
ಚೆನ್ನೈ(ಮಾ.22): ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ ಅವರ ಮಾರಕ ದಾಳಿಯ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ 269 ರನ್ ಬಾರಿಸಿ ಸರ್ವಪತನ ಕಂಡಿದೆ ಆಸ್ಟ್ರೇಲಿಯಾದ ಯಾವೊಬ್ಬ ಬ್ಯಾಟರ್ ಕೂಡಾ ಅರ್ಧಶತಕ ಸಿಡಿಸದಿದ್ದರೂ, ಕಾಂಗರೂ ಪಡೆ ಭಾರತಕ್ಕೆ ಸವಾಲಿನ ಗುರಿ ನೀಡಿದೆ
ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಮಿಚೆಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಜೋಡಿ ಅರ್ಧಶತಕದ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಮೊದಲ 10.5 ಓವರ್‌ಗಳಲ್ಲಿ ಈ ಜೋಡಿ 68 ರನ್‌ಗಳ ಜತೆಯಾಟವಾಡಿತು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು. ಟ್ರಾವಿಸ್ ಹೆಡ್ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 33 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ, ಆಸೀಸ್ ನಾಯಕ ಸ್ಟೀವ್ ಸ್ಮಿತ್ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ 5ನೇ ಬಾರಿಗೆ ಸ್ಟೀವ್ ಸ್ಮಿತ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಮತ್ತೊಂದು ತುದಿಯಲ್ಲಿ 47 ಎಸೆತಗಳಲ್ಲಿ 47 ರನ್ ಬಾರಿಸಿ ಅರ್ಧಶತಕದತ್ತ ಹೆಜ್ಜೆಹಾಕುತ್ತಿದ್ದ ಮಿಚೆಲ್ ಮಾರ್ಷ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಆಸೀಸ್‌ಗೆ ಬಲವಾದ ಪೆಟ್ಟು ನೀಡಿದರು. ಈ ಮೂಲಕ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳನ್ನು ಬಲಿಪಡೆಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾದರು.
ಮೊನ್ನೆ ನಾಟು ನಾಟು, ಇಂದು ಲುಂಗಿ ಡ್ಯಾನ್ಸ್, ಕೊಹ್ಲಿ ಸ್ಟೆಪ್ಸ್‌ಗೆ ಅಭಿಮಾನಿಗಳು ಫಿದಾ!
ಮೊದಲ ಬಾರಿಗೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಾರ್ನರ್: ಫಿಟ್ನೆಸ್ ಸಮಸ್ಯೆಯಿಂದಾಗಿ ಮೊದಲೆರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್, ಮೂರನೇ ಏಕದಿನ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದು ಗಮನ ಸೆಳೆದರು. ಏಕದಿನ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿಗೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದ ವಾರ್ನರ್, 4ನೇ ವಿಕೆಟ್‌ಗೆ ಡೇವಿಡ್ ವಾರ್ನರ್, ಮಾರ್ನಸ್ ಲಬುಶೇನ್ ಜತೆಗೂಡಿ 40 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದ ವಾರ್ನರ್, 31 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 23 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಮಾರ್ನಸ್ ಲಬುಶೇನ್ 28 ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕೇರಿ 38 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಈ ಇಬ್ಬರನ್ನು ಪೆವಿಲಿಯನ್ನಿಗಟ್ಟುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು. ಇನ್ನು ಆಲ್ರೌಂಡರ್ ಮಾರ್ಕಸ್ ಸ್ಟೋನಿಸ್ 25 ರನ್ ಬಾರಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಕೊನೆಯಲ್ಲಿ 8ನೇ ವಿಕೆಟ್‌ಗೆ ಆಸ್ಟನ್ ಏಗರ್ ಹಾಗೂ ಶಾನ್ ಅಬ್ಬೋಟ್ ಜೋಡಿ 42 ಎಸೆತಗಳಲ್ಲಿ 42 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 240ರ ಗಡಿ ದಾಟಿಸಿದರು. ಶಾನ್ ಅಬ್ಬೋಟ್ 23 ಎಸೆತಗಳಲ್ಲಿ 26 ರನ್ ಬಾರಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಆಸ್ಟನ್ ಏಗರ್ 17 ರನ್ ಬಾರಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು
ಭಾರತ ಪರ ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 2 ಹಾಗೂ ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಕಬಳಿಸಿದರು.
ಸಂಕ್ಷಿಪ್ತ ಸ್ಕೋರ್
ಆಸ್ಟ್ರೇಲಿಯಾ: 269/10
ಮಿಚೆಲ್ ಮಾರ್ಷ್: 47
ಟ್ರಾವಿಸ್ ಹೆಡ್: 33
ಹಾರ್ದಿಕ್ ಪಾಂಡ್ಯ: 44/3
(* ಆಸ್ಟ್ರೇಲಿಯಾದ ಬ್ಯಾಟಿಂಗ್ ಮುಕ್ತಾಯದ ವೇಳೆಗೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.