140 ಕೋಟಿಗೂ ಅಧಿಕ ಭಾರತೀಯರು ಹಾಗೂ ಕೋಟ್ಯಂತರ ಜಾಗತಿಕ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 13ನೇ ಆವೃತ್ತಿಯ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಂತಿಮ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಭಾನುವಾರ ಆತಿಥೇಯ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಾರಂಭಿಸಿವೆ.
ಅಹಮದಾಬಾದ್(ನ.19): 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಇನ್ನು ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.ಇನ್ನು ಆತಿಥೇಯ ಭಾರತ ಕ್ರಿಕೆಟ್ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ. ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ತಂಡವೇ ಇದೀಗ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಕಾದಾಡಲಿದೆ.
undefined
140 ಕೋಟಿಗೂ ಅಧಿಕ ಭಾರತೀಯರು ಹಾಗೂ ಕೋಟ್ಯಂತರ ಜಾಗತಿಕ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 13ನೇ ಆವೃತ್ತಿಯ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಂತಿಮ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಭಾನುವಾರ ಆತಿಥೇಯ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಾರಂಭಿಸಿವೆ.
ಆಸ್ಟ್ರೇಲಿಯಾ ಎದುರು 2003ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ರೆಡಿ..!
ಈ ಬಾರಿ ಆಡಿರುವ ಎಲ್ಲ 10 ಪಂದ್ಯಗಳನ್ನು ಗೆದ್ದು ಬೀಗುತ್ತಿರುವ ಭಾರತ ಪ್ರಶಸ್ತಿ ಗೆಲ್ಲಲು ಹಾಟ್ ಫೇವರಿಟ್ ಆಗಿದ್ದರೆ, ಮೊದಲೆರಡು ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಂಡ ಬಳಿಕ ಸತತವಾಗಿ 8 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಎದುರಾಳಿಗೆ ಪ್ರಬಲ ಸವಾಲೊಡ್ಡಲು ಸಜ್ಜಾಗಿ ನಿಂತಿದೆ. ಒಟ್ಟಿನಲ್ಲಿ ‘ಸೂಪರ್ ಸಂಡೇ’ಯ ಕ್ರಿಕೆಟ್ ರಸದೌತಣ ಸವಿಯಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
ಫೈನಲ್‌ಗೆ ಉಭಯ ತಂಡಗಳ ಆಟಗಾರರ ಪಟ್ಟಿ
ಭಾರತ:
ರೋಹಿತ್ ಶರ್ಮಾ(ನಾಯಕ),ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ:
ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಶ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್.
ಸ್ಥಳ: ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್
ಸಮಯ: ಭಾನುವಾರ ಮಧ್ಯಾಹ್ನ 2 ಗಂಟೆಯಿಂದ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಚಾನಲ್‌ಗಳು ಹಾಗೂ ಡಿಸ್ನಿ ಹಾಟ್‌ಸ್ಟಾರ್ ಆ್ಯಪ್