ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ; ಇಂಗ್ಲೆಂಡ್‌ಗೆ ಸ್ಪರ್ಧಾತ್ಮಗ ಗುರಿ ನೀಡಿದ ಭಾರತ!

Published : Mar 16, 2021, 08:52 PM IST
ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ; ಇಂಗ್ಲೆಂಡ್‌ಗೆ ಸ್ಪರ್ಧಾತ್ಮಗ ಗುರಿ ನೀಡಿದ ಭಾರತ!

ಸಾರಾಂಶ

ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೆ ಕೊಹ್ಲಿ ಹೋರಾಟದಿಂದ ಟೀಂ ಇಂಡಿಯಾ, ಇಂಗ್ಲೆಂಡ್‌ಗೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದೆ.

ಅಹಮ್ಮದಾಬಾದ್(ಮಾ.16):  ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ವೈಫಲ್ಯ ತಂಡಕ್ಕೆ ಹಿನ್ನಡೆಯಾಗಿದೆ. ನಾಯಕ ವಿರಾಟ್ ಕೊಹ್ಲಿಯ ಏಕಾಂಗಿ ಹೋರಾಟದಿಂದ ಭಾರತ ವಿಕೆಟ್ 6 ನಷ್ಟಕ್ಕೆ 156 ರನ್ ಸಿಡಿಸಿದೆ.

ಬ್ಯಾಟಿಂಗ್ ಸಕ್ಸಸ್‌ ಸೀಕ್ರೇಟ್‌ ಬಿಚ್ಚಿಟ್ಟ ಕಿಂಗ್‌ ಕೊಹ್ಲಿ..!.

ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ ಬದಲು ತಂಡ ಸೇರಿಕೊಂಡ ರೋಹಿತ್ ಶರ್ಮಾ 15 ರನ್ ಸಿಡಿಸಿ ನಿರ್ಗಮಿಸಿದರು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ ಇಶಾನ್ ಕಿಶನ್ ಕೇವಲ 4 ರನ್ ಸಿಡಿಸಿ ಔಟಾದರು.

ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ಆರಂಭಿಸಿದರು. ಇತ್ತ ರಿಷಬ್ ಪಂತ್ 25 ರನ್ ಸಿಡಿಸಿ ಔಟಾದರು. ಶ್ರೇಯರ್ ಅಯ್ಯರ್ ಕೇವಲ 9 ರನ್ ಸಿಡಿಸಿ ಔಟಾದರು. ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಜೊತೆ ಸೇರಿದ ಕೊಹ್ಲಿ, ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಕೊಹ್ಲಿ ಅಜೇಯ 77 ರನ್ ಸಿಡಿಸಿದರೆ, ಪಾಂಡ್ಯ 17 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 156 ರನ್ ಸಿಡಿಸಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?