
ಕರಾಚಿ(ಜ.26): ಈ ವರ್ಷ ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್ ಟಿ20 ಟೂರ್ನಿಗೆ ಭಾರತ ತಂಡವನ್ನು ಕಳುಹಿಸದೆ ಇದ್ದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡವನ್ನು ಕಳುಹಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸಿಇಒ ವಾಸೀಂ ಖಾನ್ ಶನಿವಾರ ಬಿಸಿಸಿಐಗೆ ಎಚ್ಚರಿಕೆ ನೀಡಿದ್ದಾರೆ.
ಏಷ್ಯಾಕಪ್ 2020: ಬಿಸಿಸಿಐಗೆ ಪಾಕ್ ಗಡುವು
ರಾಜಕೀಯ ಸಂಘರ್ಷದ ಕಾರಣ, ಭಾರತ ತಂಡ 2008ರಿಂದ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. 2007ರಿಂದ ದ್ವಿಪಕ್ಷೀಯ ಟೆಸ್ಟ್ ಸರಣಿಯನ್ನು ಆಡಿಲ್ಲ. ಆದರೆ ಪಾಕಿಸ್ತಾನ 2012ರಲ್ಲಿ ಸೀಮಿತ ಓವರ್ ಸರಣಿಯನ್ನು ಆಡಲು ಭಾರತಕ್ಕೆ ಆಗಮಿಸಿತ್ತು.
ಪಾಕಿಸ್ತಾನಕ್ಕೆ 2020ರ ಏಷ್ಯಾ ಕಪ್ ಆತಿಥ್ಯ
ಭದ್ರತೆ ಸಮಸ್ಯೆಯಿಂದಾಗಿ ಪಾಕಿಸ್ತಾನದಲ್ಲಿ ಹಲವು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ನಡೆದಿರಲಿಲ್ಲ. ಆದರೆ ಪಿಸಿಬಿ, ಅಂತಾರಾಷ್ಟ್ರೀಯ ಸರಣಿಗಳನ್ನು ಆಯೋಜಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದ ಕಾರಣ, ಕಳೆದ ಆವೃತ್ತಿಯನ್ನು ಯುಎಇನಲ್ಲಿ ನಡೆಸಲಾಗಿತ್ತು. ಈ ವರ್ಷವೂ ಟೂರ್ನಿ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.