ಶುಭ್‌ಮನ್ ಗಿಲ್ ಈ ಪಂದ್ಯಕ್ಕೂ ಅಲಭ್ಯರಾಗಲಿರುವ ಕಾರಣ, ಇಶಾನ್ ಕಿಶನ್‌ಗೆ ಮತ್ತೊಂದು ಅವಕಾಶ ಸಿಕ್ಕಿದೆ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರವಿಚಂದ್ರನ್ ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ.
ನವದೆಹಲಿ(ಅ.11): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆದರೆ ಆಫ್ಘಾನಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಚೆನ್ನೈನ ನಿಧಾನಗತಿ ಹಾಗೂ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ತನ್ನ ಮೊದಲ ಪಂದ್ಯವನಾಡಿದ್ದ ಭಾರತ, ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಳ್ಳುತ್ತಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರನ್ ಹೊಳೆ ಹರಿಸಬೇಕಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ನಡುವಿನ ಪಂದ್ಯದಲ್ಲಿ 700ಕ್ಕೂ ಹೆಚ್ಚು ರನ್ ದಾಖಲಾಗಿತ್ತು. ಶುಭ್‌ಮನ್ ಗಿಲ್ ಈ ಪಂದ್ಯಕ್ಕೂ ಅಲಭ್ಯರಾಗಲಿರುವ ಕಾರಣ, ಇಶಾನ್ ಕಿಶನ್‌ಗೆ ಮತ್ತೊಂದು ಅವಕಾಶ ಸಿಕ್ಕಿದೆ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ರವಿಚಂದ್ರನ್ ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ.
ICC World Cup 2023: ಭಾರತ ಎದುರು ಟಾಸ್ ಗೆದ್ದ ಆಫ್ಘಾನ್ ಬ್ಯಾಟಿಂಗ್ ಆಯ್ಕೆ
ಮತ್ತೊಂದೆಡೆ ಬಾಂಗ್ಲಾದೇಶ ವಿರುದ್ಧ ಹೀನಾಯ ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಅಫ್ಘಾನಿಸ್ತಾನ, ಈ ಪಂದ್ಯದಲ್ಲಿ ಭಾರತದ ಲೆಕ್ಕಾಚಾರ ತಲೆಕೆಳಗಾಗಿಸಲು ಕಾತರಿಸುತ್ತಿದೆ. ಯಾವುದೇ ಎದುರಾಳಿಗೆ ಆಘಾತ ನೀಡಬಲ್ಲ ಸಾಮರ್ಥ್ಯ ಆಫ್ಘನ್‌ಗಿದೆಯಾದರೂ, ಭಾರತವೇ ಗೆಲ್ಲುವ ಫೇವರಿಟ್ಸ್ ಆಗಿ ಪಂದ್ಯಕ್ಕೆ ಕಾಲಿಡಲಿದೆ.
2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಪಂದ್ಯವು ಜಿದ್ದಾಜಿದ್ದಿನ ಕಾದಾಟಕ್ಕೆ ಸಾಕ್ಷಿಯಾಗಿತ್ತು. ಭಾರತ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಮೊಹಮ್ಮದ್ ಶಮಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಶಮಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.
ತಂಡದ ಆಟಗಾರರ ಪಟ್ಟಿ ಹೀಗಿದೆ:
ಭಾರತ:
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಅಫ್ಘಾನಿಸ್ತಾನ:
ರೆಹಮನುಲ್ಲಾ ಗುರ್ಬಾಜ್, ಇಬ್ರಾಹಿಂ, ರಹಮತ್, ಹಶ್ಮತುಲ್ಲಾ(ನಾಯಕ), ಮೊಹಮ್ಮದ್ ನಬಿ, ನಜೀಬುಲ್ಲಾ, ಅಜ್ಮತುಲ್ಲಾ, ರಶೀದ್ ಖಾನ್, ನವೀನ್, ಮುಜೀಬ್ ಉರ್ ರೆಹಮಾನ್, ಫಜಲ್‌ಹಕ್ ಫಾರೂಕಿ.
ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಟೋರ್ಟ್ಸ್, ಡಿಸ್ನಿ+ಹಾಟ್‌ಸ್ಟಾರ್.