Hyderabad Test: ಭದ್ರತೆ ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿ ರೋಹಿತ್ ಶರ್ಮಾ ಕಾಲಿಗೆರಗಿದ ಅಭಿಮಾನಿ..! ವಿಡಿಯೋ ವೈರಲ್

By Naveen Kodase  |  First Published Jan 25, 2024, 5:38 PM IST

ತಮ್ಮ ಸ್ಪೋಟಕ ಬ್ಯಾಟಿಂಗ್ ಹಾಗೂ ಚಾಣಾಕ್ಷ ನಾಯಕತ್ವದ ಮೂಲಕ ದೇಶದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ರೋಹಿತ್ ಶರ್ಮಾ ಅವರಿಗೆ ಕಾಲಿಗೆ ಬೀಳಲು ಪೊಲೀಸ್ ಭದ್ರತೆಯನ್ನೇ ಉಲ್ಲಂಘಿಸಲು ಅಭಿಮಾನಿಯೊಬ್ಬ ಹಿಂದೆ-ಮುಂದೆ ನೋಡಲಿಲ್ಲ.


ಹೈದರಾಬಾದ್(ಜ.25): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಅನಿರೀಕ್ಷಿತ ಘಟನೆಯೊಂದಕ್ಕೆ ಇಲ್ಲಿನ ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸಾಕ್ಷಿಯಾಯಿತು. ಭಾರತ ಕ್ರಿಕೆಟ್ ತಂಡದ ಹುಚ್ಚು ಅಭಿಮಾನಿಯೊಬ್ಬ ಮೈದಾನದ ಭದ್ರತೆಯನ್ನು ಉಲ್ಲಂಘಿಸಿ, ಮೈದಾನಕ್ಕೆ ನುಗ್ಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪಾದಕ್ಕೆರಗಿದ ಘಟನೆ ನಡೆದಿದೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ತಮ್ಮ ಸ್ಪೋಟಕ ಬ್ಯಾಟಿಂಗ್ ಹಾಗೂ ಚಾಣಾಕ್ಷ ನಾಯಕತ್ವದ ಮೂಲಕ ದೇಶದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ರೋಹಿತ್ ಶರ್ಮಾ ಅವರಿಗೆ ಕಾಲಿಗೆ ಬೀಳಲು ಪೊಲೀಸ್ ಭದ್ರತೆಯನ್ನೇ ಉಲ್ಲಂಘಿಸಲು ಅಭಿಮಾನಿಯೊಬ್ಬ ಹಿಂದೆ-ಮುಂದೆ ನೋಡಲಿಲ್ಲ.

Tap to resize

Latest Videos

ಅಶ್ವಿನ್ ಜತೆ ಸೇರಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ರವಿಚಂದ್ರನ್ ಅಶ್ವಿನ್..!

ಹೀಗಿತ್ತು ನೋಡಿ ಆ ಕ್ಷಣ:

A fan touched the feet of Rohit Sharma.

- Rohit, crowd favourite ⭐pic.twitter.com/P2pYyCfw57

— Johns. (@CricCrazyJohns)

ಇನ್ನು ಕ್ರಿಕೆಟ್ ಪಂದ್ಯದ ಬಗ್ಗೆ ಹೇಳುವುದಾದರೇ, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಬಜ್‌ಬಾಲ್ ಆಟಕ್ಕೆ ಹೆಸರುವಾಸಿಯಾಗಿರುವ ಇಂಗ್ಲೆಂಡ್ ತಂಡಕ್ಕೆ ಆರಂಭಿಕರಾದ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಸ್ಪೋಟಕ ಆರಂಭ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಮೊದಲ ವಿಕೆಟ್‌ಗೆ 11 ಓವರ್‌ಗಳಲ್ಲಿ 50+ ರನ್ ಜತೆಯಾಟವಾಡಿದರು. ಆದರೆ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. 

ವಿಶ್ವ ನಂ.1 ಸೂರ್ಯಕುಮಾರ್‌ ಯಾದವ್ ಐಸಿಸಿ ಟಿ20 ವರ್ಷದ ಕ್ರಿಕೆಟಿಗ

ಇದಾದ ಬಳಿಕ ಇಂಗ್ಲೆಂಡ್ ತಂಡವು ಪದೇ ಪದೇ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ನಾಯಕ ಬೆನ್ ಸ್ಟೋಕ್ಸ್ 70 ರನ್ ಸಿಡಿಸಿದ್ದು ಬಿಟ್ಟರೆ, ಉಳಿದ್ಯಾವ ಬ್ಯಾಟರ್‌ಗಳು 40+ ರನ್ ಬಾರಿಸಲು ಯಶಸ್ವಿಯಾಗಲಿಲ್ಲ. 

ಟೀಂ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು.

click me!