World Cup 2023 ಭಾರತ vs ನೆದರ್‌ಲೆಂಡ್ಸ್‌ ಅಭ್ಯಾಸ ಪಂದ್ಯಕ್ಕೂ ಮಳೆ ಅಡ್ಡಿ?

By Naveen Kodase  |  First Published Oct 3, 2023, 12:00 PM IST

ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 


ತಿರುವನಂತಪುರಂ(ಅ.03): ಐಸಿಸಿ ಏಕದಿನ ವಿಶ್ವಕಪ್‌ನ ಅಭ್ಯಾಸ ಪಂದ್ಯದಲ್ಲಿ ಬುಧವಾರ ಭಾರತ ಹಾಗೂ ನೆದರ್‌ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇಂಗ್ಲೆಂಡ್‌ ವಿರುದ್ಧ ಗುವಾಹಟಿಯಲ್ಲಿ ನಡೆಯಬೇಕಿದ್ದ ಭಾರತದ ಮೊದಲ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಸದ್ಯ ತಿರುವನಂತಪುರಂನಲ್ಲೂ ಭಾರೀ ಮಳೆಯಾಗುತ್ತಿದ್ದು, ಬುಧವಾರದ ಪಂದ್ಯಕ್ಕೂ ಅಡ್ಡಿಯಾಗುವ ಸಾಧ್ಯತೆ ಹೆಚ್ಚು. 

ಅಕ್ಟೋಬರ್ 05ರಂದು ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 2019ರ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. 

Latest Videos

undefined

Asian Games 2023 ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ, ನೇಪಾಳ ಮಣಿಸಿ ಸೆಮೀಸ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ

ಇನ್ನು ಅತಿಥೇಯ ಭಾರತ ಕ್ರಿಕೆಟ್ ತಂಡವು ಅಕ್ಟೋಬರ್ 08ರಂದು 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಚೆನ್ನೈನಲ್ಲಿ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ವಿಶ್ವಕಪ್‌ಗೆ ಭಾರತ ತಂಡ: 

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮದ್‌ ಸಿರಾಜ್‌, ಕುಲ್ದೀಪ್‌ ಯಾದವ್‌, ಮೊಹಮದ್‌ ಶಮಿ, ಆರ್‌.ಅಶ್ವಿನ್‌, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಯಾದವ್‌.

CWC 2023: ತುರ್ತು ಕಾರಣಕ್ಕೆ ತಂಡವನ್ನು ತೊರೆದು ಮುಂಬೈಗೆ ಪ್ರಯಾಣಿಸಿದ ವಿರಾಟ್‌ ಕೊಹ್ಲಿ!

ದಿನದ ಮತ್ತೆರಡು ಅಭ್ಯಾಸ ಪಂದ್ಯಗಳಲ್ಲಿ ಗುವಾಹಟಿಯಲ್ಲಿ ಅಫ್ಘಾನಿಸ್ತಾನ-ಶ್ರೀಲಂಕಾ, ಹೈದರಾಬಾದ್‌ನಲ್ಲಿ ಪಾಕಿಸ್ತಾನ-ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಮಂಗಳವಾರದ ಅಭ್ಯಾಸ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಡಿಎಲ್‌ಎಸ್‌ ನಿಯಮದನ್ವಯ 7 ವಿಕೆಟ್‌ ಜಯಗಳಿಸಿತು.

ಭಾರತದ ಪಂದ್ಯ: ಮ.2ಕ್ಕೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಡಿಸ್ನಿ+ಹಾಟ್‌ಸ್ಟಾರ್‌.

ಈ ಪಂದ್ಯಕ್ಕೆ ಕೊಹ್ಲಿ ಅಲಭ್ಯ?

ನವದೆಹಲಿ: ವೈಯಕ್ತಿಕ ಕಾರಣಗಳಿಂದಾಗಿ ಗುವಾಹಟಿಯಿಂದ ಸೆ.30ರಂದು ಮುಂಬೈಗೆ ತೆರಳಿದ್ದ ಹಿರಿಯ ಆಟಗಾರ ವಿರಾಟ್‌ ಕೊಹ್ಲಿ, ಸೋಮವಾರ ಇನ್ನೂ ತಂಡ ಕೂಡಿಕೊಂಡಿರಲಿಲ್ಲ. ಹೀಗಾಗಿ ಅವರು ಮಂಗಳವಾರದ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಕೊಹ್ಲಿ ಒಂದು ವೇಳೆ ಮಂಗಳವಾರ ಬೆಳಗ್ಗೆ ತಿರುವನಂತಪುರಂ ತಲುಪಿದರೆ, ನೆದರ್‌ಲೆಂಡ್ಸ್‌ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬ್ಯಾಟ್‌ ಮಾಡಬಹುದು ಎಂದು ವರದಿಯಾಗಿದೆ.

ಇರಾನಿ ಕಪ್‌: ಶೇಷ ಭಾರತ ಮೇಲುಗೈ

ರಾಜ್‌ಕೋಟ್‌: ಹಾಲಿ ರಣಜಿ ಚಾಂಪಿಯನ್‌ ಸೌರಾಷ್ಟ್ರ ವಿರುದ್ಧದ ಇರಾನಿ ಟ್ರೋಫಿ ಕ್ರಿಕೆಟ್‌ನಲ್ಲಿ ಶೇಷ ಭಾರತ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ. ಮಂಗಳವಾರ ಶೇಷ ಭಾರತ 308 ರನ್‌ಗೆ ಆಲೌಟಾಯಿತು. ಇದಕ್ಕೆ ಉತ್ತರವಾಗಿ ಬ್ಯಾಟ್‌ ಮಾಡುತ್ತಿರುವ ಸೌರಾಷ್ಟ್ರ 2ನೇ ದಿನದಂತ್ಯಕ್ಕೆ 9 ವಿಕೆಟ್‌ ಕಳೆದುಕೊಂಡು 212 ರನ್‌ ಗಳಿಸಿದ್ದು, ಇನ್ನೂ 96 ರನ್‌ ಹಿನ್ನಡೆಯಲ್ಲಿದೆ. ಅರ್ಪಿತ್‌ ವಸವಾಡ 54 ರನ್‌ ಗಳಿಸಿದರು. ಸೌರಭ್‌ ಕುಮಾರ್‌, ಕರ್ನಾಟಕದ ವೇಗಿ ವಿದ್ವತ್‌ ಕಾವೇರಪ್ಪ ತಲಾ 3 ವಿಕೆಟ್‌ ಕಿತ್ತರು.

click me!