ಮಿಚೆಲ್‌ ಸೆಂಚೂರಿ, ಶಮಿಗೆ 5 ವಿಕೆಟ್‌ ಗೊಂಚಲು; ಭಾರತಕ್ಕೆ ಗೆಲ್ಲಲು 274 ಗುರಿ

By Naveen Kodase  |  First Published Oct 22, 2023, 6:10 PM IST

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭದಲ್ಲೇ ವೇಗಿ ಸಿರಾಜ್, ವಿಕೆಟ್ ಕೀಪರ್ ಬ್ಯಾಟರ್ ಡೆವೊನ್ ಕಾನ್‌ವೇ ಅವರನ್ನು ಬಲಿಪಡೆಯುವಲ್ಲಿ ಯಶಸ್ವಿಯಾದರು.


ಧರ್ಮಶಾಲಾ(ಅ.22): ಮೊಹಮ್ಮದ್ ಶಮಿ ಮಿಂಚಿನ ದಾಳಿಯ ಹೊರತಾಗಿಯೂ, ಡೇರಲ್ ಮಿಚೆಲ್ ಬಾರಿಸಿದ ಆಕರ್ಷಕ ಶತಕ ಹಾಗೂ ಬೆಂಗಳೂರು ಮೂಲದ ಆಲ್ರೌಂಡರ್ ರಚಿನ್ ರವೀಂದ್ರ ಬಾರಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡವು ನಿಗದಿತ 50 ಓವರ್‌ಗಳಲ್ಲಿ 273 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಎರಡು ದಶಕಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಕಿವೀಸ್ ತಂಡವನ್ನು ಮಣಿಸಲು ಸವಾಲಿನ ಮೊತ್ತವನ್ನು ಯಶಸ್ವಿಯಾಗಿ ಬೆನ್ನತ್ತಬೇಕಿದೆ.

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭದಲ್ಲೇ ವೇಗಿ ಸಿರಾಜ್, ವಿಕೆಟ್ ಕೀಪರ್ ಬ್ಯಾಟರ್ ಡೆವೊನ್ ಕಾನ್‌ವೇ ಅವರನ್ನು ಬಲಿಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಿದ ಅನುಭವಿ ವೇಗಿ ಮೊಹಮ್ಮದ್ ಶಮಿ, ಮತ್ತೋರ್ವ ಆರಂಭಿಕ ಬ್ಯಾಟರ್ ವಿಲ್ ಯಂಗ್(17) ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಮೊದಲ ಎಸೆತವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು.

Innings Break!

5⃣ wickets for Mohd. Shami
2⃣ wickets for Kuldeep Yadav
1⃣ wicket each for Mohd. Siraj & Jasprit Bumrah

Target 🎯 for - 274

Scorecard ▶️ https://t.co/Ua4oDBM9rn | | pic.twitter.com/EBVAEgTVbV

— BCCI (@BCCI)

Latest Videos

undefined

ರಚಿನ್-ಮಿಚೆಲ್ ಜುಗಲ್ಬಂದಿ: ಕೇವಲ 19 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ನ್ಯೂಜಿಲೆಂಡ್‌ ತಂಡಕ್ಕೆ ಮೂರನೇ ವಿಕೆಟ್‌ಗೆ ರಚಿನ್ ರವೀಂದ್ರ ಹಾಗೂ ಡೇರಲ್ ಮಿಚೆಲ್‌ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಈ ಜೋಡಿ, ಪಿಚ್‌ಗೆ ಹೊಂದಿಕ್ಕೊಳ್ಳುತ್ತಿದ್ದಂತೆಯೇ ಆಕ್ರಮಣಕಾರಿ ಆಟವಾಡಿತು. ಮೂರನೇ ವಿಕೆಟ್‌ಗೆ ಈ ಜೋಡಿ 159 ರನ್‌ಗಳ ಜವಾಬ್ದಾರಿಯುತ ಜತೆಯಾಟ ನಿಭಾಯಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಮತ್ತೊಮ್ಮೆ ಶಮಿ ಯಶಸ್ವಿಯಾದರು. 87 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 75 ರನ್ ಸಿಡಿಸಿ ಮುನ್ನುಗ್ಗುತ್ತಿದ್ದ ರಚಿನ್ ರವೀಂದ್ರ ಅವರನ್ನು ಬಲಿ ಪಡೆಯುವಲ್ಲಿ ಶಮಿ ಯಶಸ್ವಿಯದರು.

"ನಾನು ಅರ್ಧ ಆಸ್ಟ್ರೇಲಿಗ, ಹೀಗಾಗಿ ನನ್ನನ್ನು ಪಾಕಿಸ್ತಾನಿ ಎಂದು ಕರೆಯಬೇಡಿ": ವಕಾರ್ ಯೂನಿಸ್ ಹೀಗಂದಿದ್ದೇಕೆ?

ಇನ್ನು ನಾಯಕ ಟಾಮ್ ಲೇಥಮ್ 5 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಗ್ಲೆನ್ ಫಿಲಿಫ್ಸ್ ಬ್ಯಾಟಿಂಗ್ 23 ರನ್‌ಗಳಿಗೆ ಸೀಮಿತವಾಯಿತು. ಈ ಇಬ್ಬರನ್ನು ಬಲಿಪಡೆಯುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು.

ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯತ ಬ್ಯಾಟಿಂಗ್ ನಡೆಸಿದ ಡೇರಲ್ ಮಿಚೆಲ್ 100 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 5ನೇ ಶತಕ ಸಿಡಿಸಿ ಸಂಭ್ರಮಿಸಿದರು. ಕೊನೆಯ ಓವರ್‌ ವರೆಗೂ ಬ್ಯಾಟಿಂಗ್ ಮಾಡಿದ ಮಿಚೆಲ್ 127 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 130 ರನ್ ಬಾರಿಸಿ ಶಮಿಗೆ 5ನೇ ಬಲಿಯಾದರು.

ಭಾರತ ಕೊನೆಯ ಬಾರಿಗೆ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ಸೋಲಿಸಿದ್ದಾಗ ಕೊಹ್ಲಿಗೆ ಕೇವಲ 14 ವರ್ಷ..!

ವಿಶ್ವಕಪ್‌ನಲ್ಲಿ ದಾಖಲೆ ಬರೆದ ಶಮಿ: ಕಳೆದ ನಾಲ್ಕು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ತಾವಾಡಿದ ಮೊದಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸುವ ಮೂಲಕ ತಾವೆಷ್ಟು ಅಪಾಯಕಾರಿ ಬೌಲರ್ ಎನ್ನುವುದನ್ನು ಜಗತ್ತಿನ ಮುಂದೆ ಮತ್ತೊಮ್ಮೆ ಅನಾವರಣ ಮಾಡಿದ್ದಾರೆ. ಈ ವಿಶ್ವಕಪ್ ಟೂರ್ನಿಯಲ್ಲಿ ತಾವೆಸೆದ ಮೊದಲ ಎಸೆತದಲ್ಲೇ ವಿಲ್ ಯಂಗ್ ಬಲಿ ಪಡೆದ ಶಮಿ, ಆ ಬಳಿಕವೂ ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ ಹಾಗೂ ಡೇರಲ್ ಮಿಚೆಲ್ ಅವರನ್ನು ಬಲಿ ಪಡೆಯುವ ಮೂಲಕ ಕಿವೀಸ್ ರನ್ ವೇಗಕ್ಕೆ ಕಡಿವಾಣ ಹಾಕಿದರು. 

Mohammed Shami marks his comeback with a fiery five-wicket haul 🔥 Milestones 🏏 | pic.twitter.com/fk5xKym4ba

— ICC (@ICC)

ಇನ್ನು ಶಮಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎರಡನೇ ಬಾರಿಗೆ 5+ ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬೌಲರ್ ಎನ್ನುವ ಹಿರಿಮೆಗೆ ಶಮಿ ಪಾತ್ರರಾಗಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪರ ಕಪಿಲ್ ದೇವ್, ವೆಂಕಟೇಶ್ ಪ್ರಸಾದ್, ರಾಬಿನ್ ಸಿಂಗ್, ಆಶಿಶ್ ನೆಹ್ರಾ ಹಾಗೂ ಯುವರಾಜ್ ಸಿಂಗ್ ತಲಾ ಒಂದು ಭಾರಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

click me!