ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರವಾಸಿ ಇಂಗ್ಲೆಂಡ್ ಎದುರು ಗೆಲುವಿನತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದು, ಆತಿಥೇಯರು ಬೃಹತ್ ಮೊತ್ತದತ್ತ ದಾಪುಗಾಲಿಡಲಾರಂಭಿಸಿದೆ. ಮೂರನೇ ದಿನದಾಟದ ಊಟದ ವಿರಾಮದ ವೇಳೆಗೆ ಟೀಂ ಇಂಡಿಯಾ 351 ರನ್‌ಗಳ ಮುನ್ನಡೆ ಸಾಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಚೆನ್ನೈ(ಫೆ.15): ವಿಚಿತ್ರವಾಗಿ ವರ್ತಿಸುತ್ತಿರುವ ಸ್ಪಿನ್ ಪಿಚ್‌ನ ಎರಡನೇ ಇನಿಂಗ್ಸ್‌ನಲ್ಲೂ ಟೀಂ ಇಂಡಿಯಾ ಗೌರವಾನ್ವಿತ ಮೊತ್ತ ಕಲೆಹಾಕುವ ನಿಟ್ಟಿನಲ್ಲಿ ದಿಟ್ಟಹೆಜ್ಜೆಯಿಟ್ಟಿದ್ದು, ಮೂರನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಭಾರತ ತಂಡ 6 ವಿಕೆಟ್ ಕಳೆದುಕೊಂಡು 156 ರನ್ ಬಾರಿಸಿದ್ದು, ಒಟ್ಟಾರೆ 351 ರನ್‌ಗಳ ಮುನ್ನಡೆ ಸಾಧಿಸಿದೆ.
ಹೌದು, ಎರಡನೇ ದಿನದಾಟದಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು 54 ರನ್ ಬಾರಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟದಾರಂಭದಲ್ಲೇ ತನ್ನ ಖಾತೆಗೆ ಒಂದು ರನ್ ಸೇರಿಸುವಷ್ಟರಲ್ಲಿ ಚೇತೇಶ್ವರ್ ಪೂಜಾರ ರನೌಟ್ ಆಗಿ ಪೆವಿಲಿಯನ್ ಸೇರಿದರು. ತಂಡ 86 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿದ್ದರು. ಪೂಜಾರ 7, ಪಂತ್ 8 ಹಾಗೂ ಅಜಿಂಕ್ಯ ರಹಾನೆ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
undefined
INDvENG: 2ನೇ ದಿನವೂ ಮೇಲುಗೈ, ಬೃಹತ್ ಮುನ್ನಡೆಯತ್ತ ಟೀಂ ಇಂಡಿಯಾ!
Lunch in Chennai 🍲
R Ashwin and Virat Kohli have taken India’s lead to 351.
How many more will the hosts add? ➡️ https://t.co/DSmqrU68EB pic.twitter.com/m8Ze2jDMmn
ಆಸರೆಯಾದ ಕೊಹ್ಲಿ-ಅಶ್ವಿನ್: ಒಂದು ಹಂತದಲ್ಲಿ 106 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಅಸರೆಯಾಗಿದ್ದಾರೆ. 7ನೇ ವಿಕೆಟ್‌ಗೆ ಈ ಜೋಡಿ ಮುರಿಯದ 50 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಅಸರೆಯಾದರು. ನಾಯಕ ವಿರಾಟ್ ಕೊಹ್ಲಿ 38 ರನ್ ಬಾರಿಸಿದರೆ, ರವಿಚಂದ್ರನ್ ಅಶ್ವಿನ್ 34 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.