ಇಲ್ಲಿನ ವಾಂಖೇಡೆ ಮೈದಾನದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ, ಆರಂಭದಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಒಂದು ಕಡೆ ಶುಭ್‌ಮನ್ ಗಿಲ್ ಅಬ್ಬರಿಸುತ್ತಿದ್ದರಿಂದ ಮತ್ತೊಂದು ತುದಿಯಲ್ಲಿ ಕೊಹ್ಲಿ, ಗಿಲ್‌ಗೆ ಉತ್ತಮ ಸಾಥ್ ನೀಡಿದರು. ವಿರಾಟ್ ಕೊಹ್ಲಿ 59 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು.
ಮುಂಬೈ(ನ.15): ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ವೃತ್ತಿಜೀವನದ 50ನೇ ಏಕದಿನ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಲೀಗ್ ಹಂತದಲ್ಲಿ ಕಿವೀಸ್ ಎದುರು ಶತಕ ಸಿಡಿಸುವ ಅವಕಾಶ ಕೈಚೆಲ್ಲಿದ್ದ ಕೊಹ್ಲಿ, ಇದೀಗ ನಾಕೌಟ್ ಹಂತದಲ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಒಟ್ಟಾರೆ 80ನೇ ಶತಕವಾಗಿದೆ.
ಇಲ್ಲಿನ ವಾಂಖೇಡೆ ಮೈದಾನದಲ್ಲಿ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ, ಆರಂಭದಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರು. ಒಂದು ಕಡೆ ಶುಭ್‌ಮನ್ ಗಿಲ್ ಅಬ್ಬರಿಸುತ್ತಿದ್ದರಿಂದ ಮತ್ತೊಂದು ತುದಿಯಲ್ಲಿ ಕೊಹ್ಲಿ, ಗಿಲ್‌ಗೆ ಉತ್ತಮ ಸಾಥ್ ನೀಡಿದರು. ವಿರಾಟ್ ಕೊಹ್ಲಿ 59 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು.
undefined
Breaking: ಇದ್ದಕ್ಕಿದ್ದಂತೆ ಮೈದಾನ ತೊರೆದ ಶುಭ್‌ಮನ್ ಗಿಲ್..! ಯಾಕೆ? ಏನಾಯ್ತು?
ಸಚಿನ್-ಶಕೀಬ್ ದಾಖಲೆ ಮುರಿದ ವಿರಾಟ್ ಕೊಹ್ಲಿ: ಕಿವೀಸ್ ಎದುರು ಆಕರ್ಷಕ ಅರ್ಧಶತಕ ಸಿಡಿಸುತ್ತಿದ್ದಂತೆಯೇ, ಸಚಿನ್ ತೆಂಡುಲ್ಕರ್ ಹಾಗೂ ಶಕೀಬ್ ಅಲ್ ಹಸನ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೊದಲು ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್ ಬಾರಿಸಿದ ದಾಖಲೆ ಸಚಿನ್ ಹಾಗೂ ಶಕೀಬ್ ಹೆಸರಿನಲ್ಲಿತ್ತು. ಕಳೆದ ಪಂದ್ಯದಲ್ಲಿ ಕೊಹ್ಲಿ 51 ರನ್ ಬಾರಿಸುವ ಮೂಲಕ ಆ ದಾಖಲೆ ಸರಿಗಟ್ಟಿದ್ದರು. ಇದೀಗ 8ನೇ ಬಾರಿಗೆ 50+ ರನ್ ಬಾರಿಸುವ ಮೂಲಕ ಅಪರೂಪದ ದಾಖಲೆ ಕೊಹ್ಲಿ ಪಾಲಾಗಿದೆ.
𝗙𝗜𝗙𝗧𝗬 𝗢𝗗𝗜 𝗛𝗨𝗡𝗗𝗥𝗘𝗗𝗦! 💯
A round of applause for the run-machine: VIRAT KOHLI 👏👏 | | | pic.twitter.com/EbLta2kjue
ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಕೊಹ್ಲಿ:
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಲಯದಲ್ಲಿರುವ ವಿರಾಟ್ ಕೊಹ್ಲಿ, ಇದೀಗ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನ್ನುವ ಹಿರಿಮೆಗೂ ಪಾತ್ರರಾಗಿದ್ದಾರೆ. ಈ ಮೊದಲು ಸಚಿನ್ ತೆಂಡುಲ್ಕರ್ 2003ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 673 ರನ್ ಬಾರಿಸಿದ್ದರು. ಆದರೆ ಇದೀಗ ಕೊಹ್ಲಿ 696 ರನ್ ಬಾರಿಸಿ ಮುನ್ನುಗ್ಗುತ್ತಿದ್ದಾರೆ.
𝙈𝙊𝙉𝙐𝙈𝙀𝙉𝙏𝘼𝙇! 🫡🫡
Virat Kohli surpasses the legendary Sachin Tendulkar and now has the most centuries in Men's ODIs 👏👏 | | | | pic.twitter.com/230u7JAxcJ
ಇನ್ನು ಸ್ನಾಯು ಸೆಳೆತದಿಂದಾಗಿ ಶುಭ್‌ಮನ್ ಗಿಲ್ ಮೈದಾನ ತೊರೆದ ಬಳಿಕ ಲೋಕಲ್ ಹೀರೋ ಶ್ರೇಯಸ್ ಅಯ್ಯರ್ ಜತೆ ಚುರುಕಿನ ಶತಕದ ಜತೆಯಾಟವಾಡುವ ಮೂಲಕ ತಂಡದ ರನ್ ವೇಗಕ್ಕೆ ಮತ್ತಷ್ಟು ಚುರುಕು ಮುಟ್ಟಿಸಿದರು. ಒಟ್ಟು 106 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ದಾಖಲೆ ನಿರ್ಮಿಸಿದ್ದ ಸಚಿನ್ ತೆಂಡುಲ್ಕರ್(49 ಶತಕ) ದಾಖಲೆಯನ್ನು ಬ್ರೇಕ್ ಮಾಡುವಲ್ಲಿ ಯಶಸ್ವಿಯಾದರು.