ಭಾರತಕ್ಕೆ ಆರಂಭಿಕ ಆಘಾತ; ಪೆವಿಲಿಯನ್ ಪರೇಡ್ ನಡೆಸಿದ ಗಿಲ್-ಕೊಹ್ಲಿ-ಅಯ್ಯರ್

By Naveen Kodase  |  First Published Oct 29, 2023, 3:20 PM IST

ಇಲ್ಲಿನ ಏಕಾನ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಗಿದೆ. ದೊಡ್ಡ ಇನಿಂಗ್ಸ್ ಕಲೆಹಾಕುವ ಕನಸಿನೊಂದಿಗೆ ಕಣಕ್ಕಿಳಿದ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಕೇವಲ 9 ರನ್ ಗಳಿಸಿ ಕ್ರಿಸ್ ವೋಕ್ಸ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.


ಲಖನೌ(ಅ.29): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 5 ಗೆಲುವು ದಾಖಲಿಸಿ ಮುನ್ನುಗ್ಗುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ಆರಂಭಿಕ ಆಘಾತ ಅನುಭವಿಸಿದೆ. 12 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ ಕೇವಲ 40 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಇಲ್ಲಿನ ಏಕಾನ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಗಿದೆ. ದೊಡ್ಡ ಇನಿಂಗ್ಸ್ ಕಲೆಹಾಕುವ ಕನಸಿನೊಂದಿಗೆ ಕಣಕ್ಕಿಳಿದ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಕೇವಲ 9 ರನ್ ಗಳಿಸಿ ಕ್ರಿಸ್ ವೋಕ್ಸ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

Tap to resize

Latest Videos

ಇನ್ನು ಈ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ನವೇ ಡೇವಿಡ್ ವಿಲ್ಲಿ ಬೌಲಿಂಗ್‌ನಲ್ಲಿ ಬೆನ್ ಸ್ಟೋಕ್ಸ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ವಿರಾಟ್ ಕೊಹ್ಲಿ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಜವಾಬ್ದಾರಿಯುತ ಆಟ ಆಡಬಹುದು ಎನ್ನುವ ನಿರೀಕ್ಷೆ ಹುಸಿ ಮಾಡಿದರು. ಶ್ರೇಯಸ್ ಅಯ್ಯರ್ 16 ಎಸೆತಗಳನ್ನು ಎದುರಿಸಿ ಕೇವಲ 4 ರನ್‌ ಗಳಿಸಿ ಕ್ರಿಸ್‌ ವೋಕ್ಸ್‌ಗೆ ಎರಡನೇ ಬಲಿಯಾದರು. ಈ ಮೂಲಕ ಟೀಂ ಇಂಡಿಯಾ 40 ರನ್‌ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಗಿದೆ.

ಸದ್ಯ 15 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 50 ರನ್ ಬಾರಿಸಿದ್ದು, ನಾಯಕ ರೋಹಿತ್ ಶರ್ಮಾ 33 ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ 5 ರನ್ ಗಳಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ. ಈ ಜೋಡಿಯ ಜತೆಯಾಟದ ಮೇಲೆ ಟೀಂ ಇಂಡಿಯಾ ಬ್ಯಾಟಿಂಗ್ ಸ್ಕೋರ್ ನಿರ್ಧಾರವಾಗುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಉಭಯ ತಂಡಗಳು ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿದಿವೆ. 

 ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ ನೀಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್‌ ರಾಹುಲ್‌, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌.

ಇಂಗ್ಲೆಂಡ್‌: ಜಾನಿ ಬೇರ್‌ಸ್ಟೋವ್‌, ಡೇವಿಡ್ ಮಲಾನ್‌, ಜೋ ರೂಟ್‌, ಬೆನ್ ಸ್ಟೋಕ್ಸ್‌, ಜೋಸ್ ಬಟ್ಲರ್‌(ನಾಯಕ), ಹ್ಯಾರಿ ಬ್ರೂಕ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಕ್ರಿಸ್ ವೋಕ್ಸ್‌, ಡೇವಿಡ್ ವಿಲ್ಲಿ, ಆ್ಯಟ್ಕಿನ್ಸನ್‌, ರಶೀದ್‌ ಖಾನ್.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌

click me!