ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೊಹಮ್ಮದ್ ಶಮಿ ಅನುಪಸ್ಥಿತಿ ಟೀಂ ಇಂಡಿಯಾವನ್ನು ಕಾಡಲಿದೆ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ
ದುಬೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 1-3 ಅಂತರದಲ್ಲಿ ಸೋಲು ಎದುರಾಗಲಿದೆ. ಮೊಹಮ್ಮದ್ ಶಮಿ ಅನುಪಸ್ಥಿತಿ ತಂಡವನ್ನು ಬಲವಾಗಿ ಕಾಡಲಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಐಸಿಸಿ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಭಾರತ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ. 20 ವಿಕೆಟ್ ಪಡೆಯುವುದೇ ಸವಾಲು. ಮೊಹಮ್ಮದ್ ಶಮಿ ಅನುಪಸ್ಥಿತಿ ತುಂಬಾ ಕಾಡಲಿದೆ. ಭಾರತ ಪಂದ್ಯ ಗೆಲ್ಲುತ್ತೆ. ಆದರೆ ಆಸೀಸ್‌ನ ಸೋಲಿಸಿ ಸರಣಿ ಗೆಲ್ಲಲ್ಲ' ಎಂದಿದ್ದಾರೆ.
undefined
ಐಪಿಎಲ್ ಹರಾಜಿನಲ್ಲಿ ಇಟಲಿಯ ಥಾಮಸ್, ಅಮೆರಿಕದ ಸೌರಭ್, ಇಂಗ್ಲೆಂಡ್‌ನ ಆಂಡರ್‌ಸನ್!
ಭಾರತ ಪರ ಮೊಹಮ್ಮದ್ ಶಮಿ ಇದುವರೆಗೂ 64 ಟೆಸ್ಟ್ ಪಂದ್ಯಗಳನ್ನಾಡಿದ್ದು, 229 ಬಲಿ ಪಡೆದಿದ್ದಾರೆ. ಇನ್ನು 2013ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಶಮಿ, ಇದುವರೆಗೂ ಆಸ್ಟ್ರೇಲಿಯಾ ಎದುರು 12 ಟೆಸ್ಟ್ ಪಂದ್ಯಗಳನ್ನಾಡಿದ್ದು, 44 ವಿಕೆಟ್ ಕಬಳಿಸುವ ಮೂಲಕ ಕಾಂಗರೂ ಪಡೆಯನ್ನು ಇನ್ನಿಲ್ಲದಂತೆ ಕಾಡಿದ್ದಾರೆ. ಇನ್ನು ಆಸೀಸ್ ನೆಲದಲ್ಲಿ 8 ಟೆಸ್ಟ್ ಪಂದ್ಯಗಳನ್ನಾಡಿದ್ದು 31 ಟೆಸ್ಟ್ ವಿಕೆಟ್ ಕಬಳಿಸಿದ್ದಾರೆ. ಇದೀಗ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಶಮಿ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ.
ಇತ್ತೀಚೆಗಷ್ಟೇ ತವರಿನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವೈಟ್‌ವಾಷ್ ಅನುಭವಿಸಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದೀಗ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದೃಷ್ಟಿಯಿಂದ ಮತ್ತೊಮ್ಮೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲ್ಲುವುದು ಮಾಡು ಇಲ್ಲವೇ ಮಡಿ ಸರಣಿ ಎನಿಸಿಕೊಂಡಿದೆ.
ಅಮ್ಮನ ಕಾಲಿಗೆ ನಮಸ್ಕರಿಸಿ ಆಸ್ಟ್ರೇಲಿಯಾಗೆ ವಿಮಾನವೇರಿದ ರಿಷಭ್ ಪಂತ್! ವಿಡಿಯೋ ವೈರಲ್
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ರಿಷಭ್ ಪಂತ್, ಸರ್ಫರಾಜ್ ಖಾನ್, ಧೃವ್ ಜುರೆಲ್, ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮದ್ ಸಿರಾಜ್, ಆಕಾಶ್‌ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್.
6 ವರ್ಷಗಳ ಬಳಿಕ ಮತ್ತೆ ವಾರ್ನ‌್ರಗೆ ನಾಯಕತ್ವ!
ಸಿಡ್ನಿ: 2018ರ ಚೆಂಡು ವಿರೂಪ ಪ್ರಕರಣದ ಬಳಿಕ ನಾಯಕತ್ವದ ನಿಷೇಧಕ್ಕೊಳಗಾಗಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಈಗ ಮತ್ತೆ ನಾಯಕರಾಗಿ ಕಾಣಿಸಿ ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಅವರ ಮೇಲಿನ ನಿಷೇಧ ವನ್ನು ಕ್ರಿಕೆಟ್ ಆಸ್ಟ್ರೇಲಿಯಾ ತೆರವುಗೊಳಿಸಿತ್ತು. ಇದರ ಬೆನ್ನಲ್ಲೇ ಬಿಗ್‌ಬ್ಯಾಶ್‌ನ ಸಿಡ್ನಿ ಥಂಡ ನಾಯಕರಾಗಿ ವಾರ್ನರ್ ಆಯ್ಕೆಯಾಗಿದ್ದಾರೆ. ಈ ಮೂಲಕ 6 ವರ್ಷಗಳ ಬಳಿಕ ವಾರ್ನರ್ ಆಸ್ಟ್ರೇಲಿಯಾ ಕ್ರಿಕೆಟ್‌ನಲ್ಲಿ ತಂಡವೊಂದರ ನಾಯಕತ್ವ ಪಡೆಯಲಿದ್ದಾರೆ.