Ind vs Aus: ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ಉಭಯ ತಂಡದಲ್ಲೂ ಮಹತ್ವದ ಬದಲಾವಣೆ

By Naveen Kodase  |  First Published Sep 24, 2023, 1:06 PM IST

ಜಸ್ಪ್ರೀತ್ ಬುಮ್ರಾ, ಎರಡನೇ ಪಂದ್ಯದ ಮಟ್ಟಿಗೆ ಕೊಂಚ ಬಿಡುವು ಪಡೆದುಕೊಂಡಿದ್ದು, ತನ್ನ ಕುಟುಂಬವನ್ನು ಭೇಟಿಯಾಗಲು ತೆರಳಿರುವುದರಿಂದ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಬುಮ್ರಾ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ.


ಇಂದೋರ್(ಸೆ.24): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ಹಂಗಾಮಿ ನಾಯಕ ಸ್ಟೀವ್ ಸ್ಮಿತ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ಯಾಟ್ ಕಮಿನ್ಸ್‌ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಈ ಪಂದ್ಯವನ್ನೂ ಗೆದ್ದು, ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ಜಸ್ಪ್ರೀತ್ ಬುಮ್ರಾ, ಎರಡನೇ ಪಂದ್ಯದ ಮಟ್ಟಿಗೆ ಕೊಂಚ ಬಿಡುವು ಪಡೆದುಕೊಂಡಿದ್ದು, ತನ್ನ ಕುಟುಂಬವನ್ನು ಭೇಟಿಯಾಗಲು ತೆರಳಿರುವುದರಿಂದ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಬುಮ್ರಾ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೋನಿಸ್, ಪ್ಯಾಟ್ ಕಮಿನ್ಸ್ ಹೊರಬಿದ್ದಿದ್ದು, ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ, ಜೋಶ್ ಹೇಜಲ್‌ವುಡ್ ಹಾಗೂ ಸ್ಪೆನ್ಸರ್ ಜಾನ್ಸನ್ ತಂಡ ಕೂಡಿಕೊಂಡಿದ್ದಾರೆ.

2nd ODI. AUSTRALIA won the toss and elected to field. https://t.co/OeTiga5wzy

— BCCI (@BCCI)

Latest Videos

undefined

Ind vs Aus: ಇಂದೋರ್‌ನಲ್ಲಿಂದು ಟೀಂ ಇಂಡಿಯಾಗೆ ಸರಣಿ ಗೆಲ್ಲುವ ಗುರಿ..!

ಆಸೀಸ್‌ಗೆ ಸಮಬಲದ ಗುರಿ: ಇನ್ನು ಭಾರತದಲ್ಲೆ ನಡೆಯಲಿರುವ ವಿಶ್ವಕಪ್‌ಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಬೇಕಿರುವ ಆಸೀಸ್‌ಗೆ ಈ ಪಂದ್ಯದಲ್ಲಿ ಸಮಬಲ ಸಾಧಿಸುವ ಅನಿವಾರ್ಯತೆಯಿದೆ. ಡೇವಿಡ್ ವಾರ್ನರ್‌, ಮಾರ್ನಸ್ ಲಬುಶೇನ್‌, ಸ್ಟೀವ್‌ ಸ್ಮಿತ್‌ ಭಾರತದ ಬೌಲರ್‌ಗಳಿಗೆ ಮತ್ತೊಮ್ಮೆ ಸವಾಲಾಗಿ ಪರಿಣಮಿಸಬಹುದು. ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ಜತೆಗೆ ಮ್ಯಾಥ್ಯೂ ಶಾರ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ತೀರಾ ಅಪರೂಪ ಎನ್ನುವಂತೆ ಆಸ್ಟ್ರೇಲಿಯಾ ತಂಡದಲ್ಲಿ ಇಬ್ಬರು ತಜ್ಞ ವಿಕೆಟ್ ಕೀಪರ್‌ಗಳಾದ ಜೋಶ್ ಇಂಗ್ಲಿಶ್ ಹಾಗೂ ಅಲೆಕ್ಸ್ ಕ್ಯಾರಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡಗಳು ಹೀಗಿವೆ ನೋಡಿ

ಭಾರತ: ಶುಭ್‌ಮನ್ ಗಿಲ್‌, ಋತುರಾಜ್ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್‌ ಕಿಶನ್, ಕೆ ಎಲ್ ರಾಹುಲ್‌(ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್‌, ಶಾರ್ದೂಲ್‌ ಠಾಕೂರ್, ಪ್ರಸಿದ್ಧ್‌ ಕೃಷ್ಣ, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್‌, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್‌(ನಾಯಕ), ಮಾರ್ನಸ್ ಲಬುಶೇನ್‌, ಕ್ಯಾಮರೋನ್ ಗ್ರೀನ್‌, ಜೋಶ್ ಇಂಗ್ಲಿಸ್‌, ಅಲೆಕ್ಸ್ ಕ್ಯಾರಿ, ಶಾನ್ ಅಬೋಟ್‌, ಆಡಂ ಜಂಪಾ, ಜೋಶ್ ಹೇಜಲ್‌ವುಡ್, ಸ್ಪೆನ್ಸರ್ ಜಾನ್ಸನ್.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟೋರ್ಟ್ಸ್‌ 18, ಜಿಯೋ ಸಿನಿಮಾ

click me!