ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎಜ್‌ಬಾಸ್ಟನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 587 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಇನ್ನು ಎರಡನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿದ್ದು, ಇನ್ನೂ 510 ರನ್‌ಗಳ ಹಿನ್ನಡೆಯಲ್ಲಿದೆ. ಇದೀಗ ಮೂರನೇ ದಿನದಾಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

04:54 PM (IST) Jul 04
ದಶಕಗಳ ಟೆಸ್ಟ್ ಕ್ರಿಕೆಟ್ ನಡುವೆಯೂ, ಈ ಐದು ಪ್ರಸಿದ್ಧ ಮೈದಾನಗಳಲ್ಲಿ ಭಾರತ ಇನ್ನೂ ಗೆಲುವಿನ ನಗೆ ಬೀರಿಲ್ಲ. ಈ ಪೈಕಿ ಒಂದು ಮೈದಾನದಲ್ಲಿ 2025ರ ಇಂಗ್ಲೆಂಡ್ ಸರಣಿಯ ಪಂದ್ಯ ನಡೆಯುತ್ತಿದೆ.
04:44 PM (IST) Jul 04
04:00 PM (IST) Jul 04
ಬರ್ಮಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿ ಟೂರ್ನಿಯ ಎರಡನೇ ಪಂದ್ಯವು ರೋಚk ಹಂತದತ್ತ ದಾಪುಗಾಲಿಡುತ್ತಿದೆ. ಇದರ ನಡುವೆ ಆಲ್ರೌಂಡರ್ ರವೀಂದ್ರ ಜಡೇಜಾ, ತಂಡದ ಹಿತಕ್ಕಾಗಿ ಬಿಸಿಸಿಐ ನಿಯಮ ಉಲ್ಲಂಘಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ.
02:04 PM (IST) Jul 04
ಬರ್ಮಿಂಗ್‌ಹ್ಯಾಮ್: ಭಾರತ & ಇಂಗ್ಲೆಂಡ್ ನಡುವಿನ ಎಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಆಕರ್ಷಕ ದ್ವಿಶತಕ ಹಾಗೂ ಎಡಗೈ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ & ರವೀಂದ್ರ ಜಡೇಜಾ ಸಮಯೋಚಿತ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿದೆ. ಇನ್ನು ಜಡೇಜಾ ಯಾರೂ ಮಾಡದ ದಾಖಲೆ ನಿರ್ಮಿಸಿದ್ದಾರೆ.
01:22 PM (IST) Jul 04
ಶುಭ್‌ಮನ್ ಗಿಲ್ ಅವರ ಚೊಚ್ಚಲ ದ್ವಿಶತಕದ ನೆರವಿನಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಗಳಿಸಿದೆ. ಇಂಗ್ಲೆಂಡ್ ತಂಡವು ಭಾರತದ ಬೃಹತ್ ಮೊತ್ತದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಗಿಲ್ ಅವರ ದಾಖಲೆಯ ದ್ವಿಶತಕ ಭಾರತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ.
01:16 PM (IST) Jul 04
ಭಾರತ ಟೆಸ್ಟ್ ತಂಡದ ನಾಯಕ ಶುಭ್‌ಮನ್ ಗಿಲ್, ಇಂಗ್ಲೆಂಡ್ ಎದುರಿನ ಎಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.