Ind vs Aus ಮೊಹಮ್ಮದ್ ಶಮಿ ಮಾರಕ ದಾಳಿ, ಭಾರತಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಆಸೀಸ್

By Naveen Kodase  |  First Published Sep 22, 2023, 5:33 PM IST

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿದ್ದ ಈ ಜೋಡಿ, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಆಕ್ರಮಣಕಾರಿ ಆಟವನ್ನು ಮೈಗೂಡಿಸಿಕೊಂಡರು. ಮೂರನೇ ವಿಕೆಟ್‌ಗೆ ಈ ಜೋಡಿ 106 ಎಸೆತಗಳನ್ನು ಎದುರಿಸಿ 94 ರನ್‌ಗಳ ಜತೆಯಾಟವಾಡಿದರು. ಚುರುಕಿನ ಆಟವಾಡಿದ ಡೇವಿಡ್ ವಾರ್ನರ್ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 52 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.


ಮೊಹಾಲಿ(ಸೆ.22): ಮೊಹಮ್ಮದ್ ಶಮಿಯ ಮಾರಕ ದಾಳಿಯ ಹೊರತಾಗಿಯೂ ಸಂಘಟಿತ ಪ್ರದರ್ಶನ ತೋರಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 276 ರನ್ ಬಾರಿಸಿ ಸರ್ವಪತನ ಕಂಡಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ. 

ಇಲ್ಲಿನ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆಸ್ಟ್ರೇಲಿಯಾ ತಂಡವು ಆರಂಭದಲ್ಲಿಯೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಇನಿಂಗ್ಸ್‌ನ ಮೊದಲ ಓವರ್‌ನಲ್ಲಿ ಅನುಭವಿ ವೇಗಿ ಮೊಹಮ್ಮದ್ ಶಮಿ, ಮಿಚೆಲ್ ಮಾರ್ಷ್‌(4) ಅವರನ್ನು ಪೆವಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.

Latest Videos

undefined

Ind vs Aus ಮೊಹಮ್ಮದ್ ಶಮಿ ಮಾರಕ ದಾಳಿ, ಭಾರತಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಆಸೀಸ್

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿದ್ದ ಈ ಜೋಡಿ, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಆಕ್ರಮಣಕಾರಿ ಆಟವನ್ನು ಮೈಗೂಡಿಸಿಕೊಂಡರು. ಮೂರನೇ ವಿಕೆಟ್‌ಗೆ ಈ ಜೋಡಿ 106 ಎಸೆತಗಳನ್ನು ಎದುರಿಸಿ 94 ರನ್‌ಗಳ ಜತೆಯಾಟವಾಡಿದರು. ಚುರುಕಿನ ಆಟವಾಡಿದ ಡೇವಿಡ್ ವಾರ್ನರ್ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 52 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಇನ್ನು ಎರಡನೇ ಸ್ಪೆಲ್‌ನಲ್ಲಿ ದಾಳಿಗಿಳಿದ ಮೊಹಮ್ಮದ್ ಶಮಿ, ಅಪಾಕಾರಿಯಾಗುವ ಮುನ್ಸೂಚನೆ ನೀಡಿದ ಸ್ಟೀವ್ ಸ್ಮಿತ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ 60 ಎಸೆತಗಳನ್ನು ಎದುರಿಸಿ 3 ಬೌಂಡರಿ ಒಂದು ಸಿಕ್ಸರ್ ಸಹಿತ 41 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಇನ್ನು ಸುಮಾರು 18 ತಿಂಗಳ ಬಳಿಕ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಪಾಯಕಾರಿ ಬ್ಯಾಟರ್ ಮಾರ್ನಸ್ ಲಬುಶೇನ್(39) ಅವರನ್ನು ಬಲಿಪಡೆಯುವಲ್ಲಿ ಯಶಸ್ವಿಯಾದರು. ಅಶ್ವಿನ್ ಕಮ್‌ಬ್ಯಾಕ್ ಪಂದ್ಯದಲ್ಲಿ 10 ಓವರ್ ಬೌಲಿಂಗ್ ಮಾಡಿ 47 ರನ್ ನೀಡಿ ಒಂದು ವಿಕೆಟ್ ಕಬಳಿಸಿದರು. 

ಏಕದಿನ ತಂಡ ಕೂಡಿಕೊಳ್ಳುತ್ತಿದ್ದಂತೆಯೇ ಖಡಕ್ ವಾರ್ನಿಂಗ್ ಕೊಟ್ಟ ಅನುಭವಿ ಸ್ಪಿನ್ನರ್ ಅಶ್ವಿನ್‌..!

ಇನ್ನುಳಿದಂತೆ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 31 ರನ್ ಗಳಿಸಿ ಇಲ್ಲದ ಎರಡನೇ ರನ್ ಕದಿಯಲು ಹೋಗಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಶ್(45) ಹಾಗೂ ಮಾರ್ಕಸ್ ಸ್ಟೋನಿಸ್(29 ಚುರುಕಾಗಿ ರನ್ ಗಳಿಸುವ ಮೂಲಕ ತಂಡದ ಮೊತ್ತ 250ರ ಗಡಿ ದಾಟುವಂತೆ ಮಾಡಿದರು.

That has been one special effort with the ball!

A second ODI FIFER for ! | | pic.twitter.com/qXbQCAIZxQ

— BCCI (@BCCI)

ಶಮಿಗೆ ಒಲಿದ 5 ವಿಕೆಟ್ ಗೊಂಚಲು:

ಏಷ್ಯಾಕಪ್ ಟೂರ್ನಿಯಲ್ಲಿ ಬಹುತೇಕ ಬೆಂಚ್ ಕಾಯಿಸಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಬಲಾಢ್ಯ ಆಸ್ಟ್ರೇಲಿಯಾ ಬ್ಯಾಟರ್‌ಗಳ ಎದುರು ಮಾರಕ ದಾಳಿ ನಡೆಸಿ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಶಮಿ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್‌ಗಳಾದ ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ಶಾರ್ಟ್‌ ಹಾಗೂ ಶಾನ್ ಅಬ್ಬೋಟ್ ಬಲಿ ಪಡೆಯುವ ಮೂಲಕ ಆಸೀಸ್ ರನ್ ವೇಗಕ್ಕೆ ಕಡಿವಾಣ ಹಾಕಿದರು. ಶಮಿ 10 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಓವರ್ ಸಹಿತ ಕೇವಲ 51 ರನ್ ನೀಡಿ 5 ವಿಕೆಟ್ ಕಬಳಿಸಿದರು.
 

click me!