ಅಲ್ಪ ಮೊತ್ತಕ್ಕೆ ಇಂಗ್ಲೆಂಡ್ ಆಲೌಟ್; 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ!

By Suvarna NewsFirst Published Feb 14, 2021, 3:44 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟ ತಲುಪಿದೆ. ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದಿರುವ ಟೀಂ ಇಂಡಿಯಾ ಇದೀಗ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದೆ. ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಚೆನ್ನೈ(ಫೆ.14):  ಮೊದಲ ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಇದೀಗ 2ನೇ ಪಂದ್ಯದಲ್ಲಿ ತಿರುಗೇಡಲು ಸಜ್ಜಾಗಿದೆ. ಇಂಗ್ಲೆಂಡ್ ತಂಡವನ್ನು 134 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ, ಇದೀಗ 2ನೇ ಇನಿಂಗ್ಸ್ ಆರಂಭಿಸಿದೆ. ಈ ಮೂಲಕ ಬೃಹತ್ ಮೊತ್ತ ಪೇರಿಸಲು ಭಾರತ ರನ್ ಕಲೆಹಾಕುತ್ತಿದೆ.

ಚೆನ್ನೈ ಟೆಸ್ಟ್; ರೋಹಿತ್ ಶತಕ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ

ಆರ್ ಅಶ್ವಿನ್ ಸ್ಪಿನ್ ಮೋಡಿಗೆ ಇಂಗ್ಲೆಂಡ್ ತತ್ತರಿಸಿತು. ಡೋಮಿಕ್ ಸಿಬ್ಲಿ,  ಡೆನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಒಲ್ಲಿ ಸ್ಟೋನ್ ಹಾಗೂ ಸ್ಟುವರ್ಟ್ ಬ್ರಾಡ್ ವಿಕೆಟ್ ಕಬಳಿಸೋ ಮೂಲಕ ಇಂಗ್ಲೆಂಡ್ ತಂಡಕ್ಕೆ ಅಶ್ವಿನ್ ಶಾಕ್ ನೀಡಿದರು. ಆರ್ ಅಶ್ವಿನ್ ಸ್ಪಿನ್ ಮೋಡಿಗೆ ಇಂಗ್ಲೆಂಡ್ ತತ್ತರಿಸಿತು. ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಅಕ್ಸರ್ ಪಟೇಲ್ 2, ಇಶಾಂತ್ ಶರ್ಮಾ 2 ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದರು.  

ಮೊದಲ ಇನ್ನಿಂಗ್ಸ್‌ನಲ್ಲಿ 195 ರನ್ ಮುನ್ನಡೆ ಪಡೆದ ಟೀಂ ಇಂಡಿಯಾ, 2ನೇ ಇನ್ನಿಂಗ್ಸ್ ಆರಂಭಿಸಿದೆ. ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಉತ್ತಮ ಆರಂಭ ಒದಗಿಸುವ ಸೂಚನೆ ನೀಡಿದ್ದಾರೆ.  2ನೇ ಟೆಸ್ಟ್ ಪಂದ್ಯ ಗೆಲುವಿಗೆ ಟೀಂ ಇಂಡಿಯಾಗೆ ಸುವರ್ಣ ಅವಕಾಶ ಒಲಿದು ಬಂದಿದೆ. ಈ ಮೂಲಕ ಮೊದಲ ಸೋಲಿಗೆ ತಿರುಗೇಟು ಹಾಗೂ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಲು ಟೀಂ ಇಂಡಿಯಾ ಲೆಕ್ಕಾಚಾರ ಹಾಕಿದೆ.

click me!