್ನಿಯ ಪರ ಚಿಯರ್ ಮಾಡುವುದು ಎಂದು ಬರೆದುಕೊಂಡಿದೆ. ಅಲೀಸಾ ಹೀಲಿ 170 ರನ್‌ ಬಾರಿಸುವ ಮೂಲಕ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಕರೀನ್ ರೋಲ್ಟನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕುವಲ್ಲಿ ಯಶಸ್ವಿಯಾದರು. ಇದಷ್ಟೇ ಅಲ್ಲದೇ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಆವೃತ್ತಿಯೊಂದರಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರ್ತಿ ಎನ್ನುವ ದಾಖಲೆ ಕೂಡಾ ಅಲೀಸಾ ಹೀಲಿ ಪಾಲಾಗಿದೆ. ಪ್ರಸಕ್ತ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಅಲೀಸಾ ಹೀಲಿ 509 ರನ್‌ ಬಾರಿಸಿದ್ದಾರೆ. ಈ ಮೂಲಕ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಆವೃತ್ತಿಯೊಂದರಲ್ಲಿ 500+ ರನ್‌ ಬಾರಿಸಿದ ಮೊದಲ ಆಟಗಾರ್ತಿ ಎನ್ನುವ ಹೆಗ್ಗಳಿಕೆ ಕೂಡಾ ಹೀಲಿ ಪಾಲಾಗಿದೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮತ್ತೋರ್ವ ಆರಂಭಿಕ ಬ್ಯಾಟರ್‌ ರೇಚಲ್ ಹೇಯ್ನ್ಸ್‌ ಪ್ರಸಕ್ತ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ 497 ರನ್‌ ಬಾರಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ರೇಚಲ್ ಹೇಯ್ನ್ಸ್‌ 93 ಎಸೆತಗಳನ್ನು ಎದುರಿಸಿ 68 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ರೇಚಲ್ ಹೇಯ್ನ್ಸ್‌ (Rachael Haynes) ಇನ್ನು ಮೂರು ರನ್ ಬಾರಿಸಿದ್ದರೆ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 500 ರನ್‌ ಬಾರಿಸಿದ ಮೊದಲ ಆಟಗಾರ್ತಿ ಎನಿಸುತ್ತಿದ್ದರು.   

ICC Women's World Cup: ಅಲೀಸಾ ಹೀಲಿ ಶತಕ, ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ಗೆ ಕಠಿಣ ಗುರಿ

ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವಲ್ಲಿ ಅಲೀಸಾ ಹೀಲಿ ಎತ್ತಿದ ಕೈ. 2020ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಅಲೀಸಾ ಹೀಲಿ ಕೇವಲ 39 ಎಸೆತಗಳಲ್ಲಿ 75 ರನ್ ಚಚ್ಚಿದ್ದರು. ಭಾರತ ವಿರುದ್ದ ಆಸ್ಟ್ರೇಲಿಯಾ ತಂಡವು ಭರ್ಜರಿ ಗೆಲುವು ದಾಖಲಿಸಿ ಟ್ರೋಫಿಗೆ ಮುತ್ತಿಕ್ಕಿತ್ತು. ಆ ಪಂದ್ಯಕ್ಕೂ ಮಿಚೆಲ್ ಸ್ಟಾರ್ಕ್‌ ಮೈದಾನಕ್ಕೆ ಬಂದು ಪಂದ್ಯವನ್ನು ವೀಕ್ಷಿಸಿದ್ದರು. ಇನ್ನು ಪ್ರಸಕ್ತ ಆವೃತ್ತಿಯ ವಿಶ್ವಕಪ್ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಹೀಲಿ 107 ಎಸೆತಗಳಲ್ಲಿ 129 ರನ್ ಚಚ್ಚಿದ್ದರು. ಇದೀಗ ಫೈನಲ್‌ನಲ್ಲೂ ಹೀಲಿ ಅವರಿಂದ ಆಕರ್ಷಕ ಶತಕ ಮೂಡಿ ಬಂದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್